ಒಂದೇ ದಿನ 6,654 ಕೇಸ್; ದೇಶದಲ್ಲಿ ಸೋಂಕಿತರ ಹೊಸ ದಾಖಲೆ ಸೃಷ್ಟಿ
Team Udayavani, May 24, 2020, 5:45 AM IST
ಕೋವಿಡ್-19 ಸೋಂಕಿತರ ಸಂಖ್ಯೆಗೆ ಸಂಬಂಧಿಸಿ ದೇಶದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಕೇವಲ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6,654 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 137 ಮಂದಿ ಸಾವಿಗೀಡಾಗಿದ್ದಾರೆ. ಒಂದೇ ದಿನದಲ್ಲಿ ಇಷ್ಟೊಂದು ಮಂದಿಗೆ ಸೋಂಕು ದೃಢಪಟ್ಟಿರುವುದು ಇದೇ ಮೊದಲು. ಅಲ್ಲದೆ, ಕಳೆದೊಂದು ವಾರದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಹೊಸ ಪ್ರಕರಣ ವರದಿ ಯಾಗುತ್ತಿರುವುದು ಇದು 5ನೇ ಬಾರಿ. ಈ ಅವಧಿಯಲ್ಲಿ ಸುಮಾರು 35 ಸಾವಿರ ಹೊಸ ಸೋಂಕಿತರು ಪತ್ತೆಯಾಗಿದ್ದು, ಕೋವಿಡ್-19 ವ್ಯಾಪಿಸುವಿಕೆಗೆ ಕಡಿವಾಣ ಹಾಕುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಮೇ 17ರಂದು ದೇಶದಲ್ಲಿ 4,987 ಪ್ರಕರಣ ದೃಢಪಟ್ಟರೆ, 18ರಂದು 5,242, 20ರಂದು 5,611, 22ರಂದು 6,088 ಹಾಗೂ 23ರಂದು 6,654 ಮಂದಿಗೆ ಸೋಂಕು ತಗುಲಿದೆ. ಹೀಗೆ, ಮೇ 19 (4,970) ಮತ್ತು 21 (5,609) ಹೊರತುಪಡಿಸಿದರೆ ಉಳಿದ 5 ದಿನಗಳಲ್ಲಿ ಪ್ರತಿದಿನದ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಸೃಷ್ಟಿಯಾಗಿದೆ. ಮಹಾರಾಷ್ಟ್ರವೊಂದರಲ್ಲೇ ಶುಕ್ರವಾರ ಬೆಳಗ್ಗೆ 8ರಿಂದ ಶನಿವಾರ ಬೆಳಗ್ಗೆ 8ರವರೆಗೆ 6,654 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನು ತಮಿಳುನಾಡಿನಲ್ಲೂ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ಒಂದೇ ದಿನ 5 ಮಂದಿ ಮೃತಪಟ್ಟು, 710 ಹೊಸ ಪ್ರಕರಣ ಪತ್ತೆಯಾಗಿದೆ.
ಇದೇ ವೇಳೆ, ಕಳೆದ 5 ದಿನಗಳಲ್ಲಿ ಸತತವಾಗಿ ದಿನಕ್ಕೆ 1 ಲಕ್ಷ ಸ್ಯಾಂಪಲ್ ಗಳನ್ನು ಪರೀಕ್ಷಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಮಾರ್ಚ್ ನಲ್ಲಿ ದಿನಕ್ಕೆ 1 ಸಾವಿರ ಪರೀಕ್ಷೆ ನಡೆಸಲಾಗುತ್ತಿತ್ತು, ಆ ಸಂಖ್ಯೆ ಈಗ 1 ಲಕ್ಷಕ್ಕೇರಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ