Theft: ಮನೆಗೆ ನುಗ್ಗಿ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, Aug 9, 2023, 11:00 PM IST
ಮಲ್ಪೆ: ಕಿನ್ನಿಮೂಲ್ಕಿಯ ವೆಂಕಟೇಶ್ ಶೆಣೈ ಅವರ ಮನೆಗೆ ಆ. 8ರಂದು ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವುಗೈದಿದ್ದಾರೆ.
ವೆಂಕಟೇಶ್ ಶೆಣೈ ಅವರ ಪತ್ನಿ ಮನೆಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದರು. ವೆಂಕಟೇಶ್ ಶೆಣೈ ಅವರು ಸಂಜೆ ಕೆಲಸ ಮುಗಿಸಿ ವಾಪಸು ಬಂದಾಗಲೇ ವಿಷಯ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಒಳನುಗ್ಗಿದ ಕಳ್ಳರು ಕಪಾಟಿನ ಬೀಗ ಮುರಿದು 30 ಗ್ರಾಂನ ಹವಳದ ಸರ, 20 ಗ್ರಾಂನ ನೆಕ್ಲೆಸ್, 24 ಗ್ರಾಂನ 2 ಬಳೆ, 40 ಗ್ರಾಂನ 2 ಸರ, 24 ಗ್ರಾಂನ ಕೈ ಕಡಗ, 4 ಗ್ರಾಂನ ಉಂಗುರ 8 ಗ್ರಾಂನ ಚಿನ್ನದ ನಾಣ್ಯ, 8 ಗ್ರಾಂನ ಓಲೆ, 5 ಗ್ರಾಂನ ಬೆಳ್ಳಿಯ ಕಾಲು ಚೈನ್, ಒಟ್ಟು 160 ಗ್ರಾಂನ ಚಿನ್ನ, 5 ಗ್ರಾಂನ ಬೆಳ್ಳಿಯ ಆಭರಣಗಳನ್ನು ಕಳವು ಮಾಡಲಾಗಿದೆ. ಕಳವಾದ ಸೊತ್ತಿನ ಒಟ್ಟು ಮೌಲ್ಯ 8,03,500 ರೂ. ಎಂದು ಅಂದಾಜಿಸಲಾಗಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
4 ವರ್ಷ ಪೂರ್ಣಗೊಳ್ಳದೆ ಎಲ್ಕೆಜಿ ಪ್ರವೇಶವಿಲ್ಲ
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MUST WATCH
ಹೊಸ ಸೇರ್ಪಡೆ
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ