Telangana: ಪ್ರಚಾರಕ್ಕೆ ಬಿದ್ದ ತೆರೆ- ಮತದಾರರ ಮನವೊಲಿಕೆಗೆ ಬಿರುಸಿನ ಪ್ರಯತ್ನ


Team Udayavani, Nov 29, 2023, 12:48 AM IST

telangana politi

ಹೈದರಾಬಾದ್‌: ಪಂಚರಾಜ್ಯಗಳ ಚುನಾವಣೆ ಪೈಕಿ ಕೊನೆಯ ಹಂತದಲ್ಲಿ, ನ.30ರಂದು ಮತದಾನ ನಡೆಯಲಿರುವ ತೆಲಂಗಾಣದಲ್ಲಿ ಮಂಗಳವಾರ ಬಹಿರಂಗ ಪ್ರಚಾರ ಮುಕ್ತಾಯವಾಗಿದೆ. ಕೊನೆಯ ಕ್ಷಣದಲ್ಲಿ ಆಡಳಿತಾರೂಡ ಬಿಆರ್‌ಎಸ್‌, ಕಾಂಗ್ರೆಸ್‌, ಬಿಜೆಪಿ, ಜನಸೇನಾ ಪಕ್ಷದ ಅಗ್ರೇಸರ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಪ್ರಮುಖರು ಬಿರುಸಿನ ಪ್ರಚಾರ ನಡೆಸಿದ್ದರು.

ಇದೇ ವೇಳೆ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೆಲಂಗಾಣದ ಜನರು ನಮ್ಮ ಪಕ್ಷಕ್ಕೇ ಮತ ಚಲಾಯಿಸಬೇಕು.. ಈ ಮೂಲಕ ರಾಜ್ಯದಲ್ಲಿ ಬದಲಾವಣೆ ತರಲು ನೆರವಾಗಬೇಕು ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ತೆಲಂಗಾಣದ ಜನರು ತಮಗೆ ಮತ್ತು ಕಾಂಗ್ರೆಸ್‌ಗೆ ತೋರಿದ ಪ್ರೀತಿಯ ಬಗ್ಗೆ ಋಣಿಯಾಗಿರುವುದಾಗಿ ಸೋನಿಯಾ ಹೇಳಿಕೊಂಡಿದ್ದಾರೆ. “ನೀವು ನನ್ನನ್ನು ಸೋನಿಯಾ ಅಮ್ಮಾ ಎಂದು ಕರೆದು ಗೌರವ ಸಲ್ಲಿಸಿದ್ದೀರಿ. ಅದಕ್ಕಾಗಿ ಯಾವತ್ತೂ ಋಣಿಯಾಗಿರುವೆ. ಪ್ರಚಾರಕ್ಕಾಗಿ ಬರಲು ಸಾಧ್ಯವಾಗಲಿಲ್ಲ. ಆದರೆ, ನೀವೆಲ್ಲರೂ ನನ್ನ ಹೃದಯಕ್ಕೆ ಹತ್ತಿರವಾಗಿದ್ದೀರಿ’ ಎಂದು ತಿಳಿಸಿದ್ದಾರೆ.

ದೇಶದಲ್ಲಿ ದ್ವೇಷ ಕೊನೆಗೊಳಿಸುವೆ: ದೇಶದಲ್ಲಿ ದ್ವೇಷದ ವಾತಾವರಣ ಕೊನೆಗೊಳಿಸುವೆ ಎಂದು ವಯನಾಡ್‌ ಸಂಸದ ರಾಹುಲ್‌ ಗಾಂಧಿ ತೆಲಂಗಾಣದ ನಾಂಪಳ್ಳಿ ಎಂಬಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಹೇಳಿದ್ದಾರೆ. ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಬೇಕು ಎಂದರು..

“ಭಾರತ್‌ ಜೋಡೋ ಯಾತ್ರೆಯ ಅವಧಿಯಲ್ಲಿ ಕಾಂಗ್ರೆಸ್‌ ದ್ವೇಷದ ಮಾರುಕಟ್ಟೆಯಲ್ಲಿ ಪ್ರೇಮದ ಮಳಿಗೆ ಎಂಬ ಹೊಸ ಪದ ರೂಪಿಸಿತು. ಮೊದಲ ಬಾರಿಗೆ ಮಾನನಷ್ಟ ವಿಚಾರದಲ್ಲಿ ಮೊದಲ ಬಾರಿಗೆ ಲೋಕಸಭೆಯ ಸದಸ್ಯತ್ವವನ್ನು ರದ್ದು ಮಾಡಲಾಯಿತು’ ಎಂದರು. ನನ್ನ ವಿರುದ್ಧ ಇ.ಡಿ ಮತ್ತು ಸಿಬಿಐ ಯಾವತ್ತೂ ಸುತ್ತುತ್ತಿರುತ್ತವೆ. ಆದರೆ, ಸಂಸದ ಅಸಾದುದ್ದೀನ್‌ ಒವೈಸಿ ವಿರುದ್ಧ ಯಾಕೆ ತನಿಖಾ ಸಂಸ್ಥೆಗಳು ದನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಅಭಿವೃದ್ಧಿ; ಹುದ್ದೆಯಲ್ಲ: ನನಗೆ ರಾಜ್ಯದ ಅಭಿವೃದ್ಧಿಯೇ ಆದ್ಯತೆಯೇ ಹೊರತು ಹುದ್ದೆಯಲ್ಲ ಎಂದು ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಹೇಳಿದ್ದಾರೆ. ಗಜ್ವೆಲ್‌ ಮತ್ತು ವರಂಗಲ್‌ಗ‌ಳಲ್ಲಿ ಅವರು ಮಾತನಾಡಿದರು. ಇಂದಿರಾ ಗಾಂಧಿ ಮಾದರಿ ಆಡಳಿತ ಜಾರಿಗೊಳಿಸುತ್ತೇವೆ ಎಂಬ ಕಾಂಗ್ರೆಸ್‌ ವಾಗ್ಧಾನ ಟೀಕಿಸಿದರು. ಇಂದಿರಾ ಅವಧಿಯಲ್ಲಿ ಎನ್‌ಕೌಂಟರ್‌, ಕೊಲೆಗಳು ನಡೆದಿವೆ. ಕಾಂಗ್ರೆಸ್‌ ಗೆದ್ದರೆ ನಮ್ಮ ರಾಜ್ಯದಲ್ಲಿ ಅದು ಪುನರಾವರ್ತನೆ ಆಗಲಿದೆ ಎಂದು ದೂರಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.