ಮದ್ರಾಸ್ ಐಐಟಿಯಲ್ಲಿ ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
Team Udayavani, Feb 14, 2023, 5:50 PM IST
ಚೆನ್ನೈ: ಮುಂಬೈ ಐಐಟಿಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಇದೀಗ ಮದ್ರಾಸ್ ಐಐಟಿಯಲ್ಲೂ ವಿದ್ಯಾರ್ಥಿಯೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮದ್ರಾಸ್ ಐಐಟಿಯಲ್ಲಿ ಮಹಾರಾಷ್ಟ್ರ ಮೂಲದ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ತನ್ನ ಹಾಸ್ಟೆಲ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತೀವ್ರ ಒತ್ತಡದಿಂದಾಗಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಕಳೆದ ಭಾನುವಾರದಂದು ಮುಂಬೈ ಐಐಟಿಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ 8 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ಕೆಲವೇ ದಿನಗಳ ಅಂತರದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.