ಟ್ರಕ್‌ ಢಿಕ್ಕಿ ಹೊಡೆದು ಯುವಕ ಸಾವು- ಅಂಗಾಂಗ ದಾನ


Team Udayavani, Aug 4, 2023, 1:17 AM IST

dona

ಕಾಪು: ಟ್ರಕ್‌ ಢಿಕ್ಕಿ ಹೊಡೆದು ಮಿದುಳು ನಿಷ್ಕ್ರಿಯಗೊಂಡು ಮಣಿ ಪಾಲ ಆಸ್ಪತ್ರೆಗೆ ದಾಖಲಾ ಗಿದ್ದ ಉದ್ಯಾವರ ಬೋಳಾರ ಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್‌ (37) ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಮನೆಯವರು ಮಾನವೀಯತೆ ಮೆರೆದಿದ್ದಾರೆ.

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕನ್ನಿ ಪಾರ್ಟಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್‌ ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಹಲೀಮಾ

ಸಾಬು ಸಭಾಭವನದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಟ್ರಕ್‌ ಢಿಕ್ಕಿ ಹೊಡೆದು ರಸ್ತೆ ಬದಿ ಬಿದ್ದಿದ್ದರು.

ತಲೆಗೆ ತೀವ್ರ ಗಾಯಗೊಂಡಿದ್ದ ಅವರನ್ನು ಮಿತ್ರರಾದ ಪ್ರವೀಣ್‌ ಮತ್ತು ಅಭಿಷೇಕ್‌ ಅವರು ಸ್ಥಳೀಯರ ಸಹಾಯದಿಂದ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರ ಸೂಚನೆಯಂತೆ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿದ್ದರು. ತಲೆಗೆ ತೀವ್ರ ಪೆಟ್ಟಾಗಿದ್ದ ಅವರ ಮೆದುಳು ನಿಷ್ಟ್ರಿಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟರು.

ವೈದ್ಯರಿಂದ ಮಾಹಿತಿ
ಆಸ್ಪತ್ರೆಯ ವೈದ್ಯರು ಮೃತರ ಸಂಬಂಧಿಕರಿಗೆ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದ್ದರು. ಮೃತರ ಸಹೋದರಿ ಪ್ರಮೀಳಾ ಅವರು ಸಹೋದರನ ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಇತರ ರೋಗಿಗಳ ಜೀವ ಉಳಿಸುವ ವೈದ್ಯರ ಸಲಹೆಗೆ ಪೂರಕವಾಗಿ ಸ್ಪಂದಿಸಿದ್ದಾರೆ.

ಅವಿವಾಹಿತರಾಗಿದ್ದ ಪ್ರಶಾಂತ್‌ ಅವರು ತಾಯಿ ಮತ್ತು ಸಹೋದರಿ ಯನ್ನು ಅಗಲಿದ್ದಾರೆ. ಅಂಕುದ್ರುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಅವರ ಕುಟುಂಬಕ್ಕೆ ಪ್ರಶಾಂತ್‌ ಅವರ ಸಂಪಾದನೆಯೇ ಆದಾಯದ ಮೂಲವಾಗಿತ್ತು. ಅಪಘಾತಕ್ಕೆ ಕಾರಣನಾದ ಟ್ರಕ್‌ ಚಾಲಕ ಬಿ. ಜಗನ್ನಾಥ ಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀ ಸರು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.

ಮೃತ ಯುವಕನ ಕಿಡ್ನಿ ಮತ್ತು ಲಿವರ್‌ ಅನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರ ಮೂಲಕ ಸುರಕ್ಷಿತವಾಗಿ ತೆಗೆದು ಮಂಗಳೂರು ಮತ್ತು ಬೆಂಗಳೂರಿಗೆ ಸಾಗಿಸಲಾಗಿದೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.