BJP: ವಿಪಕ್ಷ ನಾಯಕರ ನೇಮಕ ಮಾಡದಿದ್ದರೆ ಅಧಿವೇಶನಕ್ಕೆ ಗೈರು?

ಕೇಂದ್ರ ವರಿಷ್ಠರ ಬಗ್ಗೆ ಬಿಜೆಪಿ ಶಾಸಕರ ಅಸಮಾಧಾನ- ಸದನದಲ್ಲಿ ಆಡಳಿತ ಪಕ್ಷದಿಂದ ಮುಜುಗರ

Team Udayavani, Nov 1, 2023, 10:37 PM IST

BJP FLAG 1

ಬೆಂಗಳೂರು: ಬೆಳಗಾವಿಯ ಚಳಿಗಾಲದ ವಿಧಾನಮಂಡಲ ಅಧಿವೇಶನದ ವೇಳೆಗೆ ಪ್ರತಿಪಕ್ಷ ನಾಯಕರ ಆಯ್ಕೆಯಾಗದಿದ್ದರೆ ನಾವು ಅಧಿವೇಶನಕ್ಕೆ ಗೈರಾಗಬೇಕಾಗುತ್ತದೆ ಎಂದು ಅತೃಪ್ತಿ ವ್ಯಕ್ತಪಡಿಸಿರುವ ಬಿಜೆಪಿ ಶಾಸಕರು, ಕೇಂದ್ರ ವರಿಷ್ಠರ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ  ಮಂಗಳವಾರ ನಡೆದ ಬೆಂಗಳೂರು ಶಾಸಕರ ಸಭೆಯಲ್ಲಿ  ಈ ಅಭಿಪ್ರಾಯ ವ್ಯಕ್ತವಾಗಿದೆ. ಆದಷ್ಟು ಬೇಗ ಈ ಸಂವಿಧಾನಾತ್ಮಕ ಹುದ್ದೆಗೆ ಅರ್ಹರನ್ನು ನೇಮಕ ಮಾಡಬೇಕು. ವಿಪಕ್ಷ ನಾಯಕನೇ ಇಲ್ಲದೇ ಸದನಕ್ಕೆ ಹಾಜರಾಗುವುದು ಅಥವಾ ಕಲಾಪದಲ್ಲಿ ಹೋರಾಟ ನಡೆಸುವುದು ಮುಜುಗರದ ವಾತಾವರಣ ಸೃಷ್ಟಿಸುತ್ತದೆ. ಈ ಬಾರಿಯೂ ಆಗದಿದ್ದರೆ ಬೆಳಗಾವಿ ಅಧಿವೇಶನಕ್ಕೆ ನಾವು ಗೈರಾಗಬೇಕಾಗುತ್ತದೆ. ಈ ಮಾಹಿತಿಯನ್ನು ನೀವು ವರಿಷ್ಠರಿಗೆ ರವಾನೆ ಮಾಡಿ ಎಂದು ಶಾಸಕರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ನಾವು ವರಿಷ್ಠರಿಗೆ ವಿರುದ್ಧವಲ್ಲ. ಆದರೆ ವಿಧಾನಸಭೆ ಚುನಾವಣೆ ಮುಗಿದು ಆರು ತಿಂಗಳಾಗುತ್ತಾ ಬಂದಿದೆ. ಆಡಳಿತ ಪಕ್ಷದವರು ಸದನದ ಒಳಗೆ ಮತ್ತು ಹೊರಗೆ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡುವ ಯೋಗ್ಯತೆ ಇಲ್ಲದವರು ಎಂದು ನಮ್ಮನ್ನು ಟೀಕಿಸುತ್ತಿದ್ದಾರೆ. ಸರ್ಕಾರದ ಯಾವ ವೈಫ‌ಲ್ಯವನ್ನು ಬಹಿರಂಗಪಡಿಸಲು ಹೋದರೂ ಈ  ಪ್ರಶ್ನೆ ಮುಂದಿಟ್ಟು ನಮ್ಮ ಬಾಯಿ  ಮುಚ್ಚಿಸುತ್ತಾರೆ. ಎಷ್ಟು ದಿನಗಳ ಕಾಲ ಈ ಅಪಮಾನ ಸೈರಿಸಿಕೊಳ್ಳಲು ಸಾಧ್ಯ? ಎಂದು ಶಾಸಕರು ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಹಿಂದೆ ನಾನು ದೆಹಲಿಗೆ ಭೇಟಿ ನೀಡಿದ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ  ಅವರಿಗೆ ಈ ಸಂಬಂಧ ಮನವಿ ಮಾಡಿ¨ªೆ. ಎಷ್ಟು ಸಾಧ್ಯವೋ ಅಷ್ಟು ಬೇಗ ಆಯ್ಕೆ ಮಾಡುವ ಆಶ್ವಾಸನೆ ಕೊಟ್ಟಿದ್ದರು. ಆದರೂ ಈಗಲೂ ಮಾಡದಿರುವುದು ವೈಯಕ್ತಿಕವಾಗಿ ನನಗೂ ಬೇಸರ ತಂದಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಮಾಸಾಂತ್ಯಕ್ಕೆ ಪ್ರಕ್ರಿಯೆ ಮುಗಿಯಲಿ

ಶಾಸಕರು ನವೆಂಬರ್‌ ಅಂತ್ಯದೊಳಗೆ ಈ ಪ್ರಕ್ರಿಯೆ ಮುಗಿಯದಿದ್ದರೆ ಬೆಳಗಾವಿ ಅವೇಶನಕ್ಕೆ ನಾವು ಹೋಗುವುದೇ ಇಲ್ಲ. ನಮ್ಮನ್ನು ಮುಜುಗರ ಮಾಡಬೇಕೆಂಬ ಉದ್ದೇಶ ರಾಷ್ಟ್ರೀಯ ನಾಯಕರಿಗಿದ್ದರೆ ನಾವು ಏನೂ ಮಾಡಲು ಆಗುವುದಿಲ್ಲ ಎಂದು ಮರಳಿ ಪಟ್ಟು ಹಿಡಿದಿದ್ದಾರೆ. ಆದರೆ ಶಾಸಕರು ಈ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು. ವರಿಷ್ಠರು ಪಂಚರಾಜ್ಯಗಳ ಚುನಾವಣೆಯಲ್ಲಿ ಮಗ್ನರಾಗಿದ್ದಾರೆ. ಎಲ್ಲವೂ ಸುಖಾಂತ್ಯವಾಗುತ್ತದೆ. ಸದ್ಯದಲ್ಲೇ ನಾನು ದೆಹಲಿಗೆ ತೆರಳಿ ವರಿಷ್ಠರಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆಂದು ಯಡಿಯೂರಪ್ಪ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.