ಕೇರಳ ಚಲನಚಿತ್ರ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಅಡೂರ್ ಗೋಪಾಲಕೃಷ್ಣನ್ ರಾಜೀನಾಮೆ
Team Udayavani, Jan 31, 2023, 11:02 PM IST
ತಿರುವನಂತಪುರ: ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತ ಚಿತ್ರ ನಿರ್ದೇಶಕ ಅಡೂರ್ ಗೋಪಾಲಕೃಷ್ಣನ್ ಅವರು ಕೇರಳ ಚಲನಚಿತ್ರ ಸಂಸ್ಥೆ “ಕೆ.ಆರ್.ನಾರಾಯಣ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವಿಶುವಲ್ ಸೈನ್ಸ್ ಆ್ಯಂಡ್ ಆರ್ಟ್ಸ್’ನ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಕೆಲವು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಿಂದ ಜಾತಿ ತಾರತಮ್ಯದ ದೂರಿನ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ಶಂಕರ್ ಮೋಹನ್ ರಾಜೀನಾಮೆ ನೀಡಿದ ಬೆನ್ನಲ್ಲೆ ಈ ಬೆಳವಣಿಗೆ ನಡೆದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅಡೂರ್ ಗೋಪಾಲಕೃಷ್ಣನ್, “ಇದನ್ನು ದೇಶದಲ್ಲೇ ಅತ್ಯುತ್ತಮ ಚಿತ್ರ ಸಂಸ್ಥೆಗಳಲ್ಲಿ ಒಂದಾಗಿಸಲು ಮೋಹನ್ ಅವರು ನಮ್ಮೊಂದಿಗೆ ಕಳೆದ 3 ವರ್ಷಗಳಿಂದ ಶ್ರದ್ಧೆಯಿಂದ ಕೆಲಸ ಮಾಡಿದ್ದರು. ಅವರ ವಿರುದ್ಧ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಹೊರಿಸಿ ಬಲವಂತವಾಗಿ ಅವರು ರಾಜೀನಾಮೆ ನೀಡುವಂತೆ ಮಾಡಲಾಗಿದೆ,’ ಎಂದು ದೂರಿದರು.