7 ವರ್ಷದ ಮಗಳಿಗೇ ಇಕ್ಕುಳದಿಂದ ಸುಟ್ಟ ಮಲತಾಯಿ
Team Udayavani, Feb 17, 2023, 11:36 AM IST
ದೆಹಲಿ: ಮಲತಾಯಿಯೇ ತನ್ನ 7 ವರ್ಷದ ಮಗಳನ್ನು ಇಕ್ಕುಳಗಳಿಂದ ಸುಟ್ಟ ದಾರುಣ ಘಟನೆ ದೆಹಲಿಯ ಆರ್.ಕೆ. ಪುರಂನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮಲತಾಯಿ ಹಾಗೂ ಆಕೆಯ ಮಗನನ್ನು ಪೋಲಿಸರು ಬಂಧಿಸಿದ್ದಾರೆ.
50 ವರ್ಷ ವಯಸ್ಸಿನ ಮಲತಾಯಿ ಸ್ಥಳಿಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಕರಣದ ಸಂಬಂಧ ಆಕೆಯ ಮಗನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಬಾಲಕಿಯ ಜೈವಿಕ ಪೋಷಕರು ಮಲತಾಯಿಗೆ ಸಂಬಂಧಿಗಳಾಗಿದ್ದಾರೆ ಎಂದು ಪೋಲಿಸರು ಹೇಳಿದ್ದಾರೆ.
ಫೆ.9 ರಂದು ದೆಹಲಿಯ ಆರ್.ಕೆ. ಪುರಂ ಪೋಲಿಸ್ ಠಾಣೆಯಲ್ಲಿ ಬಾಲಕಿಗೆ ಮಲತಾಯಿಯೇ ಕಿರುಕುಳ ನೀಡುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಮಾಹಿತಿ ಆಧರಿಸಿ ಪರಿಶೀಲಿಸಿದಾಗ ಬಾಲಕಿಯ ಮೈಯಲ್ಲಿ ಸುಟ್ಟ ಗಾಯಗಳಿದ್ದವು. ಸದ್ಯಕ್ಕೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಮಕ್ಕಳ ಕಾಳಜಿ ಕೇಂದ್ರಕ್ಕೆ ಕಳುಹಿಸಲಾಗಿದೆ ಮತ್ತು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೋಲಿಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ