ಎ. 26ರ ‘ಸಪ್ತಪದಿ’ ಸಾಮೂಹಿಕ ವಿವಾಹ ಪ್ರಚಾರ ಅಭಿಯಾನಕ್ಕೆ ಸಿದ್ಧತೆ: ಕೋಟಾ ಶ್ರೀನಿವಾಸ ಪೂಜಾರಿ

ಫೆ. 13: ಕೊಲ್ಲೂರಿನಿಂದ ಹೊರಡಲಿದೆ ರಥಯಾತ್ರೆ ; ವಿವಾಹಕ್ಕೆ ಸಂಬಂಧಿಸಿದಂತೆ ಟೋಲ್‌ ಫ್ರೀ ದೂರವಾಣಿ ಸಂಖ್ಯೆ 18004256654

Team Udayavani, Feb 7, 2020, 9:12 PM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯ ಸರಕಾರ ರೂಪಿಸಿರುವ ಸಾಮೂಹಿಕ ಸರಳ ವಿವಾಹ ‘ಸಪ್ತಪದಿ’ ಬಗ್ಗೆ ಪ್ರಚಾರ ಕೈಗೊಳ್ಳಲು ಪ್ರಚಾರ ರಥ ಸಿದ್ಧಪಡಿಸಲಾಗಿದೆ. ರಾಜ್ಯದ ಹತ್ತು ಪ್ರಮುಖ ದೇವಾಲಯಗಳಿಂದ ಹೊರಡಲಿರುವ ರಥಯಾತ್ರೆಯು ಯೋಜನೆ ಕುರಿತು ಪ್ರಚಾರ ನಡೆಸಲಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 13ರಂದು ಕೊಲ್ಲೂರು ಮೂಕಾಂಬಿಕಾ ದೇವಾಸ್ಥಾನದಲ್ಲಿ ಪ್ರಚಾರ ಯಾತ್ರೆ ಉದ್ಘಾಟನೆಯಾಗಲಿದೆ. ವಾರ್ತಾ ಇಲಾಖೆ ಸಹಯೋಗದೊಂದಿಗೆ ರಾಜ್ಯಾದ್ಯಂತ 750 ಪ್ರಚಾರ ಫ‌ಲಕಗಳ ಮೂಲಕ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ರಾಜ್ಯದ ಆಯ್ದ 100 ಮುಜರಾಯಿ ದೇವಾಲಯಗಳಲ್ಲಿ ಎಪ್ರಿಲ್‌ 26ರಂದು ಸಪ್ತಪದಿ ಸಾಮೂಹಿಕ ವಿವಾಹ ನಡೆಯಲಿದ್ದು ಸಾಮೂಹಿಕ ವಿವಾಹಕ್ಕೆ ಸಂಬಂಧಿಸಿದಂತೆ ಟೋಲ್‌ ಫ್ರೀ ದೂರವಾಣಿ 18004256654 ಮೂಲಕ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.

ಯಾವ ಜಿಲ್ಲೆಗಳಲ್ಲಿ ಆದಾಯ ಇರುವ ಎ ವರ್ಗದ ದೇವಾಲಯಗಳು ಇಲ್ಲವೋ ಅಂತಹ ಜಿಲ್ಲೆಗಳಲ್ಲಿ ಬಿ ಅಥವಾ ಸಿ ದರ್ಜೆ ದೇವಸ್ಥಾನ ಆಯ್ಕೆ ಮಾಡಿಕೊಂಡು ಸಾಮೂಹಿಕ ವಿವಾಹ ಏರ್ಪಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಮಡಿಕೇರಿ, ಕೊಡಗು ಜಿಲ್ಲೆಗಳಿಗೆ ಭೇಟಿ ನೀಡಿ ಸಾಮೂಹಿಕ ವಿವಾಹ ಏರ್ಪಡಿಸಲು ನಿರ್ದೇಶನ ನೀಡಿದ್ದೇನೆ ಎಂದವರು ತಿಳಿಸಿದರು.

ರಾಜ್ಯಾದ್ಯಂತ ಮುಂದಿನ 2-3 ತಿಂಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕಾಗಿ ವಿಶೇಷ ನೋಡಲ್‌ ಅಧಿಕಾರಿಯನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ