ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮೈತ್ರಿ
Team Udayavani, May 9, 2019, 3:06 AM IST
ಬೆಂಗಳೂರು: ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಬಲ ಕುಗ್ಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ಗಳು ಆಯ್ದ ಕಡೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಜತೆ ಚರ್ಚಿಸಿದರು.
ಗೃಹ ಕಚೇರಿ ಕೃಷ್ಣಾಗೆ ಬುಧವಾರ ಆಗಮಿಸಿದ್ದ ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್ ಜತೆ ಸಿಎಂ ಈ ಕುರಿತು ಮಾತುಕತೆ ನಡೆಸಿದರು. ಎಲ್ಲೆಲ್ಲಿ ಚುನಾವಣೆ ನಡೆಯಲಿದೆಯೋ ಅಲ್ಲಿನ ಜಿಲ್ಲಾ ಹಾಗೂ ತಾಲೂಕು ಘಟಕಗಳ ಅಧ್ಯಕ್ಷರ ಜತೆ ಮಾತನಾಡಿ, ಸಾಧ್ಯವಿರುವ ಕಡೆ ಹೊಂದಾಣಿಕೆ ಅಭ್ಯರ್ಥಿ ಹಾಕುವ ಬಗ್ಗೆ ಸೂಚನೆ ನೀಡಬೇಕು ಎಂಬ ಬಗ್ಗೆ ಚರ್ಚೆಯಾಯಿತು ಎಂದು ಹೇಳಲಾಗಿದೆ.
63 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಕಡೆ ಕಾಂಗ್ರೆಸ್-ಜೆಡಿಎಸ್ ಸಾಧ್ಯವಾದರೆ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಳ್ಳಲು ಜಿಲ್ಲಾ ಘಟಕಗಳಿಗೆ ಅಧಿಕಾರ ನೀಡೋಣ ಎಂಬ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ.
ಈ ಸಂಬಂಧ ಜೆಡಿಎಸ್ ಜಿಲ್ಲಾ ಘಟಕಗಳ ಸಭೆ ನಡೆಯಲಿದೆ. ಕಾಂಗ್ರೆಸ್ ಸಹ ಜಿಲ್ಲಾ ಘಟಕಗಳ ಜತೆ ಸಭೆ ನಡೆಸಲಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರದಲ್ಲಿ ಸ್ಥಳೀಯ ಮಟ್ಟದಲ್ಲಿನ ಪರಿಸ್ಥಿತಿ ಬಗ್ಗೆಯೂ ಜಿಲ್ಲಾ ಘಟಕಗಳಿಂದ ವರದಿ ತರಿಸಿಕೊಳ್ಳಲು ರಡೂ ಪಕ್ಷಗಳು ನಿರ್ಧರಿಸಿವೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ
ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಲಭ್ಯ
ಕಾಮೆಡ್ ಕೆ ಫಲಿತಾಂಶ ಪ್ರಕಟ: ಟಾಪ್ 10ರಲ್ಲಿ ರಾಜ್ಯದ ಐವರಿಗೆ ಸ್ಥಾನ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧದ ಎಫ್ಐಆರ್ ರದ್ದತಿಗೆ ನಕಾರ
ಪಿರಿಯಾಪಟ್ಟಣ : ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ