ಕಾಯ್ದೆ ತಿದ್ದುಪಡಿ: ಬಿಜೆಪಿ ಸುಳ್ಳು ಪ್ರಚಾರ

Team Udayavani, Apr 6, 2019, 6:10 AM IST

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಸೈನಿಕರಿಗೆ ವಿಶೇಷ ಅಧಿಕಾರ ನೀಡುವ 1958ರ ಕಾಯ್ದೆ ತಿದ್ದುಪಡಿ ಮಾಡುವ ಕುರಿತು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವುದರ ವಿರುದ್ಧ ಬಿಜೆಪಿ ಹಾಗೂ ಪ್ರಧಾನಿ ಮೋದಿ ಮಾಡಿರುವ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರಿಗೆ ವಿಶೇಷ ಅಧಿಕಾರ ನೀಡುವ 1958ರ ಕಾಯ್ದೆಯನ್ನು ಅಲ್ಲಿನ ನಾಗರಿಕ ಹಕ್ಕುಗಳ ರಕ್ಷಣೆ ದೃಷ್ಟಿಯಿಂದ ಸೂಕ್ತ ತಿದ್ದುಪಡಿ ಮಾಡುವ ಬಗ್ಗೆ ಪ್ರಸ್ತಾಪಿಸಿದೆ. ಆದರೆ, ಪ್ರಧಾನಿ ಮೋದಿಯವರು ಕಾಂಗ್ರೆಸ್‌ ವಿಶೇಷ ಕಾಯ್ದೆಯನ್ನೇ ರದ್ದುಪಡಿಸಲು ಮುಂದಾಗಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಅಲ್ಲದೇ 2104ರಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮಣಿಪುರದಲ್ಲಿ ಎಎಫ್ಎಸ್‌ಪಿಎ ಕಾನೂನನ್ನು ತೆಗೆದು ಹಾಕುತ್ತೇವೆ ಎಂದು ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರದ ಮಾಹಿತಿಯ ಪ್ರಕಾರವೇ 2014 ರಿಂದ 18 ರವರೆಗೆ ದೇಶದಲ್ಲಿ ಶೇ.93ರಷ್ಟು ಯೋಧರು ಭಯೋತ್ಪಾದನಾ ಚಟುವಟಿಕೆಯಲ್ಲಿ ಅಸುನೀಗಿದ್ದಾರೆ. ಅಂದು ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಪ್ರಧಾನಿ ಹಾಗೂ ಅವರ ಪರಿವಾರ ಈಗ ಕಾಂಗ್ರೆಸ್‌ ದೂರುವುದನ್ನು ಬಿಟ್ಟು ಸತ್ಯವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದಿದ್ದಾರೆ.

ದೇಶದ ಜನತೆ ಎಎಫ್ಎಸ್‌ಪಿಎ ಕಾನೂನನ್ನು ಪರಿಶೀಲಿಸಬೇಕು ಮತ್ತು ಬದಲಾಯಿಸಬೇಕು ಎಂಬ ನಿಲುವು ಹೊಂದಿದ್ದಾರೆ. ಮೋದಿಯಂತಹ ರಾಜಕಾರಣಿಗಳಿಗೆ ನಾಗರಿಕ ಹಕ್ಕುಗಳ ಬಗ್ಗೆ ಅಗೌರವ ಇದೆ.ಬಿಜೆಪಿ ವಕ್ತಾರರು ಕಾಂಗ್ರೆಸ್‌ ಪ್ರಣಾಳಿಕೆಯನ್ನು ಗಂಭೀರವಾಗಿ ಓದಿ, ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಭಾರತೀಯ ನಾಗರಿಕರು ಕಾಂಗ್ರೆಸ್‌ ಪಕ್ಷದ ನಿಲುವನ್ನು ಅರಿತು ಸಮ್ಮತಿಸಿದ್ದಾರೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮೈಸೂರು: "ಸಾಲ ತಂದಾದರೂ ಸರ್ಕಾರ ರೈತರ ನೆರವಿಗೆ ಬರಲಿದೆ. ರೈತರ ಜೀವನದಲ್ಲಿ ಬದಲಾವಣೆ ತರಲು ಎಲ್ಲ ರೀತಿಯ ಯತ್ನ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ...

  • ಬೆಂಗಳೂರು: "ಪ್ರಯೋಜನಕ್ಕೆ ಬಾರದ ಕಲ್ಪನೆಗಳು ಮತ್ತು ಮೂಢನಂಬಿಕೆಗಳನ್ನು ತ್ಯಜಿಸಿ, ವೈಜ್ಞಾನಿಕ ಮನೋಭಾವದಿಂದ ದೇಶದ ಪ್ರಗತಿಗೆ ಶ್ರಮಿಸಬೇಕು' ಎಂದು ನಾಡಿನ ಜನತೆಗೆ...

  • ಮಂಡಲವಾಸ್‌(ರಾಜಸ್ಥಾನ): ಹನಿ ನೀರಿಗೂ ಪರದಾಡಿದ್ದೆವು, ಕಿಮೀಗಟ್ಟಲೇ ದೂರ ಸಾಗಿ ನೀರು ತರಲು ಹಲವು ತಾಸುಗಳನ್ನೇ ಮೀಸಲಿಡುತ್ತಿದ್ದೆವು, ಮಳೆ ಬಂದ ಎರಡೇ ತಾಸಿಗೆ...

  • ಬೆಂಗಳೂರು: ಬಿಜೆಪಿ ಹಾಗೂ ಸಂಘ ಪರಿವಾರದಿಂದ ಸಂವಿಧಾನ ರಕ್ಷಿಸುವ ಹೊಣೆಯನ್ನು ಕಾಂಗ್ರೆಸ್‌ ಮಾಡಬೇಕಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕರು ಶಪಥಗೈಯುವ ಮೂಲಕ 71ನೇ...

  • ವಿಜಯಪುರ: "ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಸಿ.ಸಿ. ಪಾಟೀಲ ಅವರನ್ನು ಬಲಿಕೊಟ್ಟು ಸಚಿವನಾಗುವ ದುರಾಸೆ ನನಗಿಲ್ಲ. ಒಂದೊಮ್ಮೆ ಪಕ್ಷ ನನಗೆ ಅಧಿಕಾರ ನೀಡಬಯಸಿದರೆ...

ಹೊಸ ಸೇರ್ಪಡೆ