ಅಮೆರಿಕ ಅಧಿಕಾರಿಗಳ ಪಶ್ಚಾತ್ತಾಪ : ಅನ್‌ಲಾಕ್‌ ಮಾಡಿದ್ದೇ ತಪ್ಪಾಯ್ತು!

Team Udayavani, Jun 29, 2020, 3:38 PM IST

ಅಮೆರಿಕ ಅಧಿಕಾರಿಗಳ ಪಶ್ಚಾತ್ತಾಪ : ಅನ್‌ಲಾಕ್‌ ಮಾಡಿದ್ದೇ ತಪ್ಪಾಯ್ತು!

ವಾಷಿಂಗ್ಟನ್‌: ಕೋವಿಡ್‌ ಸೋಂಕಿತರ ಪ್ರಮಾಣ ಅಮೆರಿದಲ್ಲಿ ಇನ್ನಿಲ್ಲದಂತೆ ಏರಿಕೆ ಕಾಣುತ್ತಿದ್ದು ಪರಿಸ್ಥಿತಿ ತೀವ್ರವಾಗಿ ಬಿಗಡಾಯಿಸುತ್ತಿದೆ. ಶನಿವಾರ ಒಂದೇ ದಿನದಲ್ಲಿ ಅಮೆರಿಕದಲ್ಲಿ ಹೊಸದಾಗಿ 43,581 ಹೊಸ ಕೋವಿಡ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಟೆಕ್ಸಾಸ್‌ವೊಂದರಲ್ಲಿಯೇ 5,000ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಎಗ್ಗಿಲ್ಲದಂತೆ ಏರಿಕೆಯಾಗುತ್ತಿರುವ ಸೋಂಕಿತರ ಸಂಖ್ಯೆ ಕಂಡು ಅಧಿಕಾರಿಗಳು ಆತಂಕಕ್ಕೀಡಾಗಿದ್ದು, ಲಾಕ್‌ಡೌನ್‌ ನಿಯಮಗಳನ್ನು ತೆರವುಗೊಳಿಸಿದ್ದಕ್ಕಾಗಿ ಈಗ ಇನ್ನಿಲ್ಲದಂತೆ ಪರಿತಪಿಸುತ್ತಿದ್ದಾರೆ.

ಆನ್‌ಲಾಕ್‌ ಮಾಡಿದೇ ತಪ್ಪಾಯ್ತು
ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ಪಾರದಾಡುತ್ತಿರುವ ಆರೋಗ್ಯಧಿಕಾರಿಗಳು ಲಾಕ್‌ಡೌನ್‌ ಹಿಂಪಡೆಯುವ ನಿರ್ಧಾರದ ಕುರಿತು ಅಸಮಾಧನ ವ್ಯಕ್ತಪಡಿಸಿದ್ದು, ಆನ್‌ಲಾಕ್‌ ಮಾಡಲು ಅವಕಾಶ ಮಾಡಿಕೊಟ್ಟಿದ್ದೇ ತಪ್ಪಾಯಿತು. ಇದಕ್ಕಾಗಿ ಈಗ ಭಾರೀ ಪ್ರಮಾಣದ ಬೆಲೆ ತೆರೆಯುವಂತಾಗಿದೆ ಎಂದು ಅಧಿಕಾರಿಗಳು ಹಣೆ ಚಚ್ಚಿಕೊಳ್ಳುತ್ತಿದ್ದಾರೆ.

ಮುನ್ನೆಚ್ಚರಿಕೆ ತೆಗೆದುಕೊಳ್ಳದ ಜನರರು
ಯಥಾ ಪ್ರಜಾ ತಥಾ ರಾಜಾ ಅನ್ನುವಂತೆ ಸೋಂಕು ಪ್ರಾರಂಭದ ಘಟ್ಟದಿಂದ ನಾವು ಸುರಕ್ಷಿತವಾಗಿದ್ದೇವೆ ಹೆದರುವ ಆವಶ್ಯಕತೆಯೇ ಇಲ್ಲ ಎಂಬ ಮೊಂಡುವಾದ ಮಂಡಿಸುತ್ತಾ ಬಂದಿದ್ದ ಅಧ್ಯಕ್ಷ ಟ್ರಂಪ್‌ ಹಾದಿಯನ್ನೇ ಅಲ್ಲಿನ ಸಾರ್ವಜನಿಕರು ಅನುಸರಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳುತ್ತಿಲ್ಲ. ಬೇಕಾಬಿಟ್ಟಿಯಾಗಿ ವರ್ತಿಸುತ್ತ ತಿರುಗಾಡುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಕಿಡಿಕಾರುತ್ತಿದ್ದಾರೆ.

ಈ ಮೊದಲು ಜನಜೀವನ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ, ಸುಧಾರಿಸಿಕೊಳ್ಳುತ್ತಿದ್ದಾರೆ ಎಂದುಕೊಳ್ಳುವಾಗಲೇ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿದ್ದು, ಜನರ ವರ್ತನೆಯಿಂದ ಬೇಸೆತ್ತಿರುವ ಅಧಿಕಾರಿಗಳು ಪಬ್‌ ಹಾಗೂ ಬಾರ್‌ಗಳನ್ನು ತೆರೆಯಲು ನೀಡಲಾಗಿದ್ದ ಅನುಮತಿಯನ್ನು ಹಿಂಪಡೆದುಕೊಳ್ಳುತ್ತಿದ್ದಾರೆ.

ಪಾರ್ಟಿ ಬದಲಾಯಿಸಿದ ಸೋಂಕು
ಈ ಮೊದಲು ಹಿರಿಯರನ್ನು ಗುರಿಯಾಗಿಸಿಕೊಳ್ಳುತ್ತಿದ್ದ ಸೋಂಕು ಸದ್ಯ ತನ್ನ ಬಣ ಬದಲಾಯಿಸಿದ್ದು, ಯುವ ಸಮುದಾಯದತ್ತ ತನ್ನ ದೃಷ್ಟಿ ಕೇಂದ್ರೀಕರಿಸಿಕೊಂಡಿದೆ! ಇನ್ನು ಕಳೆದ ಕೆಲ ದಿನಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಯುವಕರು ಸೋಂಕಿಗೆ ತುತ್ತಾಗುತ್ತಿದ್ದು, ಆ ಪೈಕಿ ಗುಣ ಲಕ್ಷಣ ಹೊಂದಿಲ್ಲದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಈ ಮೂಲಕ ಸೋಂಕು ಸಮುದಾಯ ಮಟ್ಟದಲ್ಲಿ ಪಸರಿಸಿದ್ದು, ಅದರ ಮೂಲ ಪತ್ತೆಯಾಗದ ಕಾರಣ ಯಾರನ್ನು ಎಲ್ಲಿ ಕ್ವಾರಂಟೈನ್‌ ಮಾಡಬೇಕು, ಯಾರನ್ನು ನಿಗಾದಲ್ಲಿ ಇಡಬೇಕು ಎಂಬುದೇ ತಿಳಿಯುತ್ತಿಲ್ಲ ಎಂದು ಎಂದು ತಜ್ಞರು ಕಳವಳ ವ್ಯಕ್ತಪಡಿಸಿ¨ªಾರೆ. ಇದಕ್ಕೆ ಧ್ವನಿಗೂಡಿಸಿರುವ ಸಾಂಕ್ರಾಮಿಕ ರೋಗಗಳ ತಜ್ಞ ಅಂಥೋನಿ ಫೌಸಿ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ವಿನಾಯಿತಿ ನೀಡಿದ ರಾಜ್ಯಗಳು
ಪರಿಸ್ಥಿತಿ ಕೈ ಮೀರಿ ಹೋಗುತ್ತಿದ್ದರು ನ್ಯೂಯಾರ್ಕ್‌, ನ್ಯೂಜೆರ್ಸಿ, ಕನೆಕ್ಟಿಕಟ್‌ಗಳು ಲಾಕ್‌ಡೌನ್‌ ನಿಬಂಧನೆಗಳನ್ನು ಸಡಿಲಿಕೆ ಮಾಡುತ್ತಿದ್ದು, ಸಂಚಾರ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ವಿನಾಯಿತಿ ನೀಡುತ್ತಿದೆ.

ಇನ್ನು ಕನೆಕ್ಟಿಕಟ್‌ ರಾಜ್ಯ ಶಾಲಾ- ಕಾಲೇಜುಗಳನ್ನು ಪ್ರಾರಂಭಿಸಲು ಮುಂದಾಗಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೂತನ ಮಾರ್ಗಸೂಚಿಗಳನ್ನು ಘೋಷಿಸಿದೆ. ಆದರೆ ಪ್ಲೋರಿಡಾದಲ್ಲಿ ಮಾತ್ರ ಲಾಕ್‌ಡೌನ್‌ ನಿರ್ಬಂಧಗಳನ್ನು ಮತ್ತೆ ವಿಧಿಸಲಾಗುತ್ತಿದ್ದು, ಈ ರಾಜ್ಯದಲ್ಲಿ 9 ಸಾವಿರ ಹೊಸ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.