2 ದಿನಗಳಲ್ಲಿ ಅಮಿತ್ ಶಾಗೆ ಮತ್ತೂಮ್ಮೆ ಕೋವಿಡ್ ಪರೀಕ್ಷೆ
Team Udayavani, Aug 10, 2020, 1:53 PM IST
ಹೊಸದಿಲ್ಲಿ: ಕೋವಿಡ್ ಸೋಂಕು ತಗುಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದ್ಯ ಆಸ್ಪತ್ರೆಯಿಂದಲೇ ಕಾರ್ಯನಿರ್ವ ಹಿಸುತ್ತಿದ್ದು, ಮುಂದಿನ 2 ದಿನಗಳಲ್ಲಿ ಮತ್ತೂಮ್ಮೆ ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಪರೀಕ್ಷೆಯ ವರದಿ ನೆಗೆಟಿವ್ ಎಂದು ಬಂದರೆ, ಈ ವಾರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಅವರಿಗೆ ಯಾವುದೇ ರೋಗಲಕ್ಷಣ ಕಂಡು ಬಂದಿಲ್ಲ. ಗುರುಗ್ರಾಮದ ಆಸ್ಪತ್ರೆಯಿಂದಲೇ ಸಚಿವಾಲಯದ ಕೆಲಸಗಳನ್ನು ನಿರ್ವಹಿಸುತ್ತಿದ್ದು, ಆಂತರಿಕ ಭದ್ರತೆಯ ಮೇಲ್ವಿಚಾರಣೆಯನ್ನೂ ನೋಡಿಕೊಳ್ಳುತ್ತಿದ್ದಾರೆ ಎಂದೂ ಮೂಲಗಳು ಹೇಳಿವೆ.