Congress: ಸರಕಾರದಲ್ಲಿ ಅರಾಜಕತೆ: ಬೊಮ್ಮಾಯಿ
Team Udayavani, Oct 8, 2023, 11:04 PM IST
ಬಂಕಾಪುರ: ಕಾಂಗ್ರೆಸ್ ಸರಕಾರದಲ್ಲಿ ಅರಾಜಕತೆ ಎದ್ದು ಕಾಣುತ್ತಿದೆ. ರೈತರು ಬರಗಾಲ ಛಾಯೆಯಿಂದ ಬಸವಳಿದರೆ, ಅಲ್ಲಲ್ಲಿ ಕೋಮು ಗಲೆಭೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ರೈತರ ಕಾಳಜಿ ಮರೆತ ಸರಕಾರ ಮುಸ್ಲಿಮರ ಓಲೈಕೆಗೆ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಗ್ಗಾವಿ ತಾಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಈ ಭಾಗದ ರೈತರು ಸತತ ಮೂರು ದಿನಗಳಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ.
ಕೂಡಲೇ ಶಿಗ್ಗಾವಿ, ಹಾನಗಲ್, ಬ್ಯಾಡಗಿ ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಬೇಕು. ಗ್ರಾಪಂ ಮಟ್ಟದಲ್ಲಿ ಬಾರ್ ತೆಗೆಯಲು ಮುಂದಾದ ಸರಕಾರ ರೈತರ ಸಂಕಷ್ಟಕ್ಕೆ ಮುಂದಾಗದೇ ಇರುವುದು ನೋವಿನ ಸಂಗತಿ. ಬರಗಾಲವನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗದ ಸರಕಾರ ಕೇಂದ್ರದ ಮೇಲೆ ಗೂಬೆ ಕೂರಿಸಲು ಹೊರಟಿದೆ. ಕಾವೇರಿ ನೀರಿನ ವಿಚಾರದಲ್ಲೂ ರಾಜ್ಯ ಸರಕಾರ ದ್ವಂದ್ವ ನಿಲುವು ತಾಳಿದೆ. ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮಾಡಲಾಗಿದೆಯೇ ಹೊರತು ಜಾತಿ ಗಣತಿ ಅಲ್ಲ ಎಂಬುದನ್ನು ಸಿಎಂ ಸ ಷ್ಟಪಡಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್
Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ
HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ