ಬಹುನಿರೀಕ್ಷಿತ ಕೆಜಿಎಫ್-2ನಲ್ಲಿ ಮತ್ತೊಬ್ಬ ಹಿರಿಯ ನಟಿ ಎಂಟ್ರಿ
ಈಶ್ವರಿ ರಾವ್ ಕೆಜಿಎಫ್-2 ಚಿತ್ರದಲ್ಲಿ ನಟಿಸಿದ್ದಾರೆ ಎಂದು ಹೇಳಲಾಗಿದೆ.
Team Udayavani, May 31, 2020, 1:02 PM IST
ಬೆಂಗಳೂರು:ಸದ್ಯ ಕೊನೆಯ ಹಂತದ ನಿರ್ಮಾಣದಲ್ಲಿರುವ ಕೆಜಿಎಫ್-2 ಚಿತ್ರಕ್ಕೆ ಮತ್ತೊಬ್ಬ ದಕ್ಷಿಣ ಭಾರತದ ಹಿರಿಯ ನಟಿ ಎಂಟ್ರಿ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಜಿಎಫ್-2 ಚಿತ್ರದ ಶೂಟಿಂಗ್ ಕೊನೆಯ ಹಂತಕ್ಕೆ ಬಂದಿದೆ. ಈ ವೇಳೆ ದಕ್ಷಿಣ ಭಾರತದ ಹಿರಿಯ ನಟಿ ಈಶ್ವರಿ ರಾವ್ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ದಕ್ಷಿಣ ಭಾರತದಲ್ಲಿ ತೆಲುಗು, ತಮಿಳು, ಮಾಲಿಯಾಳಂ ಸೇರಿದಂತೆ ಕನ್ನಡದಲ್ಲೂ ನಟನೆ ಮಾಡಿರುವ ಈಶ್ವರಿ ರಾವ್, ಕೆಜಿಎಫ್-2 ಚಿತ್ರದಲ್ಲಿ ನಟಿಸಿದ್ದಾರೆ ಎಂದು ಹೇಳಲಾಗಿದೆ. ಚಿತ್ರಕ್ಕೆ ತಿರುವು ಕೊಡುವ ಒಂದು ಪಾತ್ರದಲ್ಲಿ ಈಶ್ವರಿಯವರು ನಟಿಸಿದ್ದಾರೆ ಎಂದು ಹೇಳಲಾಗಿದೆ.
ಆದರೆ ಯಾವ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಮಾತ್ರ ಇನ್ನೂ ಖಚಿತವಾಗಿಲ್ಲ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಈ ವಿಚಾರ ಈಶ್ವರಿಯವರು ಯಾವ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಕುತೂಹಲ ಹೆಚ್ಚಾಗುವಂತೆ ಮಾಡಿದೆ.
ದಕ್ಷಿಣ ಭಾರತದಲ್ಲೇ ಖ್ಯಾತ ನಟಿಯಾಗಿರುವ ಈಶ್ವರಿ ರಾವ್, ಪಂಚಭಾಷಾ ತಾರೆ. ಕೆಲ ಬಾಲಿವುಡ್ ಚಿತ್ರಗಳಲ್ಲೂ ನಟಿಸಿರುವ ಈಶ್ವರಿ 90ರ ದಶಕದಲ್ಲಿ ರಜನಿಕಾಂತ್, ಕಮಲ್ ಹಾಸನ್ ನಂತಹ ನಟರ ಜೊತೆ ನಟಿಸಿ ಸೈ ಎನಿಸಿಕೊಂಡ ನಟಿ. ಇತ್ತೀಚೆಗೆ ಬಿಡುಗಡೆಯಾದ ರಜಿನಿಕಾಂತ್ ಅವರ ಕಾಲ ಚಿತ್ರದಲ್ಲೂ ಈಶ್ವರಿ ನಟಿಸಿದ್ದಾರೆ. 1995ರಲ್ಲಿ ಎಸ್. ನಾರಾಯಣ್ ನಿರ್ದೇಶನದ ಮೇಘ ಮಾಲೆ ಎಂಬ ಕನ್ನಡ ಚಿತ್ರದಲ್ಲೂ ಈಶ್ವರಿಯವರು ಅಭಿನಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ