ಲಾಕ್ ಡೌನ್ ಮೀರಿ ಮಂಡ್ಯಕ್ಕೆ ಬಂತು ಶವ, ಢವಢವ !

ಮುಂಬಯಿಯಿಂದ ಆ್ಯಂಬುಲೆನ್ಸ್‌ನಲ್ಲಿ ಸಾಗಾಟ, ನಾಲ್ವರಿಗೆ ಹರಡಿದ ಕೋವಿಡ್-19

Team Udayavani, May 2, 2020, 5:50 AM IST

ಲಾಕ್ ಡೌನ್‌  ಮೀರಿ ಮಂಡ್ಯಕ್ಕೆ ಬಂತು ಶವ,ಢವಢವ !

ಸಾಂದರ್ಭಿಕ ಚಿತ್ರ.

ಮಂಡ್ಯ: ಬರೋಬ್ಬರಿ 42 ಚೆಕ್‌ಪೋಸ್ಟ್‌ ದಾಟಿ ಬಂದಿತ್ತು ಪಾರ್ಥಿವ ಶರೀರ ಹೊತ್ತು ಬಂದ ಸರಕಾರಿ ಆ್ಯಂಬುಲೆನ್ಸ್‌ …!

ಹೌದು, ಶುಕ್ರವಾರ ಮಂಡ್ಯ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಏಕಾಏಕಿ ಹೆಚ್ಚಿ ರುವುದಕ್ಕೂ ಮುಂಬಯಿಯಿಂದ ಬಂದ ಈ ಆ್ಯಂಬುಲೆನ್ಸ್‌ಗೂ ಸಂಬಂಧ ಇದೆ ಎನ್ನುವುದು ಸ್ಪಷ್ಟವಾಗಿದೆ. ಈ ಆ್ಯಂಬುಲೆನ್ಸ್‌ನಲ್ಲಿದ್ದ ಪಾರ್ಥೀವ ಶರೀರದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಏಳು ಜನರಲ್ಲಿ ನಾಲ್ವರಿಗೆ ಕೋವಿಡ್-19 ದೃಢವಾಗಿದೆ.

ಪಾಂಡವಪುರ ತಾಲೂಕಿನ ಬಿ. ಕೊಡಗನ ಹಳ್ಳಿಯ ಮೂವರಲ್ಲಿ ಮತ್ತು ಕೆ.ಆರ್‌. ಪೇಟೆಯ ಒಬ್ಬರಲ್ಲಿ ಕೋವಿಡ್-19 ಕಾಣಿಸಿಕೊಂಡಿದೆ. ಎ. 23ರಂದು ಮುಂಬಯಿಯಲ್ಲಿ ಮೃತ ಪಟ್ಟಿದ್ದ ಗ್ರಾಮದ ವ್ಯಕ್ತಿಯೊಬ್ಬರ ಶವವನ್ನು ಆ್ಯಂಬುಲೆನ್ಸ್‌ನಲ್ಲಿ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.

ಈ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ಇವರಲ್ಲಿ ವೈರಸ್‌ ಇತ್ತೇ ಅಥವಾ ಇಲ್ಲವೇ ಎಂಬುದು ಇನ್ನೂ ದೃಢಪಟ್ಟಿಲ್ಲ. ಜತೆಗೆ ಈ ವ್ಯಕ್ತಿಯ ಪುತ್ರನೊಬ್ಬ ಮುಂಬಯಿಯ ಖಾಸಗಿ ಬ್ಯಾಂಕೊಂದರ ಉದ್ಯೋಗಿಯಾಗಿದ್ದು ಇವರಿಂದ ಸೋಂಕು ಹರಡಿರಬಹುದು ಎಂಬ ಶಂಕೆಯನ್ನೂ ವ್ಯಕ್ತಪಡಿಸಲಾಗಿದೆ.

ಹೀಗಾಗಿ ಮುಂಬಯಿಯಲ್ಲಿ ಮೃತ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದ ದೇಸಾಯಿ ಆಸ್ಪತ್ರೆಯನ್ನು ಸಂಪರ್ಕಿಸಲಾಗಿದೆ.  ಮುಂಬಯಿಯಲ್ಲಿ ಸಾವಿಗೀಡಾಗಿದ್ದ ವ್ಯಕ್ತಿಯ ಶವ ಹೊತ್ತ ಆ್ಯಂಬುಲೆನ್ಸ್‌ 42 ಚೆಕ್‌ಪೋಸ್ಟ್‌ ದಾಟಿ ಬಂದಿದೆ. ಸರಕಾರಿ ಆ್ಯಂಬುಲೆನ್ಸ್‌ ಎಂಬ ಕಾರಣಕ್ಕಾಗಿ ಜಿಲ್ಲಾಡಳಿತವೂ ಅಸಡ್ಡೆ ಮಾಡಿ ದಾರಿ ಬಿಟ್ಟಿತೇ ಎಂಬ ಅನುಮಾನಗಳೂ ಈಗ ವ್ಯಕ್ತವಾಗಿವೆ.

ಮಂಡ್ಯಕ್ಕೆ ತಂದಿದ್ದು ಏಕೆ?
ಮೃತ ವ್ಯಕ್ತಿಯ ಒಬ್ಟಾಕೆ ಪುತ್ರಿ ಮಂಡ್ಯ  ಜಿಲ್ಲೆಯ ಕೆ.ಆರ್‌. ಪೇಟೆಯಲ್ಲಿದ್ದಾರೆ. ಇವರು ತಂದೆಯ ಅಂತಿಮ ದರ್ಶನ ಪಡೆಯಲು ಆಸೆ ವ್ಯಕ್ತಪಡಿಸಿದ್ದರಿಂದ ಮೃತದೇಹಕ್ಕೆ  ದೇಸಾಯಿ ಆಸ್ಪತ್ರೆಯ ಸರಕಾರಿ ಆ್ಯಂಬುಲೆನ್ಸ್‌ ನಲ್ಲಿಟ್ಟು ಬಿ. ಕೊಡಗಹಳ್ಳಿಗೆ ಕರೆತರಲಾಯಿತು.

ಆ್ಯಂಬುಲೆನ್ಸ್‌ನಲ್ಲಿ ಪತ್ನಿ, ಪುತ್ರ, ಪುತ್ರಿ, ಅಳಿಯ, ಮೊಮ್ಮಗ ಇದ್ದರು. ಈ ಪೈಕಿ ಮೃತನ ಪುತ್ರ, ಪುತ್ರಿ, ಮೊಮ್ಮಗ ಹಾಗೂ ಕೆ.ಆರ್‌. ಪೇಟೆಯಲ್ಲಿದ್ದ ಇನ್ನೊಬ್ಬ ಪುತ್ರಿಗೆ ಸೋಂಕು ಕಾಣಿಸಿಕೊಂಡಿದೆ. ಆದರೆ ಮೃತನ ಪತ್ನಿ ಹಾಗೂ ಅಳಿಯನಿಗೆ ಸೋಂಕು ಕಾಣಿಸಿಕೊಂಡಿಲ್ಲ, ಅವರನ್ನು ಕ್ವಾರಂಟೈನ್‌ ಮಾಡಲಾಗಿದೆ.  ಬಿ. ಕೊಡಗಹಳ್ಳಿ ಗ್ರಾಮವನ್ನು ಕಂಟೈನ್ಮೆಂಟ್‌  ಝೋನ್‌ ಎಂದು ಘೋಷಿಸಲಾಗಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.