ಕಾರ್ಯವೈಖರಿ ಲೋಪ ಸರಿಪಡಿಸಲು ತಹಶೀಲ್ದಾರ್‌ಗೆ ಮನವಿ

ಕೆಆರ್‌ಎಸ್‌ ಪಕ್ಷದ ಲಂಚ ಮುಕ್ತ ಕರ್ನಾಟಕ ಅಭಿಯಾನ

Team Udayavani, Mar 6, 2021, 10:52 PM IST

ಕಾರ್ಯವೈಖರಿ ಲೋಪ ಸರಿಪಡಿಸಲು ತಹಶೀಲ್ದಾರ್‌ಗೆ ಮನವಿ

ಉಡುಪಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್‌) ಅಧ್ಯಕ್ಷ ರವಿ ಕೃಷ್ಣ ರೆಡ್ಡಿ ನೇತೃತ್ವದ ರಾಜ್ಯ ಸಮಿತಿ ತಂಡ ಶನಿವಾರ “ಲಂಚ ಮುಕ್ತ ಕರ್ನಾಟಕ’ ಅಭಿಯಾನದ ಅಂಗವಾಗಿ ಉಡುಪಿ ತಾಲೂಕು ಕಚೇರಿಗೆ ಭೇಟಿ ನೀಡಿ ಕಚೇರಿಯ ಅವ್ಯವಸ್ಥೆ ಹಾಗೂ ಕಾರ್ಯ ವೈಖರಿಗಳಲ್ಲಿನ ಲೋಪಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಂತೆ ಆಗ್ರ ಹಿಸಿ ತಹಶೀಲ್ದಾರ್‌ ಪ್ರದೀಪ್‌ ಕುರ್ಡೇಕರ್‌ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಕೆಆರ್‌ಸ್‌ ಪಕ್ಷದ ಅಧ್ಯಕ್ಷ ರವಿಕೃಷ್ಣ ರೆಡ್ಡಿ, ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ಲಂಚದ ದೂರುಗಳು ಕೇಳಿ ಬಂದಿರುವುದು ಆಶ್ಚರ್ಯ ಉಂಟು ಮಾಡಿದೆ. ಆಹಾರ ಹಾಗೂ ಸರ್ವೇ ಇಲಾಖೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಅಧಿಕಾರಿಗಳು ಅನಧಿಕೃತವಾಗಿ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ತಹಶೀಲ್ದಾರ್‌ ಅವರಿಗೆ ಮನವಿ ಮಾಡಲಾಗಿದೆ. ವ್ಯವಸ್ಥೆ ಉತ್ತಮವಾಗಿ ಆದರೆ ಸೇವೆಗಳಲ್ಲಿ ಬದಲಾವಣೆಯಾದಾಗ ಜನರಿಗೆ ಸರಿಯಾದ ಸಮಯಕ್ಕೆ ಸೇವೆ ಸಿಗಲು ಸಾಧ್ಯ ಎಂದರು.

ಕೆಆರ್‌ಎಸ್‌ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ, ಜ. ಕಾರ್ಯದರ್ಶಿಗಳಾದ ಸೋಮಸುಂದರ್‌, ರಘುಪತಿ ಭಟ್‌, ಕಾರ್ಯದರ್ಶಿ ರಾಮದಾಸ್‌ ಪೈ, ಅಲ್ಪಸಂಖ್ಯಾಕರ ಘಟಕದ ರಾಜ್ಯಾಧ್ಯಕ್ಷ ಶಾಹೀದ್‌ ಆಲಿ, ಜಿಲ್ಲಾಧ್ಯಕ್ಷ ಕಿರಣ್‌ ಕುಮಾರ್‌, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಮಮತಾ, ಉಪಾಧ್ಯಕ್ಷೆ ಸಂಧ್ಯಾ, ಕಾರ್ಯದರ್ಶಿ ರೇಷ್ಮಾ, ಜಿಲ್ಲಾ ಘಟಕದ ಉಪಾಧ್ಯಕ್ಷ ಸಲೀಂ ಉಪಸ್ಥಿತರಿದ್ದರು.

ಹಲವು ಲೋಪಗಳು
ಕಚೇರಿಯಲ್ಲಿ ವಿವಿಧ ವಿಭಾಗಗಳ ಕೊಠಡಿಗಳಿಗೆ ನಾಮಫ‌ಲಕ ಇಲ್ಲದಿರುವುದು, ನೌಕರರ ಮೇಜಿನ ಮೇಲೆ ಪದನಾಮ ಇಲ್ಲದಿರುವುದು, ಅಟಲ್‌ ಜೀ ಸ್ನೇಹ ಕೌಂಟರ್‌ನಲ್ಲಿ ಟೋಕನ್‌ ವ್ಯವಸ್ಥೆ ಇಲ್ಲದಿರುವುದು, ಸರಕಾರಿ ಹಾಗೂ ಹೊರಗುತ್ತಿಗೆ ನೌಕರರು ಗುರುತಿ ಚೀಟಿ ಧರಿಸದೆ ಇರುವುದು, ನೌಕರರ ಸ್ಥಳದಲ್ಲಿ ಮಧ್ಯವರ್ತಿಗಳು ಅನಧಿಕೃತವಾಗಿ ಇರುವುದು, ಅನಧಿಕೃತ ವ್ಯಕ್ತಿಗಳ ಕೈಯಲ್ಲಿ ಸರಕಾರಿ ದಾಖಲೆ ಇರುವುದು, ಸರಕಾರಿ ಸಿಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸದೆ ಇರುವುದು, ಹಾಜರಾತಿ ಪಟ್ಟಿ ಇಲ್ಲದೆ ಇರುವುದು ಸೇರಿದಂತೆ ವಿವಿಧ ಬೇಡಿಕೆ ಹಾಗೂ ಕಾರ್ಯ ವೈಖರಿಗಳಲ್ಲಿನ ಲೋಪದೋಷಗಳನ್ನು ಸರಿಪಡಿ ಸುವಂತೆ ಮನವಿ ನೀಡಿದರು.

ಟಾಪ್ ನ್ಯೂಸ್

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

heavy rain; holiday for schools in dharwad

ಮುಂದುವರಿದ ಮಳೆ: ಧಾರವಾಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ

ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

astrology

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೂ. 1ರಿಂದ ಜು. 31ರ ತನಕ ಯಾಂತ್ರಿಕ ಮೀನುಗಾರಿಕೆ ನಿಷೇಧ 

ಜೂ. 1ರಿಂದ ಜು. 31ರ ತನಕ ಯಾಂತ್ರಿಕ ಮೀನುಗಾರಿಕೆ ನಿಷೇಧ 

ಕರಾವಳಿಯಲ್ಲಿ ಬಿರುಸಿನ ಮಳೆ ; ಮೇ 20ರಂದು ಆರೆಂಜ್‌ ಅಲರ್ಟ್‌

ಕರಾವಳಿಯಲ್ಲಿ ಬಿರುಸಿನ ಮಳೆ ; ಮೇ 20 ಕ್ಕೆ ಆರೆಂಜ್‌ ಅಲರ್ಟ್‌: ಹವಾಮಾನ ಇಲಾಖೆಯ ಮುನ್ಸೂಚನೆ

rain

ಭಾರಿ ಮಳೆ ಹಿನ್ನೆಲೆ ಉಡುಪಿ, ಶಿವಮೊಗ್ಗ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಕಾಪು : ವಿದೇಶದಿಂದ ಬಂದಿದ್ದ ವ್ಯಕ್ತಿ ಬಾವಿಯ ಹಗ್ಗಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಕಾಪು : ವಿದೇಶದಿಂದ ಬಂದಿದ್ದ ವ್ಯಕ್ತಿ ಬಾವಿಯ ಹಗ್ಗಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಉಡುಪಿ: ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋದ ವಿದ್ಯಾರ್ಥಿಗೆ 625 ಅಂಕ

ಉಡುಪಿ: ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ವಿದ್ಯಾರ್ಥಿಗೆ 625 ಅಂಕ

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

manikkara

ಅಂದು ಬಿಸಿಲಾಯಿತು ಇಂದು ಮಳೆಗೆ ಒದ್ದೆಯಾಗಿ ಪಾಠ ಕೇಳುವ ಸ್ಥಿತಿ

kallumutlu

ವಿವಿಧೆಡೆ ಮುಂದುವರಿದ ಮಳೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

heavy rain; holiday for schools in dharwad

ಮುಂದುವರಿದ ಮಳೆ: ಧಾರವಾಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.