
ಅರಂಬೂರು: ಗುಜರಿ ತುಂಬಿದ್ದ ಲಾರಿಯಲ್ಲಿ ಬೆಂಕಿ ಅವಘಡ
Team Udayavani, May 30, 2023, 11:13 PM IST

ಅರಂತೋಡು: ಆಲೆಟ್ಟಿ ಗ್ರಾಮದ ಅರಂಬೂರು ಸಮೀಪ ಗುಜರಿ ಸೊತ್ತುಗಳನ್ನು ತುಂಬಿದ ಲಾರಿಯೊಂದಕ್ಕೆ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಸುಳ್ಯದಿಂದ ಗುಜರಿ ಸೊತ್ತು ತುಂಬಿಸಿಕೊಂಡು ಮೈಸೂರಿಗೆ ತೆರಳುತ್ತಿದ್ದ ಲಾರಿ ಅರಂಬೂರು ಸಮೀಪಿಸುತ್ತಿದ್ದಂತೆ ಬೆಂಕಿ ಕಾಣಿಸತೊಡಗಿದೆ. ಇದನ್ನು ಕಂಡ ಲಾರಿ ಚಾಲಕ ವಾಹನವನ್ನು ಅರಂಬೂರು ಸಮೀಪವಿರುವ ಸರ್ವಿಸ್ ಸ್ಟೇಷನ್ ಒಳಭಾಗಕ್ಕೆ ಕೊಂಡೊಯ್ದು ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದರು. ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಅವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Kollegala: ತಜ್ಞ ವೈದ್ಯೆಯ ಅನುಮಾನಸ್ಪದ ಸಾವು

Cauvery issue; ಕಾಂಗ್ರೆಸ್ ಗೆ ರಾಜ್ಯದ ಜನರ ಹಿತ ಮುಖ್ಯವಲ್ಲ: ಆರಗ ಟೀಕೆ

Couples: ಲಿವಿಂಗ್ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ