ಬಾಂಗ್ಲಾ ಅಂತಾರಾಷ್ಟ್ರೀಯ ವಿಮಾನಯಾನ ಹಾರಾಟ ಶುರು
Team Udayavani, Jun 22, 2020, 1:32 PM IST
ಢಾಕಾ: ಮೂರು ತಿಂಗಳ ಬಳಿಕ ಬಾಂಗ್ಲಾದೇಶದ ಸಾರ್ವಜನಿಕ ಸ್ವಾಮ್ಯದ ವಿಮಾನಯಾನ ಕಂಪೆನಿ ಬಿಮನ್ ಬಾಂಗ್ಲಾದೇಶ್ ಏರ್‌ಲೈನ್ಸ್ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ವಿಮಾನಯಾನ ಆರಂಭಿಸಿದೆ.
ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ಅಂತಾರಾಷ್ಟ್ರೀಯ ವಿಮಾನಗಳ ಯಾನವನ್ನು ರದ್ದುಪಡಿಸಲಾಗಿತ್ತು. ರವಿವಾರ ಸಂಜೆ ಹೊತ್ತಿಗೆ ಬಿಜಿ001 787-8 ಡ್ರೀಮ್‌ಲೈನರ್ ವಿಮಾನ 187 ಪ್ರಯಾಣಿಕರೊಂದಿಗೆ ಲಂಡನ್‌ಗೆ ಪ್ರಯಾಣ ಬೆಳೆಸಿದೆ.
ಲಂಡನ್‌ಗೆ ತೆರಳಿದ ಯಾವುದೇ ಪ್ರಯಾಣಿಕರಿಗೆ ಕೋವಿಡ್ ಕುರಿತ ಪ್ರಮಾಣ ಪತ್ರ ಕಡ್ಡಾಯವಾಗಿಲ್ಲ. ಆದರೆ ಅವರು ಅಂತಾರಾಷ್ಟ್ರೀಯ ವಿಮಾನಯಾನ ಒಕ್ಕೂಟದ ಪ್ರಕಾರ, ಸ್ವಯಂಘೋಷಣಾ ಪತ್ರವೊಂದಕ್ಕೆ ಸಹಿ ಹಾಕಬೇಕಿರುತ್ತದೆ. ರವಿವಾರ ಮಾತ್ರ ಢಾಕಾದಿಂದ ವಿಮಾನ ಹಾರಾಟ ನಡೆಸಲಿದೆ. ಪ್ರಯಾಣಿಕರಿಗೆ ಮಾಸ್ಕ್, ಸ್ಯಾನಿಟೈಸರ್, ಆಹಾರ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ