ಬಂಟಕಲ್‌ ತಾಂತ್ರಿಕ ಕಾಲೇಜು: ಅನಂತೋತ್ಸವಕ್ಕೆ ಚಾಲನೆ


Team Udayavani, Mar 24, 2023, 10:31 AM IST

3-shirwa

ಶಿರ್ವ: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನಲ್ಲಿ ಅಂತರ ಕಾಲೇಜು ತಾಂತ್ರಿಕ-ಸಾಂಸ್ಕೃತಿಕ ಉತ್ಸವ ಅನಂತೋತ್ಸವ ಕಾರ್ಯಕ್ರಮವು ಮಾ.23ರಂದು ಸಂಸ್ಥೆಯ ಆವರಣದಲ್ಲಿ ನಡೆಯಿತು. ಇತ್ತೀಚೆಗೆ ನಿಧನರಾದ ಕಾಲೇಜಿನ ಪ್ರಾಧ್ಯಾಪಕ ಅನಂತೇಶ್‌ ರಾವ್‌ ಅವರಿಗೆ ಶ್ರದ್ಧಾಂಜಲಿ ಸಮರ್ಪಣೆಯಾಗಿ ವರ್ಣೋತ್ಸವವನ್ನು ಅನಂತೋತ್ಸವವನ್ನಾಗಿ ನಡೆಸಲಾಗಿದೆ.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶ್ರೀ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದರು ಆರ್ಶಿರ್ವಚನ ನೀಡಿ ಸರಿಯಾದ ಪ್ರಯತ್ನ ಮತ್ತು ಉತ್ಸಾಹದಿಂದ ಜೀವನದಲ್ಲಿ ಏನನ್ನಾದರು ಸಾಧಿಸಬಹುದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮುಖ್ಯ ಅತಿಥಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಅನಿಕೃತಿ ಎಂಜಿನಿಯರಿಂಗ್‌ ಪ್ರೈ.ಲಿ ಮತ್ತು ಪೆಬಲ್‌ ಗ್ರೇ ಡಿಸೈನ್‌ ಸ್ಟುಡಿಯೋದ ವ್ಯವಸ್ಥಾಪಕ ನಿರ್ದೇಶಕ ರಾಹುಲ್‌ ವಿ. ಕೋಟ್ಯಾನ್‌ ಮಾತನಾಡಿ ವಿದ್ಯಾರ್ಥಿ ಜೀವನದ ನಂತರ ಒಬ್ಬ ವ್ಯಕ್ತಿಯು ವೃತ್ತಿ ಜೀವನದಲ್ಲಿ ನಿಜವಾದ ಕಲಿಕೆಯನ್ನು ನಡೆಸಬೇಕಾಗಿದ್ದು,ಅದಕ್ಕೆ ಸೂಕ್ತ ರೀತಿಯ ತಯಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮಾಡುವುದು ತೀರಾ ಅಗತ್ಯ ಎಂದು ಹೇಳಿದರು.

ಹಳೆವಿದ್ಯಾರ್ಥಿ ಸಿಂಗಾಪುರ ಆಸ್‌ಪೈರ್‌ ಎಫ್‌ಟಿಯ ಹಿರಿಯ ಪ್ರಾಡೆಕ್ಟ್ ಡಿಸೈನರ್‌ ನಿಖೀಲ್‌ ಆಚಾರ್ಯ ಮಾತನಾಡಿ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಜಯಿಸಲು ಹೊಂದಾಣಿಕೆಯ ಪ್ರಾಮುಖ್ಯತೆಯ ಬಗ್ಗೆ ಹೇಳಿದರು. ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್‌ ಮಾತನಾಡಿದರು.

ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ವರ್ಷದ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಆ್ಯಂಡ್‌ ಮೆಶಿನ್‌ ಲರ್ನಿಂಗ್‌ ವಿಭಾಗದ ವಿದ್ಯಾರ್ಥಿ ಮನೀಶ್‌ ದಾರ ಮತ್ತು ಮೊಳೆಯಿಂದ ಮಾಡಿದ ಸ್ವಾಮೀಜಿಯವರ ಭಾವಚಿತ್ರವನ್ನು ಸ್ವಾಮೀಜಿಯವರಿಗೆ ಹಸ್ತಾಂತರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್‌ ಸ್ವಾಗತಿಸಿದರು. ಉಪ ಪ್ರಾಂಶುಪಾಲ ಡಾ| ಗಣೇಶ್‌ ಐತಾಳ್‌ ವಂದಿಸಿದರು.

ಸಮಾರೋಪ ಸಮಾರಂಭ

ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರ ಕಾಲೇಜು ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನೊಳಗೊಂಡ ಅನಂತೋತ್ಸವ ಸಮಾರೋಪ ಸಮಾರಂಭವು ಮಾ.23ರಂದು ಕಾಲೇಜಿನ ಆವರಣದಲ್ಲಿ ನಡೆಯಿತು. ಕರ್ನಾಟಕದ ವಿವಿಧ ಎಂಜಿನಿಯರಿಂಗ್‌ ಕಾಲೇಜುಗಳ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಂಸ್ಕೃತಿಕ ಹಬ್ಬದಲ್ಲಿ ಭಾಗವಹಿಸಿದ್ದರು.

ಮುಖ್ಯ ಅತಿಥಿ ಏಷ್ಯನ್‌ ಪೈಂಟ್ಸ್‌ನ ಮಾಜಿ ಸಿಇಒ ಜಗದೀಶ್‌ ಆಚಾರ್ಯ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಸತ್ಯ ಮತ್ತು ನಮ್ರತೆಯನ್ನು ಹೊಂದಿರಬೇಕಿದ್ದು, ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ದೀರ್ಘಾವಧಿಯ ಪರಿಣಾಮಗಳ ಬಗ್ಗೆ ಯೋಚಿಸಬೇಕು. ಜೀವನದಲ್ಲಿ ಸಂತೋ‚ವನ್ನು ಅನುಭವಿಸಲು ಜೀವನದಲ್ಲಿ ಸಮತೋಲನವನ್ನು ಹೊಂದಿರಬೇಕು ಎಂದರು.

ವಿವಿಧ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಂಗಳೂರಿನ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯ ತಂಡ ಪ್ರಥಮ ಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯ ತಂಡ ದ್ವಿತೀಯ ಸ್ಥಾನ ಪಡೆಯಿತು. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್‌, ಉಪಪ್ರಾಂಶುಪಾಲ ಡಾ| ಗಣೇಶ್‌ ಐತಾಳ್‌ ವೇದಿಕೆಯಲ್ಲಿದ್ದರು. ರೆನಿಟಾ ಮೋನಿಸ್‌ ಅನಂತೋತ್ಸವದ ವರದಿ ವಾಚಿಸಿದರು. ಸವಿತಾ ಶೆಣೈ ಪರಿಚಯಿಸಿದರು. ಪ್ರಾಧ್ಯಾಪಕರಾದ ಅರುಣ್‌ ಉಪಾಧ್ಯಾಯ ಮತ್ತು ವಿಜೇತಾ ತಾಂತ್ರಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ವಿಜೇತರ ಪಟ್ಟಿ ವಾಚಿಸಿದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ|ಲೊಲಿಟಾ ಪ್ರಿಯ ಕ್ಯಾಸ್ಟಲಿನೋ ಸ್ವಾಗತಿಸಿದರು. ಖುಶಿ ಬಂಗೇರ ಮತ್ತು ಅದಿತಿ ನಾಯಕ್‌ ಕಾರ್ಯಕ್ರಮ ನಿರೂಪಿಸಿ,ನಾಗರಾಜ್‌ ರಾವ್‌ ವಂದಿಸಿದರು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.