ವಾಯುಭಾರ ಕುಸಿತ: ಉತ್ತಮ ಮಳೆ


Team Udayavani, Jan 5, 2024, 1:12 AM IST

RAIN KARNATAKA

ಮಂಗಳೂರು/ಉಡುಪಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಮಳೆ ಬಿರುಸಾಗಿದ್ದು, ಬಳಿಕ ತುಸು ವಿರಾಮ ನೀಡಿದೆ.

ಕರಾವಳಿಯಲ್ಲಿ ಗುರುವಾರ ಉತ್ತಮ ಮಳೆ ಸುರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಮಂಗಳೂರು ನಗರದಲ್ಲಿ ಮುಂಜಾನೆಯಿಂದ ಮಧ್ಯಾಹ್ನವರೆಗೆ ಮಳೆಯಾಗಿದೆ. ನಗರದ ಕೆಲವು ಕಡೆ ರಸ್ತೆಗಳಲ್ಲಿ ನೀರು ನಿಂತಿತ್ತು. ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ, ನೆಲ್ಯಾಡಿ, ಮಡಂತ್ಯಾರು, ಬಂಟ್ವಾಳ, ಸರಪಾಡಿ, ಉಪ್ಪಿನಂಗಡಿ, ಪುತ್ತೂರು, ಕನ್ಯಾನ ಸಹಿತ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ, ಗುರುವಾರ ಮುಂಜಾನೆ ಸಾಧಾರಣ ಮಳೆಯಾಗಿದೆ. ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ರಾತ್ರಿ ಬಿಟ್ಟುಬಿಟ್ಟು ಮಳೆ ಸುರಿದಿದ್ದು, ಮಧ್ಯಾಹ್ನವರೆಗೂ ಮೋಡ ಕವಿದ ವಾತಾವರಣದ ನಡುವೆ ಹನಿ ಮಳೆ ಯಾಗಿದೆ. ಮಧ್ಯಾಹ್ನದ ಬಳಿಕ ಮೋಡ, ಬಿಸಿಲು ವಾತಾವರಣದಿಂದ ಕೂಡಿತ್ತು.

ಪುತ್ತೂರು: ಉತ್ತಮ ಮಳೆ
ಪುತ್ತೂರು: ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದು ಗುರುವಾರ ಪುತ್ತೂರು ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಬೆಳಗ್ಗೆ, ಮಧ್ಯಾಹ್ನದ ವೇಳೆಗೆ ತಾಲೂಕಿನ ವಿವಿಧ ಮಳೆ ಸುರಿದಿದೆ. ಕೆಲವೆಡೆ ಅಡಿಕೆ ಒಣಗಲು ಹಾಕಿದವರಿಗೆ ಸಮಸ್ಯೆ ಉಂಟಾಗಿದೆ.

ಬಂಟ್ವಾಳದಲ್ಲಿ ಮಳೆ
ಬಂಟ್ವಾಳ: ತಾಲೂಕಿನಾದ್ಯಂತ ಗುರುವಾರವೂ ಮಳೆ ಮುಂದುವರಿ ದಿದ್ದು, ಮುಂಜಾನೆ ಯಿಂದ ಮಧ್ಯಾಹ್ನದವರೆಗೂ ಸುರಿದಿದೆ. ಜ. 3ರಂದು ಬೆಳಗ್ಗೆ ಬಂದ ಮಳೆ 10 ಗಂಟೆಯ ಬಳಿಕ ಕಡಿಮೆಯಾದರೆ ಗುರುವಾರ ಮಧ್ಯಾಹ್ನದವರೆಗೂ ಹನಿ ಕಡಿಯದೆ ಸುರಿದಿತ್ತು. 2 ದಿನಗಳ ಕಾಲ ಮಳೆಯಾದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಅಡ್ಡಿಯಾಗಿದೆ.

ತಗ್ಗಿದ ಸೆಕೆ
ಬಿರುಸಿನ ಮಳೆಯ ಪರಿಣಾಮ ಜಿಲ್ಲೆಯಲ್ಲಿ ಸೆಕೆ ಕಡಿಮೆಯಾಗಿದ್ದು, ತುಸು ಚಳಿಯ ವಾತಾವರಣ ಇತ್ತು. ಗರಿಷ್ಠ ಉಷ್ಣಾಂಶ 26 ಡಿ.ಸೆ.ಗೆ ಇಳಿಕೆಗೊಂಡಿತ್ತು. 7 ಡಿ.ಸೆ. ವಾಡಿಕೆಗಿಂತ ಕಡಿಮೆ ಇತ್ತು. 23.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2 ಡಿ.ಸೆ. ಹೆಚ್ಚು ಇತ್ತು.

ಹವಾಮಾನ ಇಲಾಖೆ ಅಧಿಕಾರಿ ಗಳ ಪ್ರಕಾರ ಹಿಂಗಾರು ಮುಗಿದಿದೆ. ಚಳಿಗಾಲ ಆರಂಭವಾದರೂ ಇನ್ನೂ ಕೆಲವು ಕಡೆ ಮಳೆ ಮುಂದುವರೆ ಯಲಿದೆ. ವಾಯುಭಾರ ಕುಸಿತದ ಪರಿಣಾಮ ಕರಾವಳಿ ಭಾಗದಲ್ಲಿ ಮಳೆಯಾಗಿದೆ. ವಾಯುಭಾರ ಕುಸಿತ ದಿಂದಾಗಿ ಪೂರ್ವಕ್ಕೆ ಮೋಡ ಚಲನೆ ಯಾಗುತ್ತಿದೆ. ಇದು ಮಳೆಗೆ ಕಾರಣ.

ಸಿಡಿಲು ಬಡಿದು ಹಾನಿ
ಉಳ್ಳಾಲದ ಬಂಡಿಕೊಟ್ಯದ ನೇಲ್ಯದಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್‌ ಸಲಕರಣೆಗಳಿಗೆ ಹಾನಿ ಉಂಟಾಗಿದೆ. ಇಲ್ಲಿನ ಪ್ರವೀಣ್‌ ಗುರಿಕಾರ ಅವರ ಮನೆಗೆ ಹಾನಿಯಾಗಿದ್ದು, ಅದೃಷ್ಟವಶಾತ್‌ ಯಾವುದೇ ಅಪಾಯ ಸಂಭವಿಸಿಲ್ಲ.

ಇಂದು “ಎಲ್ಲೋ ಅಲರ್ಟ್‌’
ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಜ. 5ರಂದು “ಎಲ್ಲೋ ಅಲರ್ಟ್‌’ ಘೋಷಿಸಿದೆ. ಈ ವೇಳೆ ಜಿಲ್ಲೆಯಾದ್ಯಂತ ಭಾರೀ ಮಳೆ, ಗುಡುಗು ಇರುವ ಸಾಧ್ಯತೆ ಇದೆ. ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯೂ ಇದೆ.

ಬೆಳ್ತಂಗಡಿ: 2ನೇ ದಿನವೂ ಮಳೆ
ಬೆಳ್ತಂಗಡಿ: ಎರಡು ದಿನಗಳಿಂದ ವಾತಾವರಣ ದೊಂದಿಗೆ ಸಣ್ಣಗೆ ಸುರಿಯುತ್ತಿರುವ ಮಳೆಯಿಂದಾಗಿ ಮತ್ತೆ ರಸ್ತೆ ಸಹಿತ ಕೃಷಿ ಚಟುವಟಿಕೆಗೆ ತೊಡಕಾಗಿದೆ.
ಬುಧವಾರ ಮುಂಜಾನೆ ಸುರಿದ ಮಳೆ ಕೊಂಚ ಸಮಯ ಸುರಿದಿತ್ತು. ಮಧ್ಯಾಹ್ನದ ಬಳಿಕ ಸುಧಾರಣೆ ಕಂಡ ಮಳೆ ಗುರುವಾರ ಮತ್ತೆ ಸುರಿದಿದೆ. ಮಂಜು ಮುಸುಕಿದ ವಾತಾವರಣವೂ ಇತ್ತು. ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆ¨ªಾರಿಕರಣದ ಅಭಿವೃದ್ಧಿ ಕಾಮಗಾರಿ ಆಗುತ್ತಿರುವ ಕಡೆ ಕೆಸರುಮಯವಾಗಿ ಪರಿಣಮಿಸಿತು. ವಾಹನಗಳು ನಿಯಂತ್ರಣಕ್ಕೆ ಸಿಗದೆ ರಸ್ತೆ ತಡೆ ಉಂಟಾಯಿತು. ಮಧ್ಯಾಹ್ನ ಬಳಿಕ ಮತ್ತೆ ಬಿಸಿಲಿನ ವಾತಾವರಣ ಕಂಡುಬಂದಿದೆ.

ಸುಳ್ಯ, ಸುಬ್ರಹ್ಮಣ್ಯ: ದಿನವಿಡೀ ಮಳೆ
ಸುಳ್ಯ/ಸುಬ್ರಹ್ಮಣ್ಯ: ಸುಳ್ಯ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಗುರುವಾರ ಬಹುತೇಕ ಸಮಯ ನಿರಂತರ ಸಾಧಾರಣ ಮಳೆಯಾಗಿದೆ.
ಪೇಟೆ ಮತ್ತಿತರ ಕಡೆಗಳಿಗೆ ಕೊಡೆ, ರೈನ್‌ ಕೋಟ್‌ ಇಲ್ಲದೇ ಬಂದಿದ್ದ ಜನರು ಮಳೆಯಲ್ಲಿ ನೆನೆಯಬೇಕಾಯಿತು. ಗ್ರಾಮೀಣ ಭಾಗದಲ್ಲಿ ಒಣಗಲು ಹಾಕಿದ್ದ ಅಡಿಕೆಗಳನ್ನು ಟಾರ್ಪಾಲು ಹಾಕಿ ಮಳೆಯಿಂದ ರಕ್ಷಿಸುವ ಯತ್ನ ಮಾಡಲಾಯಿತು. ಸುಳ್ಯ ನಗರ, ಕಡಬ, ಸುಬ್ರಹ್ಮಣ್ಯ, ಮಂಡೆಕೋಲು, ಜಾಲೂÕರು, ಅರಂತೋಡು, ಸಂಪಾಜೆ, ಬೆಳ್ಳಾರೆ, ಪಂಜ, ಗುತ್ತಿಗಾರು, ಕೊಲ್ಲಮೊಗ್ರು, ಸುಬ್ರಹ್ಮಣ್ಯ, ಬಿಳಿನೆಲೆ, ಬಳ್ಪ, ಎಡಮಂಗಲ, ನಿಂತಿಕಲ್ಲು, ಕಲ್ಮಕಾರು, ಪಂಜ, ಬೆಳ್ಳಾರೆ ಪರಿಸರ ದಲ್ಲಿಯೂ ಸಾಧಾರಣ ಮಳೆಯಾಗಿತ್ತು.

ಕೊಡಗಿನಲ್ಲಿ ಮಳೆ: ಕಾಫಿ, ಭತ್ತ ಕೃಷಿಕರಲ್ಲಿ ಆತಂಕ
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ. ಬಹುತೇಕ ಕಡೆ ಸಾಧಾರಣ ಮಳೆ ನಿರಂತರವಾಗಿ ಸುರಿಯುತ್ತಿದೆ. ಕಾಫಿ ಮತ್ತು ಭತ್ತದ ಕೃಷಿಕರು ಬೆಳೆ ಹಾನಿಯ ಆತಂಕ ಎದುರಿಸುತ್ತಿದ್ದಾರೆ.

ಮಡಿಕೇರಿ, ವೀರಾಜಪೇಟೆ, ಸೋಮ ವಾರಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಹಲವೆಡೆ ಮಳೆಯಾಗಿದೆ. ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದಲ್ಲಿ ಮಳೆ, ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣವಿದೆ.

ಜಿಲ್ಲೆಯಲ್ಲಿ ಕಾಫಿ ಫ‌ಸಲು ಹಣ್ಣಾಗಿದ್ದು, ಬಹುತೇಕ ಕಡೆಗಳಲ್ಲಿ ಕೊಯಿಲು ಆರಂಭಗೊಂಡಿದೆ. ಮಳೆ, ಮೋಡದ ವಾತಾವರಣದಿಂದ ಕಾಫಿಯ ಗುಣಮಟ್ಟ ಕುಸಿಯುವ ಭೀತಿ ಎದುರಾಗಿದೆ. ಕೊçಲು ಮಾಡದೆ ಇರುವ ಕಾಫಿ ಕೊಳೆತು ಉದುರಲಿವೆ. ಮಾತ್ರವಲ್ಲದೆ ಈಗಾಗಲೇ ಕೊಯಿಲು ಮಾಡಿರುವ ಕಾಫಿಯನ್ನು ಒಣಗಿಸು ವುದೇ ಸವಾಲಾಗಿ ಪರಿಣಮಿಸಿದೆ.

ಭತ್ತದ ಫ‌ಸಲು ಕೂಡ ಕಟಾವಿಗೆ ಬಂದಿದ್ದು, ಬೆಳೆ ನಷ್ಟವಾಗುವ ಆತಂಕ ರೈತರಲ್ಲಿದೆ. ಕಟಾವು ಮಾಡಲಾಗಿರುವ ಭತ್ತದ ಫ‌ಸಲನ್ನು ಗದ್ದೆಯಲ್ಲೇ ಒಣಗಲು ಬಿಡಲಾಗಿದ್ದು, ಮಳೆ ನೀರು ಮತ್ತು ಮಂಜಿನಿಂದಾಗಿ ಹಾನಿಯಾಗುವ ಸಂಭವ ಇದೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.