ಮುಂದಿನ 2 ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕ: ಬೊಮ್ಮಾಯಿ

Team Udayavani, Feb 13, 2020, 9:18 PM IST

ಕೊಪ್ಪಳ: ಮುಂದಿನ ಎರಡು ವರ್ಷಗಳಲ್ಲಿ 16 ಸಾವಿರ ಪೊಲೀಸರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪತ್ರಕರ್ತರ ಜತೆ ಮಾತನಾಡಿದ ಅವರು, ಈ ವರ್ಷ 6,000 ಸಿಬಂದಿ ನೇಮಕ ಮಾಡಿಕೊಳ್ಳಲಿದ್ದು, ಮುಂದಿನ ವರ್ಷ ಉಳಿದ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.

ಠಾಣೆಗೆ ಬರುವವರೊಂದಿಗೆ ಬೆರೆತು ಸಮಸ್ಯೆ ಬಗೆಹರಿಸಲು “ಜನಸ್ನೇಹಿ ಪೊಲೀಸ್‌’ ಕಾರ್ಯಕ್ರಮ ಈ ಬಾರಿಯ ಬಜೆಟ್‌ನಲ್ಲಿ ಪ್ರಸ್ತಾವಕ್ಕೆ ಬರಲಿದೆ. ಪೊಲೀಸರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಕುರಿತು ಸಿಎಂ ಯಡಿಯೂರಪ್ಪ ಅವರು ಈಗಾಗಲೇ ಹಲವು ಸಭೆ ನಡೆಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಹೆಚ್ಚು ಒತ್ತು ನೀಡುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.
ಸರೋಜಿನಿ ಮಹಿಷಿ ವರದಿ ತುಂಬಾ ವರ್ಷಗಳಿಂದ ಚರ್ಚಿತ ವಿಚಾರ.

ಅದಕ್ಕೊಂದು ಕಾಯಕಲ್ಪ ಕೊಡಬೇಕೆಂಬುದು ನಮ್ಮ ಸರಕಾರದ ಮುಖ್ಯ ಉದ್ದೇಶ. ಈ ಬಗ್ಗೆ ಸಚಿವ ಸುರೇಶ್‌ ಕುಮಾರ್‌ ಅವರು ಪ್ರತಿಕ್ರಿಯಿಸಿದ್ದು, ವರದಿಯನುಸಾರ ಕನ್ನಡಿಗರಿಗೆ ಉದ್ಯೋಗ ಕೊಡಬೇಕು. ಖಾಸಗಿ ವಲಯದಲ್ಲೂ ಉದ್ಯೋಗ ನೀಡುವುದು ಸಹಿತ ಕೆಲ ನೂನ್ಯತೆ ತೆಗೆದು ಹಾಕಿ ಕೆಲವೇ ದಿನಗಳಲ್ಲಿ ಸರಕಾರ ವರದಿಗೆ ಸ್ಪಷ್ಟತೆ ಕೊಡಲಿದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಕರ್ನಾಟಕ ಪಬ್ಲಿಕ್‌ ಶಾಲೆಯ ಪೂರ್ವ ಪ್ರಾಥಮಿಕ(ಎಲ್‌ಕೆಜಿ,ಯುಕೆಜಿ) ತರಗತಿ ಮಕ್ಕಳಿಗೆ "ಥೀಮ್‌' ಆಧಾರಿತ ಕಲಿಕೆಗೆ ಪೂರಕವಾಗುವಂತೆ ಪಠ್ಯಕ್ರಮದ ಕರಡು...

  • ಬೆಳಗಾವಿ: ಪಕ್ಕದಲ್ಲೇ ಜೀವನದಿ ಕೃಷ್ಣೆ ಹರಿಯುತ್ತಿದ್ದರೂ ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುವ ನದಿ ತೀರದ ನೂರಾರು ಗ್ರಾಮಗಳಿಗೆ...

  • ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ಹೇಳಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ...

  • ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆದ ಪ್ರತಿಭಟನಾ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ...

  • ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಫೆ.25ರಿಂದ ಮಾರ್ಚ್‌ 2ರವರೆಗೆ ರಾಘವೇಂದ್ರ ಸ್ವಾಮಿಗಳ 399ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ ಗುರುರಾಜರ 425ನೇ...

ಹೊಸ ಸೇರ್ಪಡೆ