ದುಪ್ಟಟ್ಟು ಹಣ ಕೇಳಲಿರುವ ಬಿಬಿಎಂಪಿ


Team Udayavani, Jan 31, 2023, 10:06 AM IST

ದುಪ್ಟಟ್ಟು ಹಣ ಕೇಳಲಿರುವ ಬಿಬಿಎಂಪಿ

ಬೆಂಗಳೂರು: ಬಿಬಿಎಂಪಿ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸಲುವಾಗಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಕೇಳಲು ನಿರ್ಧರಿಸಲಾಗಿದೆ. ಮಾಮೂಲಿಯಂತೆ ರಾಜ್ಯ ಬಜೆಟ್‌ನಲ್ಲಿ ಬಿಬಿಎಂಪಿಗೆ 3ರಿಂದ 3,500 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಆದರೆ, ಈ ಬಾರಿ 7 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂಲಸೌಕರ್ಯ ಒದಗಿಸುವುದು ಸೇರಿ ಹೊಸ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿನ ಬಜೆಟ್‌ ಸಿದ್ಧಪಡಿಸಲು ಬಿಬಿಎಂಪಿ ಹಣಕಾಸು ವಿಭಾಗ ಸಿದ್ಧತೆ ನಡೆಸಿದೆ. ಈಗಾಗಲೇ ವಿಭಾಗವಾರು ಬೇಡಿಕೆ ಪಡೆದು ಸಭೆ ನಡೆಸಲಾಗುತ್ತಿದೆ. ಸದ್ಯದ ಮಟ್ಟಿಗೆ ಬಿಬಿಎಂಪಿಯ ವಿವಿಧ ವಿಭಾಗಗಳಿಂದ ನಿರ್ವಹಣಾ ಕಾಮಗಾರಿಗಳಿಗಷ್ಟೇ ಅನುದಾನ ಕೋರಲಾಗಿದೆ. ಅದರ ಪ್ರಕಾರ 5ರಿಂದ 6 ಸಾವಿರ ಕೋಟಿ ರೂ. ಮೊತ್ತ ಬೇಕಾಗಲಿದೆ. ಅದರ ಜತೆಗೆ ಹೆಚ್ಚುವರಿಯಾಗಿ ಈಗಾಗಲೇ ಆರಂಭಿಸಲಾಗಿರುವ ಕಾಮಗಾರಿಗಳಿಗಾಗಿ ಅಂದಾಜು 7 ಸಾವಿರ ಕೋಟಿ ರೂ.ಗೂ ಹೆಚ್ಚಿನ ಹಣ ಬೇಕಾಗಲಿದೆ. ಆ ಹಣವನ್ನು ರಾಜ್ಯ ಸರ್ಕಾರದಿಂದ ಪಡೆಯಲು ಬಿಬಿಎಂಪಿ ನಿರ್ಧರಿಸಿದ್ದು, ಅದಕ್ಕಾಗಿ ಪ್ರಸ್ತಾವನೆ ಸಿದ್ಧಪಡಿಸುತ್ತಿದೆ.

ಬಿಬಿಎಂಪಿಗೆ ಆಸ್ತಿ ತೆರಿಗೆ ಮಾತ್ರ ಅತಿದೊಡ್ಡ ಆದಾಯದ ಮೂಲವಾಗಿದೆ. ಪ್ರಸಕ್ತ ಸಾಲಿನಲ್ಲಿ (2022-23) 10943.54 ಕೋಟಿ ರೂ. ಬಜೆಟ್‌ ಮಂಡಿಸಿ, 4,200 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿತ್ತು. ಅದರಲ್ಲಿ ಈವರೆಗೆ 2,900 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ. ಇದನ್ನು ಗಮನಿಸಿದರೆ ಬಿಬಿಎಂಪಿ ಆದಾಯದಿಂದ ಬಾಕಿ ಬಿಲ್‌ಗ‌ಳ ಪಾವತಿ ಸೇರಿ ಇನ್ನಿತರ ವೆಚ್ಚಗಳನ್ನು ಮಾಡುವುದು ಸಾಧ್ಯವಾಗುವುದಿಲ್ಲ. ಹೀಗಾಗಿ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅನುದಾನ ಪಡೆಯುವುದು ಅನಿವಾರ್ಯವಾಗಿದೆ.

10 ಸಾವಿರ ಕೋಟಿ ರೂ. ಬಾಕಿ ಬಿಲ್‌: ಸದ್ಯ ಅಮೃತ ನಗರೋತ್ಥಾನ ಅನುದಾನದ ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಸಾವಿರ ಕೋಟಿ ರೂ. ಗೂ ಹೆಚ್ಚಿನ ಕಾಮಗಾರಿ ನಡೆಸಲಾಗುತ್ತಿದೆ. ಅದರ ಜತೆಗೆ ಬಾಕಿ ಬಿಲ್‌ 3 ಸಾವಿರ ಕೋಟಿ ರೂ.ಗೂ ಹೆಚ್ಚಿದೆ. ಒಟ್ಟಾರೆ ಬಿಬಿಎಂಪಿಯ ಹೊಣೆಗಾರಿಕೆ 10 ಸಾವಿರ ಕೋಟಿ ರೂ. ದಾಟಲಿದೆ. ಅಮೃತ ನಗರೋತ್ಥಾನದ ಅನುದಾನದಲ್ಲಿ ರಾಜ್ಯ ಸರ್ಕಾರ ಬಿಬಿಎಂಪಿಗೆ 3 ಸಾವಿರ ಕೋಟಿ ರೂ. ಅನುದಾನ ನೀಡಿದೆ.

ಹೀಗಾಗಿ ಅಮೃತ ನಗರೋತ್ಥಾನ ಅನುದಾನದ ಬಾಕಿ ಮೊತ್ತ 3 ಸಾವಿರ ಕೋಟಿ ರೂ. ಇನ್ನೂ ನೀಡಬೇಕಿದೆ. ಅದರ ಜತೆಗೆ ಈ ವರ್ಷದ ಕಾಮಗಾರಿಗಳಿಗಾಗಿ ಹಾಗೂ ಬಾಕಿ ಬಿಲ್‌ ಪಾವತಿಗಾಗಿ ಹೆಚ್ಚುವರಿಯಾಗಿ 4 ಸಾವಿರ ಕೋಟಿ ರೂ.ಗಳು ಸೇರಿ 7 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸುವಂತೆ ಬಿಬಿಎಂಪಿ ಕೋರಲಿದೆ.

ಬಜೆಟ್‌ ಸಭೆ ವೇಳೆ ಪ್ರಸ್ತಾಪ: ಫೆ. 17ರಂದು ರಾಜ್ಯ ಬಜೆಟ್‌ ಮಂಡನೆ ಮಾಡುವ ಸಾಧ್ಯತೆಗಳಿವೆ. ಅದಕ್ಕೆ ಆರ್ಥಿಕ ಇಲಾಖೆ ಈಗಾಗಲೆ ಸಿದ್ಧತೆಯನ್ನೂ ಮಾಡಿಕೊಂಡಿದೆ. ಇಲಾಖಾವಾರು ಸಭೆಗಳನ್ನು ನಡೆಸಿ ಬೇಡಿಕೆ ಹಾಗೂ ಯೋಜನೆಗಳ ಪ್ರಸ್ತಾವನೆಯನ್ನು ಪಡೆಯಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿಯಲ್ಲಿಯೇ ಆರ್ಥಿಕ ಇಲಾಖೆ ಇರುವ ಕಾರಣ ಅವರ ನೇತೃತ್ವದಲ್ಲಿಯೇ ಬಜೆಟ್‌ ಸಿದ್ಧಗೊಳ್ಳುತ್ತಿದೆ. ಇನ್ನೊಂದು ವಾರದಲ್ಲಿ ಬಿಬಿಎಂಪಿ ಸೇರಿ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯಿಂದ ಸಭೆ ನಡೆಯಲಿದೆ.

ಈ ವೇಳೆ ಬಿಬಿಎಂಪಿಯ ಆರ್ಥಿಕ ಪರಿಸ್ಥಿತಿ, 2023-24ನೇ ಸಾಲಿಗೆ ಬೇಕಾಗುವ ಅನುದಾನ, ರಾಜ್ಯ ಬಜೆಟ್‌ನಲ್ಲಿ ಘೋಷಿಸಬಹು ದಾದ ಯೋಜನೆಗಳ ಕುರಿತಂತೆ ಪಟ್ಟಿಯನ್ನು ಬಿಬಿಎಂಪಿ ಅಧಿಕಾರಿಗಳು ಸಲ್ಲಿಸಲಿದ್ದಾರೆ.

ರಾಜ್ಯ ಸರ್ಕಾರ ಪ್ರತಿ ಬಾರಿ 3 ಸಾವಿರ ಕೋಟಿ ರೂ.ಗಳಷ್ಟು ಅನುದಾನವನ್ನು ಬಿಬಿಎಂಪಿಗೆ ನೀಡುತ್ತಿದೆ. ಆದರೆ, 2023-24ನೇ ಸಾಲಿನಲ್ಲಿ 7 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಕೋರಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ರಾಜ್ಯ ಬಜೆಟ್‌ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು. -ಜಯರಾಂ ರಾಯಪುರ, ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು)

-ಗಿರೀಶ್‌ ಗರಗ

ಟಾಪ್ ನ್ಯೂಸ್

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-8

ಚೀನಾ ಆ್ಯಪ್‌ಗಳ 106 ಕೋಟಿ ಆಸ್ತಿ ಜಪ್ತಿ

tdy-7

108 ಪ್ರಕರಣದ ಆರೋಪಿ ಬಂಧನ

TDY-6

19 ಕ್ಷೇತ್ರಗಳಲ್ಲಿ ಖರ್ಚು ವೆಚ್ಚ ಗುರುತು

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!