ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು : ಅಧಿಕಾರಿಗಳ ಜೊತೆ ಕೃಷಿ ಸಚಿವರ ವಿಡಿಯೋ ಸಂವಾದ


Team Udayavani, Aug 13, 2020, 5:40 PM IST

ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು : ಕೃಷಿ ಸಚಿವ ಬಿ‌.ಸಿ.ಪಾಟೀಲ್

ಬೆಂಗಳೂರು : ರೈತ ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು, ಬೆಳೆ ಸಮೀಕ್ಷೆಯನ್ನು ಯಶಸ್ವಿಯನ್ನಾಗಿಸಿ ಸರ್ಕಾರದ ಉತ್ಸವವನ್ನಾಗಿಸುವ ದೊಡ್ಡಮಟ್ಟದ ಸವಾಲು ಎಲ್ಲರ ಮುಂದಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಹೇಳಿದ್ದಾರೆ.

ಕೃಷಿ ಇಲಾಖೆಯ ಸಮೃದ್ಧಿ ಸಭಾಂಗಣದಲ್ಲಿ ಗುರುವಾರ ರಾಜ್ಯದ ಎಲ್ಲಾ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಕೆವಿಕೆ ಸೇರಿದಂತೆ ಕೃಷಿ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಕೃಷಿ ಸಚಿವರು.

ಬೆಳೆ ಸಮೀಕ್ಷೆ ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆಯ ಕೆಲಸವೆಂದು ವರ್ಗೀಕರಿಸುವುದು‌ ಬೇಡ‌.ಇದು ಸರ್ಕಾರದ ಕೆಲಸವೆಂದು ಒಗ್ಗಟ್ಟಾಗಿ ಎಲ್ಲರೂ ಪಾಲ್ಗೊಂಡು ಬೆಳೆ ಸಮೀಕ್ಷೆಯನ್ನು ಆಯಾ ರೈತರಿಂದಲೇ ಮಾಡಿಸಿಅಪ್ಲೋಡ್ ಮಾಡಿಸಬೇಕು‌.

ಸ್ವಾಭಿಮಾನಿ ರೈತ ತನ್ನ ಹೊಲದ ಸಮೀಕ್ಷೆಯನ್ನು ತಾನೇ ನಡೆಸಿ ರೈತನೇ ಸರ್ಟಿಫಿಕೇಟ್ ಕೊಡುವಂತಹ ವಿಶೇಷ ಯೋಜನೆಯಿದು. ತಾಲೂಕಿನ ಎಡಿಎಗಳು ಸ್ಥಳೀಯ ಶಾಸಕರನ್ನು ರೈತರ ಹೊಲಕ್ಕೆ ಕರೆದುಕೊಂಡು ಹೋಗಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಫೋಟೋ ಅಪ್ಲೋಡ್ ಮಾಡಿಸಬೇಕು.ತೋಟಗಾರಿಕೆ ಮತ್ತು ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳು ಪ್ರೊಪೆಸರ್‌ಗಳನ್ನು ಸಹಾಯಕ ಪ್ರೊಪೆಸರ್‌ಗಳನ್ನು ಸಹ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಚಾರಕ್ಕೆ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್ ರಚಿಸಿ ಕೃಷಿ ತೋಟಗಾರಿಕಾ ವಿದ್ಯಾರ್ಥಿಗಳು ರೈತರು ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಬೆಳೆ ವಿವರ ಅಪ್ಲೋಡ್ ಮಾಡಲು ನೆರವಾಗುವಂತೆ ಹೇಳಬೇಕು. ಸಾಮಾಜಿಕ ಜಾಲತಾಣಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಕು, ಸಹಕಾರಿ ಸಂಘಗಳು ಹಾಲು ಉತ್ಪಾದಕ ಸಂಘಗಳ ಪ್ರತಿನಿಧಿಗಳನ್ನು ಹಾಗೂ ಕೃಷಿ ಇಲಾಖೆಯಲ್ಲಿರುವ ಹತ್ತು ಸಾವಿರ ಅಧಿಕಾರಿಗಳನ್ನು ಬಳಸಿಕೊಂಡು ಹೆಚ್ಚೆಚ್ಚು ಬೆಳೆ ಸಮೀಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಬೆಳೆ ಸಮೀಕ್ಷೆ ಆ್ಯಪ್ ಹಾಗೂ ರೈತರೇ ತಮ್ಮ ಬೆಳೆ ಸಮೀಕ್ಷೆ ವಿವರ ದಾಖಲಿಸುವಂತೆ ಮಾಡಬೇಕು. ರೈತರೇ ನೇರವಾಗಿ ಆ್ಯಪ್‌ನಲ್ಲಿ ವಿವರ ದಾಖಲಿಸುವಂತೆ ಮಾಡಬೇಕು.ಇದು ಬೆಳೆ ಸಮೀಕ್ಷೆ ಸರ್ಕಾರದ ಹಬ್ಬವಾಗಬೇಕು. ಇದಕ್ಕಾಗಿಯೇ ಬೆಳೆ ಸಮೀಕ್ಷೆಯನ್ನು ಉತ್ಸವ – 2020 ಎಂದು ಕರೆಯಲಾಗಿದೆ ಎಂದು ಸಚಿವರು ವಿವರಿಸಿದರು‌.

ವಿಡಿಯೋ ಸಂವಾದವನ್ನುದ್ದೇಶಿಸಿ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್,ಕಳೆದ ಮೂರು ವರ್ಷಗಳಿಂದ ತಂತ್ರಜ್ಞಾನದ ಮೂಲಕ ಬೆಳೆ ಸಮೀಕ್ಷೆ ರಾಜ್ಯದಲ್ಲಿ ಯಶಸ್ವಿಯಾಗುತ್ತಾ ಬಂದಿದೆ. ರಾಷ್ಟ್ರೀಯಮಟ್ಟದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕದ ಬೆಳೆ ಸಮೀಕ್ಷೆಗೆ ಉತ್ತಮ ಪ್ರಶಂಸೆ ದೊರೆತಿದೆ. ಕೇಂದ್ರದ ಕಾರ್ಯದರ್ಶಿಗಳಿಗೆ ರಾಜ್ಯದ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿತ್ತು. ಬೆಳೆ ಆ್ಯಪ್ ಬಳಕೆ, ಪ್ರಯೋಜನ, ರೈತರಿಗಾಗುವ ಲಾಭ,ಇಲಾಖೆಗಾಗುವ ಆರ್ಥಿಕ ಲಾಭವನ್ನು ಕಂಡು ಕೇಂದ್ರ ಸರ್ಕಾರ ಕರ್ನಾಟಕದಲ್ಲಿನ ಬೆಳೆ ಸಮೀಕ್ಷೆ ಆ್ಯಪ್ ಅನ್ನು ದೇಶದ ಇತರೆ ರಾಜ್ಯಗಳಿಗೂ ವಿಸ್ತರಿಸಲು ಮುಂದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ತಂತ್ರಜ್ಞಾನವನ್ನು ಬಳಸಿ ಬೆಳೆ ಸಮೀಕ್ಷೆ ಮಾಡಿರುವುದು ಬಹಳ ಲಾಭದಾಯಕಾರಿಯಾಗಿದ್ದು, ತಂತ್ರಜ್ಞಾನದ ಬೆಳೆ ಸಮೀಕ್ಷೆಯಿಂದ ಸುಮಾರು 7ಲಕ್ಷ ಮೆಕ್ಕೆಜೋಳ ಬೆಳೆದ ರೈತರ ಖಾತೆಗೆ ನೇರವಾಗಿ ಸರ್ಕಾರದ ಸಹಾಯಧನ ವರ್ಗಾಯಿಸಲು ಅನುಕೂಲವಾಗಿದೆ. ಅದರಂತೆ ಹಣ್ಣು, ಹೂವು, ತರಕಾರಿ ಬೆಳೆದ ರೈತರಿಗೆ ಸೂಕ್ತ ಪ್ಯಾಕೇಜ್ ಘೋಷಿಸಲು ಸಹಾಯಕವಾಯಿತು‌. ರೈತರು ಮನೆಯಿಂದ ಹೊರಗೆ ಹೋಗದೇ ಅವರ ಖಾತೆಗೆ ಹಣ ಜಮೆಯಾಗಲು ಈ ತಂತ್ರಜ್ಞಾನದಿಂದ ಬೆಳೆ ಸಮೀಕ್ಷೆ ನಡೆಸಲಾಗಿದೆ. ಕಳೆದ ವರ್ಷ 2 ಕೋಟಿ 10 ಲಕ್ಷ ಸರ್ವೆ ನಂಬರ್ ಗಳನ್ನು ಸಮೀಕ್ಷೆ ನಡೆಸಲಾಗಿದೆ. ಈ ವರ್ಷ ರೈತ ಬೆಳೆ ಸಮೀಕ್ಷೆ ಆ್ಯಪ್ ಬಳಸಿ ಕಳೆದ ವರ್ಷಕ್ಕಿಂತಲೂ ಇನ್ನೂ ಹೆಚ್ಚಿನ ಬೆಳೆ ಸಮೀಕ್ಷೆ ನಡೆಸಬೇಕೆಂದು ವಿಜಯ್ ಭಾಸ್ಕರ್ ಅವರು ಸೂಚಿಸಿದರು.

ಕೃಷಿ ಇಲಾಖೆ ನಿರ್ದೇಶ ಶ್ರೀನಿವಾಸ್ ಪ್ರಾಸ್ತಾವಿಕ ಮಾತನಾಡಿ, ಬೆಳೆ ಸಮೀಕ್ಷೆ ಯಶಸ್ವಿಯಾಗುವಂತೆ ಎಲ್ಲರೂ ನೋಡಿಕೊಳ್ಳಬೇಕು.ಆಗಸ್ಟ್ 24ರೊಳಗೆ ಸಮೀಕ್ಷೆ ಪೂರ್ಣ ಹಾಗೂ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು.ಗ್ರಾಮಮಟ್ಟದಿಂದ ರಾಜ್ಯಮಟ್ಟದವರೆಗಿನ ಎಲ್ಲಾ ಸಮಿತಿಗಳು ಸಮೀಕ್ಷೆಯ ಸಫಲತೆ ಹಾಗೂ ಪೂರ್ಣತೆಗೆ ದುಡಿಯಬೇಕೆಂದು ಕರೆ ನೀಡಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.