ಈಗ ಜನಸೇವೆಗೆ ವೈದ್ಯರ ಕೊರತೆ ತಲೆಬಿಸಿ

ಖಾಲಿ ಹುದ್ದೆಗಳಿಗೆ ಭರ್ತಿ ಆಗ್ತಿಲ್ಲ ವೈದ್ಯರು | ಗ್ರಾಮೀಣದಲ್ಲಿ ಕರ್ತವ್ಯ ಸಲ್ಲಿಸಲು ಹಿಂದೇಟು | ಹಳ್ಳಿ ಜನಕ್ಕೆ ತೊಂದರೆ

Team Udayavani, Apr 10, 2020, 7:01 PM IST

10-April-16

ಬೆಳಗಾವಿ: ಕೊರೊನಾ ಸೋಂಕು ಹರಡುತ್ತಿರುವ ಇಂಥ ಸಂದಿಗ್ಧ ಸ್ಥಿತಿಯಲ್ಲಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಪಾಸಿಟಿವ್‌ ಕೇಸ್‌ಗಳು ದಿನದಿಂದ-ದಿನಕ್ಕೂ ಹೆಚ್ಚುತ್ತಿರುವ ಭೀತಿಯಲ್ಲಿಯೂ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯೂ ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಎರಡು ವೈದ್ಯಕೀಯ ಕಾಲೇಜು ಹೊಂದಿರುವ ರಾಜ್ಯದ ಅತಿ ದೊಡ್ಡ ಜಿಲ್ಲೆ ಎಂಬ ಖ್ಯಾತಿಗೆ ಒಳಗಾದ ಬೆಳಗಾವಿ ವೈದ್ಯರ ಕೊರತೆಯಿಂದ ಸೊರಗುತ್ತಿದೆ. ಕೋವಿಡ್‌-19 ಮಹಾಮಾರಿ ಬೆಳಗಾವಿಯನ್ನು ಮತ್ತಷ್ಟು ಸಂಕಷ್ಟಕ್ಕೆ ದುಡಿದೆ. ದಿನದಿಂದ ದಿನಕ್ಕೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಅನೇಕ ವೈದ್ಯ ತಜ್ಞರು, ಫಾರ್ಮಾಸಿಸ್ಟ್‌ಗಳು, ಪ್ರಯೋಗಾಲಯ ತಜ್ಞರು, ಕಿರಿಯ ಆರೋಗ್ಯ ಸಹಾಯಕ, ಸಹಾಯಕಿಯರು ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಉಳಿದಿವೆ.

ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಖಾಲಿ ಹುದ್ದೆ ಭರ್ತಿಗೆ ಅನೇಕ ಸಲ ಅರ್ಜಿ ಆಹ್ವಾನಿಸಿದರೂ ವೈದ್ಯರ ನೇಮಕಾತಿ ಆಗುತ್ತಿಲ್ಲ. ಸರ್ಕಾರಿ ವೈದ್ಯರಾಗುವುದು ಅನೇಕರಿಗೆ ಬೇಡ ಎನ್ನಿಸುತ್ತಿದೆ. ವೇತನ ಹೆಚ್ಚಿಸಿದರೂ ವೈದ್ಯರಾಗಿ ಕಾರ್ಯನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ಖಾಸಗಿ ಆಸ್ಪತ್ರೆಯೋ ಅಥವಾ ಸ್ವಂತ ಆಸ್ಪತ್ರೆ ತೆರೆಯುತ್ತಿರುವ ವೈದ್ಯರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರದ ನೇಮಕಾತಿಗಳ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ.

ಜಿಲ್ಲೆಯಲ್ಲಿ ಸದ್ಯ 139 ಪ್ರಾಥಮಿಕ ಆರೋಗ್ಯ ಕೇಂದ್ರ, 16 ಸಮುದಾಯ ಆರೋಗ್ಯ ಕೇಂದ್ರ ಮತ್ತು 9 ಸಾರ್ವಜನಿಕ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಬೆಳಗಾವಿಯಲ್ಲಿ 12 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಿಪ್ಪಾಣಿ ಹಾಗೂ ಗೋಕಾಕದಲ್ಲಿ ತಲಾ ಒಂದು ಕೇಂದ್ರಗಳಿವೆ. ಸುಮಾರು 242 ವೈದ್ಯರು ಹಾಗೂ ಸಿಬ್ಬಂದಿ ಹುದ್ದೆಗಳು ಖಾಲಿ ಉಳಿದಿವೆ. ಬಹುತೇಕ ಆಸ್ಪತ್ರೆಗಳಲ್ಲಿ ಕೋಟ್ಯಂತರ ರೂ. ವೆಚ್ಚ ಮಾಡಿ ವೈದ್ಯಕೀಯ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಆದರೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲದಿರುವುದು ಗ್ರಾಮೀಣ ಭಾಗದ ಜನರಿಗೆ ಸಮಸ್ಯೆಯಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನೇ ಕೆಲವು ಕಡೆಗಳಲ್ಲಿ ನಿಯೋಜಿಸಲಾಗಿದೆ. ಹೀಗಾಗಿ  ಹುತೇಕ ಆಸ್ಪತ್ರೆಗಳಲ್ಲಿ ಒತ್ತಡ ಕಡಿಮೆಯಾಗಿದೆ. ಆರೋಗ್ಯ ಇಲಾಖೆಯ ಖಾಯಂ ಹುದ್ದೆಗಳಿಗೆ ಮಾಸಿಕ 90 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ. ಗುತ್ತಿಗೆ ಆಧಾರದ ತಜ್ಞ ವೈದ್ಯರಿಗೆ ಮಾಸಿಕ 1.10 ಲಕ್ಷ ರೂ. ವೇತನ ಪಾವತಿಸಲಾಗುತ್ತಿದೆ. ಆದರೂ ವೈದ್ಯರು ಸಂದರ್ಶನಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ.

22 ಖಾಲಿ ಹುದ್ದೆ ಖಾಲಿ
ಎಂಬಿಬಿಎಸ್‌ ವೈದ್ಯರು 156 ಹುದ್ದೆಗಳ ಪೈಕಿ 22 ಖಾಲಿ ಉಳಿದುಕೊಂಡಿವೆ. ಇದರಲ್ಲಿ 6 ಜನರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧೆಡೆ ತಜ್ಞ ವೈದ್ಯರು 92ರ ಪೈಕಿ 42 ಖಾಲಿ ಉಳಿದಿದ್ದು, ಇದರಲ್ಲಿ 24 ಜನರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪಡೆದುಕೊಳ್ಳಲಾಗಿದೆ. ಗ್ರಾಮದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ (ಎಎನ್‌ಎಂ) 633ರಲ್ಲಿ 208 ಖಾಲಿ ಉಳಿದಿವೆ. ಸ್ಟಾಫ್‌ ನರ್ಸ್‌ ಎಲ್ಲವೂ ಭರ್ತಿಯಾಗಿದ್ದು, 3,608 ಆಶಾ ಕಾರ್ಯಕರ್ತೆಯರ ಹುದ್ದೆಗಳು ಭರ್ತಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್‌, ತಜ್ಞ ವೈದ್ಯರ ಕೊರತೆ ಇದೆ. ನೇಮಕಾತಿ ಮಾಡುವಂತೆ ಸರ್ಕಾರಕ್ಕೆ ತಿಳಿಸಲಾಗಿದೆ. ಗ್ರಾಮೀಣ ಮಟ್ಟದಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸುವಲ್ಲಿ ಹಿಂದೇಟು ಹಾಕುತ್ತಿರುವುದು ನಿಜ.
ಡಾ| ಶಶಿಕಾಂತ ಮುನ್ಯಾಳ,
ಜಿಲ್ಲಾ ಆರೋಗ್ಯಾಧಿಕಾರಿ

ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.