Ballary: ವಿದ್ಯಾರ್ಥಿನಿ ಅಪಹರಿಸಿ ಸಾಮೂಹಿಕ
Team Udayavani, Oct 14, 2023, 10:56 PM IST
ಬಳ್ಳಾರಿ: ಅಣ್ಣ ಕರೆಯುತ್ತಿದ್ದಾನೆಂದು ಸುಳ್ಳು ಹೇಳಿ ಕಾಲೇಜಿನಿಂದ ಬಿ.ಕಾಂ. ವಿದ್ಯಾರ್ಥಿನಿಯೊಬ್ಬಳನ್ನು ಆಟೋದಲ್ಲಿ ಕರೆದೊಯ್ದ ನಾಲ್ವರು ಯುವಕರು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಣಾಪುರ ಬಳಿಯ ಹೋಟೆಲ್ನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಮುಖ ಆರೋಪಿ ನವೀನ್ ಎಂಬವನನ್ನು ಬಂಧಿಸಲಾಗಿದೆ. ಉಳಿದ ಮೂವರು ಆರೋಪಿಗಳ ಬಂಧನಕ್ಕೆ ಶೋಧ ಮುಂದುವರಿದಿದೆ ಎಂದು ಎಸ್ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಪದವಿ ಕಾಲೇಜೊಂದರಲ್ಲಿ ಕಳೆದ ಅ.11ರಂದು ಮಧ್ಯಾಹ್ನ ಸಂತ್ರಸ್ತೆ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಲ್ಲಿಗೆ ಬಂದ ಆಕೆಯ ಸ್ನೇಹಿತ ಎನ್ನಲಾದ ಆರೋಪಿ ನವೀನ್, ನಿಮ್ಮ ಅಣ್ಣ ಕರೆಯುತ್ತಿದ್ದಾನೆಂದು ಹೇಳಿ ಕರೆದಿದ್ದಾನೆ. ಆಕೆ ಹೊರಗೆ ಬಂದಾಗ ನಾಲ್ವರು ಯುವಕರು ಬಲವಂತವಾಗಿ ಆಟೋದಲ್ಲಿ ಕೂರಿಸಿಕೊಂಡು ಕಿಡ್ನಾಪ್ ಮಾಡಿದ್ದಾರೆ. ಬಳಿಕ ಸಣಾಪುರ ಬಳಿಯ ಹೊಟೇಲ್ನ ಕೊಠಡಿಗೆ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
ಅಲ್ಲಿಂದ ವಾಪಸ್ ಬಳ್ಳಾರಿಗೆ ಬಂದ ಸಂತ್ರಸ್ತ ಯುವತಿ, ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಬಂಧಿತ ನವೀನ್ನೇ ಮುಂದೆ ನಿಂತು ಉಳಿದ ಯುವಕರೊಂದಿಗೆ ಈ ಕೃತ್ಯವೆಸಗಿದ್ದಾನೆ ಎನ್ನಲಾಗುತ್ತಿದೆ. ಈ ಯುವತಿ ಹಾಗೂ ನಾಲ್ವರು ಯುವಕರು ನಗರದ ಕೌಲ್ಬಜಾರ್ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ