Belthangady ಚಿನ್ನ ಕೊಡುವ ಆಮಿಷವೊಡ್ಡಿ ಕೊಲೆ; 6 ಮಂದಿ ಸೆರೆ

ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಸುಟ್ಟು ಹಾಕಿರುವ ಪ್ರಕರಣ

Team Udayavani, Mar 26, 2024, 6:45 AM IST

Belthangady ಚಿನ್ನ ಕೊಡುವ ಆಮಿಷವೊಡ್ಡಿ ಕೊಲೆ; 6 ಮಂದಿ ಸೆರೆ

ಬೆಳ್ತಂಗಡಿ/ತುಮಕೂರು: ತಾಲೂಕಿನ ಕೋರಾ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ಒಂದು ಕಾರಿನಲ್ಲಿ ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿ ಮೂರು ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ. ಆಶೋಕ್‌ ತಿಳಿಸಿದ್ದಾರೆ.

ತುಮಕೂರು ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್‌ಪಿ ಅವರು, ಪುಟ್ಟಸ್ವಾಮಯ್ಯ ಪಾಳ್ಯದ ಮಧು (24), ಸಂತೆಪೇಟೆಯ ನವೀನ್‌ (24), ವೆಂಕಟೇಶಪುರದ ಕೃಷ್ಣ (22), ಹೊಂಬಯ್ಯನಪಾಳ್ಯದ ಗಣೇಶ ( 19), ನಾಗಣ್ಣ ಪಾಳ್ಯದ ಕಿರಣ್‌ (23) ಹಾಗೂ ಕಾಳಿದಾಸನಗರದ ಸೈಮನ್‌ (18) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಹೇಳಿದರು.

ಸಂಚು ರೂಪಿಸಿದ್ದರು
ಬಂಧಿತ ಆರೋಪಿಗಳು 3 ಕೆ.ಜಿ. ಚಿನ್ನ ಕೊಡುವ ಆಮಿಷವೊಡ್ಡಿ ಸಂಚು ರೂಪಿಸಿ ಬೀರನಕಲ್ಲು ಬೆಟ್ಟದ ಸಮೀಪ ಕರೆದೊಯ್ದು ಮಚ್ಚು, ಡ್ರ್ಯಾಗನ್‌, ಲಾಂಗ್‌ನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಅನಂತರ ಅವರದ್ದೇ ಕಾರಿನಲ್ಲಿ ಕುಚ್ಚಂಗಿ ಕೆರೆಗೆ ತೆಗೆದುಕೊಂಡು ಬಂದು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ. ಇದು ತನಿಖೆಯಲ್ಲಿ ತಿಳಿದು ಬಂದಿದೆ ಎಂದರು.

ಚಿನ್ನ ಕೊಳ್ಳುವ ಆಮಿಷ
ಕುಚ್ಚಂಗಿ ಕೆರೆಯಲ್ಲಿ ಸಿಕ್ಕ ಕಾರಿನಲ್ಲಿ ಮೂರು ಮೃತದೇಹ ಪತ್ತೆ ಪ್ರಕರಣವನ್ನು ಭೇದಿಸುವಲ್ಲಿ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ.ನಿಧಿಯಲ್ಲಿ ಸಿಕ್ಕ ಚಿನ್ನವನ್ನು ಕೊಳ್ಳುವ ಆಮಿಷವನ್ನು ನಂಬಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಹೋಗಿದ್ದ ಮೂವರಿಗೆ ಮೋಸ ಮಾಡಿ ಅವರನ್ನು ಕೊಂದು ಚಿನ್ನ ಕೊಳ್ಳಲು ತಂದಿದ್ದ ಹಣವನ್ನು ದೋಚಿರುವ ಘಟನೆ ಇದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಶಾಕ್‌ ಸೀಮಮ್‌ (54), ಶಾಹುಲ್‌ ಹಮೀದ್‌ (45), ಸಿದ್ಧಿಕ್‌ (34) ಅವರು ಮೃತಪಟ್ಟವರು. ಪ್ರಕರಣ ಸಂಬಂಧ ತುಮಕೂರಿನ ಶಿರಾಗೇಟ್‌ನ ಪಾತರಾಜು ಅಲಿಯಾಸ್‌ ರಾಜು (35), ಸತ್ಯಮಂಗಲದ ವಾಸಿ ಗಂಗರಾಜು (35)ನನ್ನು ವಿಚಾರಣೆ ಮಾಡಿದಾಗ ಕೊಲೆ ಬಗ್ಗೆ ತಿಳಿದುಬಂದಿತ್ತು.

ನಿಧಿ ಹುಡುಕುವ ಕೆಲಸ ಮಾಡುತ್ತಿದ್ದರು
ಮೃತರು ಪಾತರಾಜು ಜತೆ ಸೇರಿ ಕಳೆದ 6-7 ತಿಂಗಳಿನಿಂದ ನಿಧಿ ಹುಡುಕುವ ಕೆಲಸ ಮಾಡುತ್ತಿದ್ದು, ನಿಧಿಗಾಗಿ ಪಾತರಾಜನಿಗೆ ಸುಮಾರು 6 ಲಕ್ಷ ರೂ. ಹಣ ನೀಡಿದ್ದರು. ಹಣ ನೀಡಿ 6 ತಿಂಗಳು ಕಳೆದರೂ ನಿಧಿ ಹುಡುಕಿ ಕೊಡದಿದ್ದ ಕಾರಣ ಹಣ ವಾಪಸು ಕೇಳಿದ್ದಾರೆ. ಹಣ ಕೊಡದಿದ್ದರೆ ಪೊಲೀಸರಿಗೆ ದೂರು ಕೊಡುವುದಾಗಿ ಮೃತರು ಪಾತರಾಜನ ಹಿಂದೆ ಬಿದ್ದಿದ್ದರಿಂದ ಅವರನ್ನು ಹೇಗಾದರು ಮಾಡಿ ಕೊಲೆ ಮಾಡಬೇಕೆಂದು ನಿರ್ಧರಿಸಿ ಪಾತರಾಜು ತನಗೆ ಪರಿಚಯವಿದ್ದ ಸತ್ಯಮಂಗಲದ ಗಂಗರಾಜು ಆತನ ಸಹಚರರ ಜತೆಗೆ ಸೇರಿ ಕೊಲೆ ಮಾಡಿದ್ದಾನೆ.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.