Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್ ಜಾಮ್
Team Udayavani, Apr 16, 2024, 12:27 AM IST
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಅಂಬಡ್ತ್ಯಾರು ಸಮೀಪ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಈ ಪ್ರದೇಶದಲ್ಲಿ ತಂದು ಸುರಿದಿರುವ ಜಲ್ಲಿ ರಾಶಿಯನ್ನು ತಪ್ಪಿಸುವ ಭರದಲ್ಲಿ ವಿರುದ್ಧ ದಿಕ್ಕಿನಿಂದ ಚಲಿಸಿದ ಟೆಂಪೋ ರಸ್ತೆ ಬದಿಗೆ ಜಾರಿದ ಘಟನೆ ಸೋಮವಾರ ಸಂಜೆ ನಡೆಯಿತು.
ಇದರಿಂದ ಅನೇಕ ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಯಿತು. ಹೆದ್ದಾರಿ ಕಾಮಗಾರಿ ವೇಳೆ ವಾಹನ ಸವಾರರಿಗೆ ಯಾವುದೇ ರೀತಿಯ ಮುನ್ನೆಚ್ಚರಿಕೆ ನೀಡುವ ವ್ಯವಸ್ಥೆ ಕೈಗೊಳ್ಳದ, ಬೇಕಾಬಿಟ್ಟಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ವಾಹನ ಸವಾರರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.