ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ: ಕೆ. ಸೋಮನಾಥ ನಾಯಕ್‌ಗೆ ಜೈಲು ಶಿಕ್ಷೆ ಖಾಯಂ


Team Udayavani, May 8, 2022, 12:20 AM IST

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ: ಕೆ. ಸೋಮನಾಥ ನಾಯಕ್‌ಗೆ ಜೈಲು ಶಿಕ್ಷೆ ಖಾಯಂ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ಬಗ್ಗೆ ಅಪಪ್ರಚಾರ ಆರೋಪದಲ್ಲಿ ಗುರುವಾಯನ ಕೆರೆಯ ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ ಅವರಿಗೆ ಶಿಕ್ಷೆ ವಿಧಿಸಿ ಬೆಳ್ತಂಗಡಿ ಸಿವಿಲ್‌ ನ್ಯಾಯಾಲಯ ನೀಡಿದ್ದ ತೀರ್ಪನ್ನು ರಾಜ್ಯ ಉಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ.

ಪ್ರತಿಬಂಧಕಾಜ್ಞೆಯನ್ನು ಉಲ್ಲಂಘಿಸಿ ಅಪಪ್ರಚಾರ ಮಾಡುತ್ತಿದ್ದ ಸೋಮನಾಥ ನಾಯಕ್‌ಗೆ ಬೆಳ್ತಂಗಡಿಯ ಸಿವಿಲ್‌ ನ್ಯಾಯಾಲಯವು ಜೈಲು ಶಿಕ್ಷೆ, ಆಸ್ತಿ ಮುಟ್ಟುಗೋಲು ಹಾಗೂ ದಂಡನೆ ವಿಧಿಸಿತ್ತು. ಇದನ್ನು ರದ್ದು ಗೊಳಿಸುವಂತೆ ನಾಯಕ್‌ ಉಚ್ಚ ನ್ಯಾಯಾಲಯಕ್ಕೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಎರಡೂ ಕಡೆಯ ವಾದ ಆಲಿಸಿದ ಹೈಕೋರ್ಟ್‌ ಮೇ 5ರಂದು 148 ಪುಟಗಳ ಸುದೀರ್ಘ‌ ತೀರ್ಪು ಪ್ರಕಟಿಸಿ ಸೋಮನಾಥ ನಾಯಕ್‌ರ ಅರ್ಜಿಯನ್ನು ವಜಾಗೊಳಿಸಿದೆ.

ಸೋಮನಾಥ ನಾಯಕರು ಹೆಗ್ಗಡೆಯವರ ಬಗ್ಗೆ ಸುಳ್ಳು ಆರೋಪ ಮಾಡಿರುವುದು ಸಾಬೀತಾಗಿದೆ. ಹೆಗ್ಗಡೆಯವರು ಮಿತಿಗಿಂತ ಹೆಚ್ಚು ಸ್ಥಿರಾಸ್ತಿ ಹೊಂದಿದ್ದಾರೆ ಎಂದು ಮಾಡಿರುವ ಆರೋಪಗಳು ಸುಳ್ಳು. ದಾಖಲೆ ಗಳನ್ನು ಪರಾಮರ್ಶಿಸುವಾಗ ಹೆಗ್ಗಡೆ ಮತ್ತವರ ಕುಟುಂಬದವರು ತಮ್ಮ ಬಹಳಷ್ಟು ಆಸ್ತಿಗಳನ್ನು ಸಾಗು ವಳಿ ದಾರರಿಗೆ ಬಿಟ್ಟುಕೊಟ್ಟಿರುವುದು ಕಂಡುಬರುತ್ತದೆ ಎಂದು ಕೋರ್ಟ್‌ ತಿಳಿಸಿದೆ.

ಹೆಗ್ಗಡೆಯವರ ಚಾರಿತ್ರ್ಯ ಹಾಗೂ ಕ್ಷೇತ್ರದ ಘನತೆಗೆ ದಕ್ಕೆ ತರುವ ದುರುದ್ದೇಶದಿಂದ ಸೋಮನಾಥ ನಾಯಕ್‌ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನೂ ಉಲ್ಲಂಘಿಸಿ ಸುಳ್ಳು ಆರೋಪಗಳನ್ನು ಸಾರ್ವಜನಿಕ ಮಾಧ್ಯಮ ಹಾಗೂ ಜಾಲತಾಣಗಳಲ್ಲಿ ಮಾಡುತ್ತಿರುವುದು ಕ್ಷಮಾರ್ಹವಲ್ಲ. ಹೆಗ್ಗಡೆ ಹಾಗೂ ಕುಟುಂಬದವರ ಮೇಲೆ ಆರೋಪ ಮಾಡುವುದರ ಹೊರತು ಸಮಾಜಕ್ಕೆ ತನ್ನ ಕೊಡುಗೆ ಏನು ಎಂಬುದನ್ನು ನ್ಯಾಯಾಲಯಕ್ಕೆ ತಿಳಿಸುವಲ್ಲಿಯೂ ನಾಯಕ್‌ ವಿಫಲರಾಗಿದ್ದಾರೆ ಎಂದು ಕೋರ್ಟ್‌ ಹೇಳಿದೆ.

ಬೆಳ್ತಂಗಡಿ ನ್ಯಾಯಾಲಯ ಈಗಾಗಲೇ ಸೋಮನಾಥ ನಾಯಕರ ವಿರುದ್ಧ ಬಂಧನಕ್ಕೆ ವಾರಂಟ್‌ ಹೊರಡಿಸಿದೆ. ನ್ಯಾಯವಾದಿಗಳಾದ ಕೆ. ಚಂದ್ರನಾಥ ಆರಿಗ ಬೆಂಗಳೂರು ಹಾಗೂ ರತ್ನವರ್ಮ ಬುಣ್ಣು ಬೆಳ್ತಂಗಡಿ ಅವರು ಕ್ಷೇತ್ರದ ಪರವಾಗಿ ವಾದಿಸಿದ್ದರು.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.