ಕೋವಿಡ್‌ ಸೆಸ್‌ ವಿಧಿಸದ್ದು ಉತ್ತಮ ನಿರ್ಧಾರ: ವಿನಾಯಿತಿ ಇಲ್ಲದಿದ್ದರೂ ಬೆಸ್ಟ್‌ ಬಜೆಟ್‌

Team Udayavani, Feb 1, 2021, 10:18 PM IST

ಕೋವಿಡ್‌ ಸೆಸ್‌ ವಿಧಿಸದ್ದು ಉತ್ತಮ ನಿರ್ಧಾರ: ವಿನಾಯಿತಿ ಇಲ್ಲದಿದ್ದರೂ ಬೆಸ್ಟ್‌ ಬಜೆಟ್‌

ಕೊರೊನಾದಿಂದ ತಾಂತ್ರಿಕವಾಗಿ ಹಿಂಜರಿತಕ್ಕೆ ಒಳಗಾಗಿರುವ ದೇಶದ ಅರ್ಥ ವ್ಯವಸ್ಥೆ ಪುನಃಶ್ಚೇತನಕ್ಕೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಬದಲಾವಣೆಯಾಗಬಹುದು ಎಂದು ನಿರೀಕ್ಷೆ ಮಾಡಿದ್ದವರಿಗೆ ನಿರಾಶೆಯಾಗಿದೆ. 75 ವರ್ಷ ಮೀರಿರುವ ಹಿರಿಯ ನಾಗರಿಕರಿಗೆ ರಿಟರ್ನ್ಸ್ ಫೈಲ್‌ ಮಾಡುವ ಅಗತ್ಯ ಇಲ್ಲ ಎಂದು ಪ್ರಕಟಿಸಲಾಗಿದೆ. ಗಮನಾರ್ಹ ಅಂಶವೆಂದರೆ ಒಂದು ಪಿಂಚಣಿ ಮತ್ತು ಒಂದು ಬಡ್ಡಿ ಯೋಜನೆ ಹೊಂದಿರುವವರಿಗೆ ಮಾತ್ರ ವಿನಾಯಿತಿ ಲಭಿಸಲಿದೆ.

ಮೇಲ್ನೋಟಕ್ಕೆ ಹೇಳುವುದಿದ್ದರೆ ಇದೊಂದು ಉತ್ತಮ ಬಜೆಟ್‌ ಎಂದು ಖಂಡಿತವಾಗಿಯೂ ಹೇಳಬಹುದು. ಮೂಲ ಸೌಕರ್ಯ, ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಉತ್ತಮ ರೀತಿಯಲ್ಲಿ ಮುಂಗಡಪತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೊತ್ತ ಮೀಸಲು ಇರಿಸಿದ್ದಾರೆ.

ಇದರಿಂದಾಗಿ ದೇಶದ ಅರ್ಥ ವ್ಯವಸ್ಥೆಯ ಪುನಃಶ್ಚೇತನಕ್ಕೆ ಇಂಬು ನೀಡಲಿದೆ ಎಂಬ ನಿರೀಕ್ಷೆಯೂ ಇದೆ.
ಚಿನ್ನ ಮತ್ತು ಬೆಳ್ಳಿ ಆಮದು ಸುಂಕ ಪ್ರಮಾಣವನ್ನು ಶೇ.12.5ರಿಂದ ಶೇ.10ಕ್ಕೆ ಇಳಿಕೆ ಮಾಡಲಾಗಿದೆ. ಇದರಿಂದಾಗಿ ಹಳದಿ ಲೋಹದ ಬೆಲೆ ಇಳಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಅದಕ್ಕೆ ಪೂರಕವಾಗಿಯೇ ಸೋಮವಾರ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಸೋಂಕಿನ ಪ್ರಭಾವದಿಂದಾಗಿ ಆದಾಯ ಕೊರತೆಯಾದದ್ದನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಕೋವಿಡ್‌ ಸೆಸ್‌ ಅಥವಾ ಇತರ ಮಾರ್ಗಗಳ ಮೂಲಕ ದಾರಿ ಕಂಡುಕೊಳ್ಳಲಿದೆ ಕೇಂದ್ರ ಸರ್ಕಾರ ಎಂಬ ಹಲವು ಊಹೆಗಳು ವ್ಯಕ್ತವಾಗಿದ್ದವು. ದೇಶವಾಸಿಗಳ ಸಂಕಷ್ಟ ಅರ್ಥ ಮಾಡಿಕೊಂಡ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಂಥ ಯಾವುದೇ ಚಿಂತನೆ ಮಾಡಿಲ್ಲ.

ಗೃಹ ಸಾಲಗಳ ಮೇಲೆ ಸದ್ಯ ನೀಡಲಾಗಿರುವ ತೆರಿಗೆ ವಿನಾಯಿತಿಯನ್ನು 2022ರ ಮಾ.31ರ ವರೆಗೆ ವಿಸ್ತರಿಸಲಾಗಿದೆ. ಇದು ಕೈಗೆಟಕುವ ಗೃಹ ಯೋಜನೆಯು ಮತ್ತಷ್ಟು ಹೆಚ್ಚಿನ ಜನರಿಗೆ ಲಭ್ಯವಾಗುವಂತೆ ಮಾಡಲು ಅನುಕೂಲವಾಗಲಿದೆ. ಇದರ ಜತೆಗೆ ಡಿಜಿಟಲ್‌ ವಹಿವಾಟು ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕು ಎನ್ನುವ ಉದ್ದೇಶದಿಂದ 10 ಕೋಟಿ ರೂ. ವರೆಗೆ ವಹಿವಾಟು ಹೊಂದಿರುವ ಕಂಪನಿಗಳಿಗೆ ಅಡಿಟ್‌ ನಡೆಸುವ ಪ್ರಕ್ರಿಯೆಯಿಂದ ವಿನಾಯಿತಿ ನೀಡಿರುವುದು ಸ್ತುತ್ಯರ್ಹವಾಗಿಯೇ ಇದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.