ಸವಾಲಿನ ನಡುವೆ ಪೊಲೀಸರ ಕರ್ತವ್ಯ ನಿಷ್ಠೆ

ಕಾನೂನು ಸುವ್ಯವಸ್ಥೆ : ಕೋವಿಡ್‌-19 ಸೋಂಕು ಹೆಚ್ಚಳ; ಆತಂಕ

Team Udayavani, Jul 4, 2020, 5:54 AM IST

ಸವಾಲಿನ ನಡುವೆ ಪೊಲೀಸರ ಕರ್ತವ್ಯ ನಿಷ್ಠೆ

ವಿಶೇಷ ವರದಿಮಹಾನಗರ: ನಗರದಲ್ಲಿ ಕೋವಿಡ್‌-19 ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕೋವಿಡ್‌-19 ವಾರಿಯರ್‌ಗಳಾದ ಪೊಲೀಸರನ್ನು ಹೆಚ್ಚಾಗಿ ಬಾಧಿಸುತ್ತಿದೆ. ಹಾಗಾಗಿ ಪ್ರಸಕ್ತ ಆತಂಕದ ವಾತಾವರಣದಲ್ಲಿ ಪೊಲೀಸರ ಸೇವೆ ಸವಾಲಿನಿಂದ ಕೂಡಿದೆ.

ನಗರ ಸಹಿತ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 22 ಮಂದಿ ಪೊಲೀಸರು ಸೋಂಕು ಬಾಧಿತರಾದ್ದಾರೆ. 130ಕ್ಕೂ ಹೆಚ್ಚು ಮಂದಿ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 20 ಜನ ಪೊಲೀಸರಿಗೆ ಕೋವಿಡ್‌-19 ಪಾಸಿಟಿವ್‌ ಬಂದಿದ್ದು, ಅವರೆಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸಂಪರ್ಕ ಇದ್ದ 114 ಪೊಲೀಸರು, 27 ಮಂದಿ ಕುಟುಂಬದ ಸದಸ್ಯರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ಸೋಂಕು ದೃಢಪಟ್ಟವರಲ್ಲಿ ಓರ್ವ ಎಸಿಪಿ ದರ್ಜೆಯ ಅಧಿಕಾರಿ, ಓರ್ವ ಇನ್‌ಸ್ಪೆಕ್ಟರ್‌, ಓರ್ವ ಸಬ್‌ ಇನ್‌ಸ್ಪೆಕ್ಟರ್‌ ಕೂಡ ಸೇರಿದ್ದಾರೆ. ಉಳ್ಳಾಲ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಸಹಿತ 10 ಪೊಲೀಸರು ಮತ್ತು ಇಬ್ಬರು ಗೃಹ ರಕ್ಷಕರು, ಉಳ್ಳಾಲ ಠಾಣೆಯ ಸಂಪರ್ಕದಿಂದ ಮಂಗಳೂರು ಗ್ರಾಮಾಂತರ ಠಾಣೆಯ ಇಬ್ಬರು ಪೊಲೀಸರಿಗೆ ಸೋಂಕು ತಗಲಿದೆ.

ಸಿಸಿಬಿ ಘಟಕದ ಇನ್‌ಸ್ಪೆಕ್ಟರ್‌ ಸಹಿತ 4 ಮಂದಿ ಪೊಲೀಸರಿಗೆ ಸೋಂಕು ದೃಢಪಟ್ಟಿದೆ. ಎಂಎಸ್‌ಇಝಡ್‌ ಕಾಲನಿ ಯಲ್ಲಿ ದರೋಡೆಗೆ ಹೊಂಚು ಹಾಕು ತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದು, ಈ ಆರೋಪಿಗಳಿಗೆ ಕೋವಿಡ್‌-19 ಬಾಧಿಸಿರುವ ಹಿನ್ನೆಲೆಯಲ್ಲಿ ಬಜಪೆ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದ್ದು, ಆರೋಪಿ ಗಳನ್ನು ಬಂಧಿಸಲು ಹೋಗಿದ್ದ 8 ಜನ ಪೊಲೀಸರಿಗೆ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಸೆಂಟ್ರಲ್‌ ಉಪ ವಿಭಾಗದ ಎಸಿಪಿಗೆ ಕೋವಿಡ್‌-19 ದೃಢಪಟ್ಟಿ ರುವ ಕಾರಣ ಎಸಿಪಿ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಕಮಿಷನರೆಟ್‌ ವ್ಯಾಪ್ತಿಯಲ್ಲಿ ಪ್ರಥಮವಾಗಿ ಉಳ್ಳಾಲ ಠಾಣೆಯ ಪೊಲೀಸರಿಗೆ ಸೋಂಕು ಬಾಧಿಸಿತ್ತು. ತಲಪಾಡಿ ಗಡಿ ಪ್ರದೇಶದಲ್ಲಿ ಕಾರ್ಯ ನಿರ್ವ ಹಿಸುತ್ತಿದ್ದ ಪಿಎಸ್‌ಗೆ ಸೋಂಕು ಖಚಿತ ವಾದ ಬಳಿಕ ಹಲವು ಪೊಲೀಸರಿಗೆ ಸೋಂಕು ದೃಢವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ
ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ವಿಟ್ಲ ಠಾಣೆಯ ಓರ್ವ ಪೊಲೀಸ್‌ ಸಿಬಂದಿಗೆ ಹಾಗೂ 3 ದಿನಗಳ ಹಿಂದೆ ಪುತ್ತೂರು ಮಹಿಳಾ ಠಾಣೆಯ ಓರ್ವ ಸಿಬಂದಿ ಸಹಿತ ಇಬ್ಬರಿಗೆ ಸೋಂಕು ತಗ ಲಿದ್ದು, ಪ್ರಸ್ತುತ ಒಟ್ಟು 12 ಪೊಲೀಸರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ಇದೀಗ ಪುತ್ತೂರು ಮಹಿಳಾ ಠಾಣೆಯ ಒಬ್ಬರಲ್ಲಿ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದ 3 ಪೊಲೀಸ್‌ ಸಿಬಂದಿಯನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಧರ್ಮಸ್ಥಳದಲ್ಲಿ ಪೊಲೀಸರು ಬಂಧಿಸಿದ ಆರೋಪಿಗೆ ಕೋವಿಡ್‌-19 ಪಾಸಿಟಿವ್‌ ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯ 4 ಮಂದಿ ಪೊಲೀಸರಿಗೆ, ಓರ್ವ ಗೃಹ ರಕ್ಷಕ ಸಿಬಂದಿಗೆ ಹೋಂ ಕ್ವಾರಂಟೈನ್‌ ವಿಧಿಸಲಾಗಿದೆ.

ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿ ವಾಪಸ್‌ ಠಾಣೆಗೆ ಬರುವ ಪೊಲೀಸರ ಆರೋಗ್ಯ ತಪಾಸಣೆ ಮಾಡಿ ನೆಗೆಟಿವ್‌ ಇದ್ದರೆ ಮಾತ್ರ ಠಾಣೆಯ ಒಳಗೆ ಬರಲು ಅವಕಾಶ ಕಲ್ಪಿಸಲಾಗಿದೆ. 55 ವರ್ಷ ದಾಟಿದ ಪೊಲೀಸರಿಗೆ ಜನರ ನೇರ ಸಂಪರ್ಕ ಇಲ್ಲದಂತಹ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಆದರೆ ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಕೆಲವು ಸಂದರ್ಭಗಳಲ್ಲಿ ಕೋವಿಡ್‌-19 ಸೋಂಕು ಬಾಧಿಸುತ್ತಿದೆ. ಹಾಗಾಗಿ ಪೊಲೀಸರಿಗೆ ಕರ್ತವ್ಯ ನಿರ್ವಹಿಸುವುದು ಸವಾಲಾಗಿ ಪರಿಣಮಿಸಿದೆ.

 ಅಗತ್ಯ ಪರಿಕರ ಒದಗಿಸಲಾಗಿದೆ
ಪೊಲೀಸರಿಗೆ ಕೋವಿಡ್‌-19 ಎಸ್‌ಒಪಿ ಮಾರ್ಗಸೂಚಿ ಪ್ರಕಾರ ಮಾಸ್ಕ್, ಗ್ಲೌಸ್‌, ಸ್ಯಾನಿಟೈಸರ್‌, ಫೇಸ್‌ ಶೀಲ್ಡ್‌ ಮತ್ತು ಪಿಪಿಇ ಕಿಟ್‌ ಪೂರೈಕೆ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.
 - ವಿಕಾಸ್‌ ಕುಮಾರ್‌, ಪೊಲೀಸ್‌ ಆಯುಕ್ತರು, ಮಂಗಳೂರು

 ಮುನ್ನೆಚ್ಚರಿಕೆ ವಹಿಸಿ
ಪೊಲೀಸ್‌ ಸಿಬಂದಿಗೆ ಸೋಂಕು ತಗಲದಂತೆ ಪರಿಕರ ಒದಗಿಸಲಾಗಿದೆ. ಆರೋಪಿಗಳ ಪತ್ತೆ, ನಿರ್ವಹಣೆ ಮಾಡುವ ಸಿಬಂದಿಗೆ ಧರಿಸಲು 250 ಪಿಪಿಇ ಕಿಟ್‌ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.
 - ಲಕ್ಷ್ಮೀಪ್ರಸಾದ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.