ಕೆಪಿಸಿಯಿಂದ ಶರಾವತಿಗೆ ಬಾಗಿನ ಸಮರ್ಪಣೆ ; ರೇಡಿಯಲ್ ಗೇಟ್‌ಗಳ ಸಫಲ ಪರೀಕ್ಷೆ

Team Udayavani, Aug 11, 2022, 9:22 AM IST

ಸಾಗರ : ರಾಜ್ಯದ ವಿದ್ಯುತ್ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಲಿಂಗನಮಕ್ಕಿ ಜಲಾಶಯದ ಜಲ ಸಂಗ್ರಹವು ಗರಿಷ್ಠ ಮಟ್ಟದ ಸನಿಹದಲ್ಲಿದ್ದು, ಕರ್ನಾಟಕ ವಿದ್ಯುತ್ ನಿಗಮದಿಂದ ಸಾಂಪ್ರದಾಯಿಕವಾಗಿ ಬಾಗಿನ ಸಮರ್ಪಣೆ ಮಾಡಲಾಗಿದೆ ಎಂದು ಕೆಪಿಸಿ ಮುಖ್ಯ ಎಂಜಿನಿಯರ್ ಜಿ.ಇ.ಮೋಹನ್ ಹೇಳಿದರು.

ತಾಲೂಕಿನ ಕಾರ್ಗಲ್ ಸಮೀಪದ ಲಿಂಗನಮಕ್ಕಿ ಅಣೆಕಟ್ಟೆಯಲ್ಲಿ ನೀರು ಬೆಡ್ ಲೆವೆಲ್ ಮಟ್ಟ ತಲುಪಿದ್ದರಿಂದ ಕೆಪಿಸಿಯಿಂದ ಬುಧವಾರ ಶರಾವತಿಗೆ ಬಾಗಿನ ಸಮರ್ಪಿಸಿ ಅವರು ಮಾತನಾಡಿ, ಶರಾವತಿ ನದಿ ಪಾತ್ರದ ಹಿನ್ನೀರಿನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯದ ಒಳಹರಿವಿನ ಮಟ್ಟ ದಿನೇ ದಿನೇ ಏರಿಕೆಯಾಗುತ್ತಿದೆ. ಅತ್ಯಂತ ಕನಿಷ್ಠ ಮಟ್ಟವಾದ 1,749 ಅಡಿಗೆ ಇಳಿದಿದ್ದ ಜಲಾಶಯದ ನೀರಿನ ಸಂಗ್ರಹ ಈ ಬಾರಿ ಆತಂಕವನ್ನು ಸೃಷ್ಟಿಸಿತ್ತು. ಆದರೆ, 2 ಮಳೆ ಋತುಗಳು ಎಲ್ಲ ಊಹೆಗಳನ್ನು ಮೀರಿ 59 ಅಡಿಗಳಷ್ಟು ನೀರನ್ನು ಜಲಾಶಯಕ್ಕೆ ಪೂರೈಸಿವೆ ಎಂದು ಹೇಳಿದರು.

ಜಲಾಶಯ ಗರಿಷ್ಠ ಮಟ್ಟದಲ್ಲಿ ಭರ್ತಿಯಾಗಲು ಇನ್ನು ಕೇವಲ 10 ಅಡಿಗಳಷ್ಟು ನೀರಿನ ಅಗತ್ಯವಿದ್ದು, ಕೆಲವೇ ದಿನಗಳಲ್ಲಿ ಭರ್ತಿಯಾಗುವ ಸಾಧ್ಯತೆ ಇದೆ. ಪ್ರವಾಹ ಉಂಟಾದಲ್ಲಿ ತೆಗೆದುಕೊಳ್ಳಬೇಕಾಗುವ ಮುನ್ನೆಚ್ಚರಿಕೆ ಕ್ರಮಗಳು ಮತ್ತು ರೇಡಿಯಲ್ ಗೇಟ್‌ಗಳಿಂದ ನೀರು ಹೊರ ಹಾಯಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ನದಿ ದಂಡೆಯ ನಿವಾಸಿಗಳಿಗೆ 2ನೇ ಮುನ್ನೆಚ್ಚರಿಕೆ ನೀಡಲಾಗಿದೆ. ಜಿಲ್ಲಾಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಶರಾವತಿ ಯೋಜನಾ ಪ್ರದೇಶದ ಲಿಂಗನಮಕ್ಕಿ, ಮಹಾತ್ಮ ಗಾಂಧಿ, ಎ.ಬಿ.ಸೈಟ್, ಗೇರುಸೊಪ್ಪ ಜಲವಿದ್ಯುದಾಗಾರಗಳನ್ನು ಅತ್ಯಂತ ಸುಸ್ಥಿತಿಯಲ್ಲಿ ಇರಿಸಲಾಗಿದೆ. ಪ್ರಕೃತಿದತ್ತವಾಗಿ ದೊರಕುತ್ತಿರುವ ಮಳೆ ನೀರನ್ನು ಸಮಗ್ರವಾಗಿ ಬಳಸಿಕೊಂಡು, ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದಿಸಿ ಪೂರೈಸಲಾಗುತ್ತಿದೆ ಎಂದು ಕೆಪಿಸಿ ವಿದ್ಯುತ್ ವಿಭಾಗದ ಮುಖ್ಯ ಎಂಜಿನಿಯರ್ ನಾರಾಯಣ್ ಪಿ. ಗಜಕೋಶ್ ತಿಳಿಸಿದರು.

ಇದನ್ನೂ ಓದಿ :ವಾಹನಗಳಲ್ಲೂ ರಾಷ್ಟ್ರ ಧ್ವಜಕ್ಕೆ ಅವಕಾಶ : ಅವಮಾನ ಆಗದಂತೆ ಎಚ್ಚರ ವಹಿಸಿ : ಡಿಸಿ

ಜಲಾಶಯ ಶೇ. 77 ರಷ್ಟು ಭರ್ತಿ ಆದ ಹಿನ್ನೆಲೆಯಲ್ಲಿ 6 ನೇ ರೇಡಿಯಲ್ ಗೇಟ್‌ನ ಮೂಲಕ ಪ್ರಾಯೋಗಿಕವಾಗಿ ಅಣೆಕಟ್ಟಿನ ನೀರನ್ನು ಅಲ್ಪ ಸಮಯ ಹೊರಹಾಯಿಸಲಾಯಿತು. ಈ ವೇಳೆ ಪ್ರತಿಕ್ರಿಯಿಸಿದ ಲಿಂಗನಮಕ್ಕಿ ಗೇಟ್ಸ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ವೆಂಕಟೇಶ ಹೆಗಡೆ, ಜಲಾಶಯದ ಸುರಕ್ಷತೆಯಲ್ಲಿ ಅತ್ಯಂತ ಮಹತ್ವದ ಪಾತ್ರ ನಿರ್ವಹಿಸುತ್ತಿರುವ 11 ರೇಡಿಯಲ್ ಗೇಟ್ ಮತ್ತು ಸ್ಲ್ಯೂಸ್ ಗೇಟ್‌ಗಳನ್ನು ಮಳೆಗಾಲದ ಆರಂಭಕ್ಕೂ 2 ತಿಂಗಳ ಮುಂಚಿತವಾಗಿ ಸುಸ್ಥಿತಿಯಲ್ಲಿಡಲಾಗಿದೆ. 2000 ಚದರ ಕಿ.ಮೀ. ವ್ಯಾಪ್ತಿಯಲ್ಲಿ ನಿಂತಿರುವ ನೀರಿನ ಒತ್ತಡವನ್ನು ತಡೆದು ಜಲಸಂಗ್ರಹ ಮಾಡುವ ರೇಡಿಯಲ್ ಗೇಟ್‌ಗಳು, ಪ್ರವಾಹದ ಮುನ್ಸೂಚನೆ ದೊರೆತಾಗ ನಿಮಿಷಾರ್ಧದಲ್ಲಿ ಹೆಚ್ಚುವರಿ ನೀರನ್ನು ಹೊರಹಾಯಿಸಲು ಸಿದ್ಧಗೊಳಿಸಲಾಗಿದೆ. ಅನುಭವಿ ಉದ್ಯೋಗಿಗಳು ಮತ್ತು ಎಂಜಿನಿಯರ್‌ಗಳ ತಂಡ ದಿನದ 24 ಗಂಟೆ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಪಾಲಕ ಎಂಜಿನಿಯರ್ ಆರ್. ಶಿವಕುಮಾರ್, ನಿಗಮದ ವಿದ್ಯುತ್ ವಿಭಾಗದ ಅಧೀಕ್ಷಕ ಎಂಜಿನಿಯರ್ ಸಿ.ಗಿರೀಶ್, ದಿನೇಶ್‌ಕುಮಾರ್, ಎಂಜಿನಿಯರ್‌ಗಳಾದ ವಾಸುದೇವ ಮೂರ್ತಿ, ಇ. ರಾಜು, ಭದ್ರತಾ ಅಧಿಕಾರಿ ಶರಣಪ್ಪ, ಸಯ್ಯದ್, ಮಲ್ಲಿಕಾರ್ಜುನಸ್ವಾಮಿ, ಕೆಪಿಸಿ ಎಂಪ್ಲಾಯಿಸ್ ಯೂನಿಯನ್ ಪದಾಧಿಕಾರಿಗಳಾದ ವೀರೇಂದ್ರ, ಲಿಂಗರಾಜು, ಜೆ. ಕೇಶವೇಗೌಡ, ಕಬಾಳಯ್ಯ ಸೇರಿ ಅನೇಕ ಮುಖಂಡರು ಇದ್ದರು.

ಟಾಪ್ ನ್ಯೂಸ್

crime

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕ ಬರ್ಬರ ಹತ್ಯೆ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

1-ADSAD

ಯುವಕನಾದ ಸಿದ್ದರಾಮಯ್ಯ ..! ; ರಾಹುಲ್ ಜತೆ ರೇಸ್ ….!; ವಿಡಿಯೋ ವೈರಲ್

ಬೆಂಗಳೂರು ಸೇರಿದಂತೆ ಎಂಟು ನಗರಗಳಲ್ಲಿ ಏರ್‌ಟೆಲ್‌ 5ಜಿ ಪ್ಲಸ್‌ ಸೇವೆ ಶುರು

ಬೆಂಗಳೂರು ಸೇರಿದಂತೆ ಎಂಟು ನಗರಗಳಲ್ಲಿ ಏರ್‌ಟೆಲ್‌ 5ಜಿ ಪ್ಲಸ್‌ ಸೇವೆ ಶುರು

fadnavis

ದಸರಾ ರ‍್ಯಾಲಿಯಲ್ಲಿ ಶಿಂಧೆ ‘ನಿಜವಾದ ಶಿವಸೇನೆ’ ತೋರಿಸಿದ್ದಾರೆ: ಫಡ್ನವಿಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕ ಬರ್ಬರ ಹತ್ಯೆ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ

1-sadasdad

ವ್ಯಕ್ತಿಯ ಬಳಿ ಸುಲಿಗೆ :ಆರು ತಾಸುಗಳಲ್ಲೇ ಇಬ್ಬರು ಆರೋಪಿಗಳ ಬಂಧನ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

MUST WATCH

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

ಹೊಸ ಸೇರ್ಪಡೆ

crime

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕ ಬರ್ಬರ ಹತ್ಯೆ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ

1-sadasdad

ವ್ಯಕ್ತಿಯ ಬಳಿ ಸುಲಿಗೆ :ಆರು ತಾಸುಗಳಲ್ಲೇ ಇಬ್ಬರು ಆರೋಪಿಗಳ ಬಂಧನ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.