ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

Team Udayavani, Nov 27, 2021, 8:51 PM IST

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಭಟ್ಕಳ : ಹೆಚ್ಚಿನ ಗ್ರಾಮ ಪಂಚಾಯತ್ ಸದಸ್ಯರು ಆಯ್ಕೆಯಾದ ನಂತರ ಅನುದಾನವೇ ಬರದೇ, ಅಭಿವೃದ್ಧಿಯನ್ನೂ ಮಾಡಲಾಗದೇ ರಾಜ್ಯ ಹಾಗೂ ಕೇಂದ್ರ ಸರಕಾರದ ಮೇಲೆ ತೀವ್ರ ಅಸಮಾಧಾನ ಹೊಂದಿದ್ದಾರೆ, ಇದು ಕಾಂಗ್ರೆಸ್ ಪಕ್ಷಕ್ಕೆ, ತನ್ನ ಗೆಲುವಿಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಭೀಮಣ್ಣ ನಾಯ್ಕ ಹೇಳಿದರು.

ಅವರು ಇಲ್ಲಿನ ಖಾಸಗೀ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತವಾಗುವಂತೆ ಮಾಡಿದೆ. ರಾಜೀವ ಗಾಂಧಿ ಪ್ರಧಾನಮಂತ್ರಿ ಇದ್ದ ಸಂದರ್ಭದಲ್ಲಿ ಪಂಚಾಯತ್‍ರಾಜ್ ವ್ಯವಸ್ಥೆ ಬಲಪಡಿಸುವ ಕನಸಿನೊಂದಿಗೆ ಹೆಚ್ಚಿನ ಅಧಿಕಾರ ಮತ್ತು ಅನುದಾನ ನೀಡಿದ್ದರು. ಆದರೆ ಬಿಜೆಪಿ ಸರಕಾರ ಪಂಚಾಯತ್‍ರಾಜ್ ವ್ಯವಸ್ಥೆ ಕುರಿತ ನಂಬಿಕೆ ಇಲ್ಲದಂತೆ ಮಾಡಿದ್ದು ಸದಸ್ಯರನ್ನು ಜನರು ಸಂಶಯದಿಂದ ನೋಡುವಂತಾಗಿದೆ. ಅನುದಾನ ಬಿಡುಗಡೆ ಮಾಡುವಲ್ಲಿ ಹಿಂದೇಟು ಹಾಕಿರುವುದು ಸದಸ್ಯರಾಗಿ ಆಯ್ಕೆಯಾದವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ ಎಂದರು.

ಹೊಸದಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಸದಸ್ಯರು ಸರಿಯಾದ ಅನುದಾನ ಇಲ್ಲದೇ ಅಭಿವೃದ್ಧಿ ಮಾಡಲಾಗದೇ ಜನರಿಂದ ಮಾತುಕೇಳುವ ಪರಿಸ್ಥಿತಿ ಬಂದಿದೆ. ಸಿದ್ಧರಾಮಯ್ಯನವರು ಮುಖ್ಯಮಂತ್ರಿ ಇದ್ದ ಸಂದರ್ಭದಲ್ಲಿ ಗ್ರಾಮ ಪಂಚಾಯತ್‍ಗಳಿಗೆ ಹೆಚ್ಚಿನ ಮನೆಗಳನ್ನು ಮಂಜೂರಿ ಮಾಡಿದ್ದರು. ಈಗಿನ ಸರಕಾರ ಅಂತಹ ಮನೆಗಳ ಬಿಲ್ ಪಾವತಿಯನ್ನೂ ಸಹ ಮಾಡಿಲ್ಲ. ಸರಕಾರದ ಬಿಲ್ ನಂಬಿ ಮನೆ ಕಟ್ಟಿಕೊಂಡವರು ಸಾಲ ಮಾಡಿ ಮನೆ ಪೂರ್ಣಗೊಳಿಸುವಂತಾಗಿದೆ. ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಸರಕಾರದ ದುರಾಡಳಿತ ನೋಡಿ ಜನರು ರೋಸಿ ಹೋಗಿದ್ದಾರೆ. ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಿದರೆ ತಮಗೆ ಸೋಲು ಖಚಿತ ಎಂದು ತಿಳಿದ ರಾಜ್ಯದ ಬಿಜೆಪಿ ಸರಕಾರ ಕ್ಷೇತ್ರ ವಿಂಗಡನೆ ನೆಪದಲ್ಲಿ ತಾ.ಪಂ., ಜಿ.ಪಂ. ಚುನಾವಣೆಯನ್ನು ಮುಂದೂಡಿದೆ ಎಂದರು.

ಕಳೆದ ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ ಸ್ಥಾನದಲ್ಲಿ ಗೆಲುವು ಸಾಧಿಸುತ್ತಾ ಬಂದಿದ್ದು ಈ ಬಾರಿಯೂ ನಮಗೇ ಗೆಲುವು ನಿಶ್ಚಿತ. ಗ್ರಾ.ಪಂ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್ ಸದಸ್ಯರು ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಲಿದ್ದಾರೆ ಎನ್ನುವ ನಂಬಿಕೆ ಇದೆ. ಈಗಾಗಲೇ ಜಿಲ್ಲಾದ್ಯಂತ ಪ್ರಚಾರ ಕಾರ್ಯ ಆರಂಭಿಸಿದ್ದು, ಉತ್ತಮ ಬೆಂಬಲ ವ್ಯಕ್ತವಾಗಿದೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ಮುಖಂಡರೂ ಒಗ್ಗಟ್ಟಾಗಿ ನನ್ನ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದರು. ಮಾಜಿ ಶಾಸಕರಾದ ಮಂಕಾಳ ವೈದ್ಯ, ಜೆ. ಡಿ. ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ, ಜಿ.ಪಂ. ಮಾಜಿ ಅಧ್ಯಕ್ಷೆ ಜಯಶ್ರೀ ಮೊಗೇರ, ಪ್ರಮುಖರಾದ ರಾಮಾ ಮೊಗೇರ, ವನಿತಾ ನಾಯ್ಕ, ಪಕ್ಷದ ಉಸ್ತುವಾರಿ ಸುಬ್ರಹ್ಮಣ್ಯ ನಾಯ್ಕ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ ಮಜೀದ್ ಶೇಖ್, ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶೀಮಜಿ, ತಾಲೂಕು ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ವಿಷ್ಣು ದೇವಡಿಗ ಮುಂತಾದವರಿದ್ದರು.

ಟಾಪ್ ನ್ಯೂಸ್

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-ffff

ಸಿ.ಎಂ. ಇಬ್ರಾಹಿಂ ಭೇಟಿಯಾದ ಹೆಚ್ ಡಿಕೆ: ಮಹತ್ವದ ಚರ್ಚೆ

1-dsds

ಮೊಮ್ಮಗಳ ಆತ್ಮಹತ್ಯೆ : ಮೌನಕ್ಕೆ ಶರಣಾದ ಬಿಎಸ್ ವೈ; ಪ್ರಧಾನಿ, ಗಣ್ಯರಿಂದ ಸಾಂತ್ವನ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.