ಅಧ್ಯಕ್ಷ ಬೈಡೆನ್ ಆರೋಗ್ಯ ದೃಢ: ಶ್ವೇತಭವನದ ವೈದ್ಯರ ವರದಿಯಲ್ಲಿ ಉಲ್ಲೇಖ
ಮುಂದಿನ ವರ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧೆ?
Team Udayavani, Feb 18, 2023, 7:55 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಆರೋಗ್ಯ ಸದೃಢವಾಗಿದೆ. ಇನ್ನೂ ಸೇವೆ ಸಲ್ಲಿಸಲು ಸಮರ್ಥರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಮುಂದಿನ ವರ್ಷ ನವೆಂಬರ್ಗೆ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಪೂರಕವಾಗಿ ಅವರು ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ.
ಸದ್ಯ ಬೈಡೆನ್ ಅವರಿಗೆ 80 ವರ್ಷ. 2024ರ ವೇಳೆ ಅವರಿಗೆ 82 ವರ್ಷ ವಯಸ್ಸಾಗಿರಲಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ವರದಿ ಮಹತ್ವ ಪಡೆದಿದೆ.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜೋ ಬೈಡೆನ್ ಅವರು ಎರಡನೇ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದೆ.
ಶ್ವೇತ ಭವನದ ವೈದ್ಯ ಡಾ. ಕೆವಿನ್ ಒ ಕನ್ನಾರ್, ಬೈಡೆನ್ ಆರೋಗ್ಯಯುತವಾಗಿದ್ದು, ಆಡಳಿತ ನಡೆಸಲು ಸಮರ್ಥರೆಂದು ವರದಿ ನೀಡಿದ್ದಾರೆ. ಕಳೆದ ವರ್ಷ ಕೊರೊನಾ ದೃಢಪಟ್ಟಿದ್ದರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಹೀಗಾಗಿ, ಮೂರು ಗಂಟೆಗಳ ಕಾಲ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಬೈಡೆನ್ ಅವರಿಗೆ ಸೋಂಕಿನ ಲಕ್ಷಣಗಳು ಇಲ್ಲ ಮತ್ತು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!
Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
India-born ಸುನೀತಾ ವಿಲಿಯಮ್ಸ್ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!
China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?