ಐಎಂಎ ಮಾಲೀಕರ ಜತೆ ಬಿರಿಯಾನಿ ತಿನ್ನಲಿಲ್ಲ: ಸಿಎಂ

Team Udayavani, Jul 23, 2019, 3:08 AM IST

ima-mali

ವಿಧಾನಸಭೆ: ಶಾಸಕರೊಬ್ಬರು ರಂಜಾನ್‌ ಪ್ರಯುಕ್ತ ಇಫ್ತಿಯಾರ್‌ ಕೂಟಕ್ಕೆ ಒತ್ತಾಯ ಮಾಡಿ ಕರೆದೊಯ್ದಾಗ ಅವರ ಐಎಂಎ ಸಂಸ್ಥೆ ಕಚೇರಿಗೆ ಹೋಗಿದ್ದೆ. ಅಲ್ಲಿ ಖರ್ಜೂರ ತಿಂದು ಬಂದೆ ಅಷ್ಟೆ. ಬಿರಿಯಾನಿ ತಿನ್ನಲು ಹೋಗಿರಲಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸೋಮವಾರ ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆಯ ವೇಳೆ ಸಚಿವ ಕೃಷ್ಣಬೈರೇಗೌಡರು ಹಗರಣದ ಬಗ್ಗೆ ಪ್ರಸ್ತಾಪಿಸಿದಾಗ ಮಧ್ಯಪ್ರವೇಶಿಸಿದ ಬಿಜೆಪಿಯ ಸಿ.ಟಿ.ರವಿ, 46 ಸಾವಿರ ಕುಟುಂಬಗಳಿಗೆ ಅನ್ಯಾಯ ಮಾಡಿದ ಸಂಸ್ಥೆಯ ಮುಖ್ಯಸ್ಥನ ಬಳಿ ಚುನಾವಣೆಗೆ ಹಣ ಪಡೆದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ನಿನ್ನ ಜತೆಯಿದೆ ಎಂದು ಆತನಿಗೆ ರಕ್ಷಣೆ ಕೊಡುವ ಹೇಳಿಕೆ ಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆತನ ಜತೆ ಬಿರ್ಯಾನಿ ತಿಂದವರೂ ಆ ಬಗ್ಗೆ ಮಾತನಾಡಬೇಕು ಎಂದು ಹೇಳಿದರು.

ಐಎಂಎ ಕಂಪನಿ ಬಗ್ಗೆ ಈ ಹಿಂದೆಯೇ ದೂರು ಬಂದಿದ್ದರೂ ಮುಖ್ಯಸ್ಥನಿಗೆ ಕ್ಲೀನ್‌ ಚಿಟ್‌ ನೀಡಲಾಗಿತ್ತು. ಆತನಿಗೆ ಕ್ಲೀನ್‌ ಚಿಟ್‌ ಕೊಟ್ಟವನು ಜೈಲಿನಲ್ಲಿದ್ದಾನೆ. ಯಾರ ಬಳಿ ಆಡಳಿತ ಇತ್ತೋ, ಇಂಟಲಿಜೆನ್ಸ್‌ ಇತ್ತೋ ಅವರೇ ಅವನನ್ನು ರಕ್ಷಣೆ ಮಾಡಿದ್ದಾರೆ ಎಂದು ದೂರಿದರು. ಆಗ, ಸಿಎಂ ಎಚ್‌.ಡಿ.ಕುಮಾರಸ್ವಾಮಿ ಎದ್ದುನಿಂತು, ಬಿಜೆಪಿಯವರು ಯಾರ ಬಗ್ಗೆ ಬಿರ್ಯಾನಿ ತಿಂದರು ಎಂದು ಹೇಳುತ್ತಿದ್ದಾರೆ ಗೊತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಆ ಬಗ್ಗೆ ಆರೋಪ ಸಹ ಮಾಡಲಾಗುತ್ತಿದೆ.

ನಾನು ಬಿರ್ಯಾನಿ ತಿನ್ನಲು ಹೋಗಿರಲಿಲ್ಲ. ಎರಡನೇ ಬಾರಿ ಹೃದಯ ಶಸ್ತ್ರಚಿಕಿತ್ಸೆಯಾದ ನಂತರ ನಾನು ನಾನ್‌ವೆಜ್‌ ಬಿಟ್ಟಿದ್ದೇನೆ ಎಂದರು. ಐಎಂಎ ಅಧ್ಯಕ್ಷರ ಪರಿಚಯವಿರಲಿಲ್ಲ. ಶಾಸಕರೊಬ್ಬರ ಒತ್ತಡಕ್ಕೆ ಮಣಿದು ಅಲ್ಲಿಗೆ ಹೋಗಿದ್ದೆ, ಅಲ್ಲಿ ಆ ಸಂಸ್ಥೆಯಲ್ಲಿ ಪ್ರಧಾನಿಯವರ ಭಾವಚಿತ್ರ ಹಾಕಲಾಗಿತ್ತು. 250 ಕೋಟಿ ರೂ. ತೆರಿಗೆ ಕೊಟ್ಟಿದ್ದಕ್ಕೆ ಪ್ರಶಸ್ತಿ ಕೊಟ್ಟಿರುವ ಬಗ್ಗೆಯೂ ಫೋಟೋ ಹಾಕಲಾಗಿತ್ತು ಎಂದರು. ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ಬಡವರನ್ನು ವಂಚಿಸಿದವರನ್ನು ಬಿಡುವುದಿಲ್ಲ. ಈಗಾಗಲೇ ಎಸ್‌ಐಟಿಗೆ ಪ್ರಕರಣ ವಹಿಸಲಾಗಿದ್ದು ಸಂಸ್ಥೆಯ ಮುಖ್ಯಸ್ಥನನ್ನೂ ಬಂಧಿಸಲಾಗಿದೆ ಎಂದು ಹೇಳಿದರು.

ಸ್ಪೀಕರ್‌ ಚಟಾಕಿ: “ನಾನ್‌ ವೆಜ್‌ ಬಿಟ್ಟಿದ್ದೇನೆ’ ಎಂಬ ಕುಮಾರಸ್ವಾಮಿಯವರ ಮಾತಿಗೆ, ಸ್ಪೀಕರ್‌ ರಮೇಶ್‌ಕುಮಾರ್‌, “ಹಾಗೆ ಮಾಡಬೇಡಿ. ನಾನು ಅಮ್ಮಾ ಅವರಿಗೆ ಹೇಳೆ¤àನೆ. ಫಿಶ್‌ ಹಾಗೂ ನಾಟಿ ಕೋಳಿ ತಿನ್ನಿ. ಇಲ್ಲದಿದ್ದರೆ ನಾವು ತಿಂದು ತಿನ್ನೋರು ಬಿಟ್ಟಂತಾಗುತ್ತದೆ’ ಎಂದು ಚಟಾಕಿ ಹಾರಿಸಿದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.