ಮುಂದಿನ ವಾರ ಬಿಜೆಪಿ ಸರ್ಕಾರ ರಚನೆ ಖಚಿತ

Team Udayavani, Jul 14, 2019, 3:10 AM IST

magic-mundina

ಯಲಹಂಕ: ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಬಿಜೆಪಿ ಶಾಸಕರಿಗೆ ಮುಂದಿನ ವಾರ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಸಮೀಪದ ರಮಡಾ ರೆಸಾರ್ಟ್‌ಗೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಭೇಟಿ ನೀಡಿದ ಯಡಿಯೂರಪ್ಪ ಅವರು, ಶಾಸಕರ ಕುಶಲೋಪರಿ ವಿಚಾರಿಸಿದರು. ಬಳಿಕ ಕೆಲ ಹೊತ್ತು ಸಭೆ ನಡೆಸಿ ಚರ್ಚಿಸಿದರು.

ಶಾಸಕರು ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ. ಊಹಾಪೋಹ, ವದಂತಿಗಳ ಬಗ್ಗೆಯೂ ತಲೆಕೆಡಿಕೊಳ್ಳಬೇಡಿ. ಈಗಾಗಲೇ ರಾಜೀನಾಮೆ ನೀಡಿರುವ ಕಾಂಗ್ರೆಸ್‌, ಜೆಡಿಎಸ್‌ನ ಅತೃಪ್ತ ಶಾಸಕರು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ. ಈಗಾಗಲೇ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ.

ಇಷ್ಟಾದರೂ ಕಾಂಗ್ರೆಸ್‌, ಜೆಡಿಎಸ್‌ನವರು ಅತೃಪ್ತರು ರಾಜೀನಾಮೆ ಹಿಂಪಡೆಯುತ್ತಾರೆ ಎಂಬುದಾಗಿ ಸುಳ್ಳು ಮಾಹಿತಿ ಹರಡುತ್ತಿದ್ದಾರೆ. ಮುಂದಿನ ವಾರ ಬಿಜೆಪಿ ಸರ್ಕಾರ ರಚನೆಯಾಗುವುದರಲ್ಲಿ ಅನುಮಾನವೇ ಬೇಡ. ಭಾನುವಾರ ಸಂಜೆ 4 ಗಂಟೆಗೆ ಮತ್ತೆ ಸಭೆ ಸೇರೋಣ ಎಂದು ಯಡಿಯೂರಪ್ಪ ಶಾಸಕರಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ.

ಸಭೆಯ ಬಳಿಕ ಯಡಿಯೂರಪ್ಪ ಅವರು ಶಾಸಕರೊಂದಿಗೆ ರೆಸಾರ್ಟ್‌ನಲ್ಲೇ ಊಟ ಸೇವಿಸಿ, ನಂತರ ನಗರಕ್ಕೆ ವಾಪಸ್ಸಾದರು. ಪಕ್ಷದ ಕೆಲ ನಾಯಕರು ರೆಸಾರ್ಟ್‌ನಲ್ಲೇ ಇದ್ದು, ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ರೆಸಾರ್ಟ್‌ನಲ್ಲಿ ಸದ್ಯ 86 ಶಾಸಕರು ವಾಸ್ತವ್ಯ ಹೂಡಿದ್ದಾರೆ.

ಹಿರಿಯ ನಾಯಕರು, ಬೆಂಗಳೂರು ಹಾಗೂ ಸುತ್ತಮುತ್ತಲ ಕ್ಷೇತ್ರಗಳ ಕೆಲ ಶಾಸಕರು ತಮ್ಮ ಮನೆಗಳಲ್ಲೇ ಉಳಿದಿದ್ದು, ಸೋಮವಾರ ಸದನದಲ್ಲಿ ನೇರವಾಗಿ ಪಾಲ್ಗೊಳ್ಳಲಿದ್ದಾರೆ. ರೆಸಾರ್ಟ್‌ನಲ್ಲಿ ಕರಾವಳಿ ಭಾಗದ ಶಾಸಕರನ್ನು ಒಂದೆಡೆ ಇರಿಸಿದ್ದರೆ, ಉಳಿದ ಶಾಸಕರನ್ನು ಒಟ್ಟಿಗೆ ಇರಿಸಲಾಗಿದೆ. ಶಾಸಕರು ವಾಸ್ತವ್ಯ ಹೂಡಿರುವ ಕಡೆ ಇತರರಿಗೆ ಪ್ರವೇಶವಿಲ್ಲದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.