ರಾಜ್ಯದಲ್ಲಿ ಬಿಜೆಪಿ ಅಭಿವೃದ್ಧಿ ಕೆಲಸ ಮಾಡಿಲ್ಲ: ಡಿ.ಕೆ.ಶಿವಕುಮಾರ್
Team Udayavani, Feb 4, 2023, 11:43 PM IST
ವಿಜಯಪುರ: ದೇವನಹಳ್ಳಿಯು ಇತಿಹಾಸ ಹೊಂದಿರುವ ಭೂಮಿ ಯಾಗಿದ್ದು, ಇಲ್ಲಿಂದ ಕಾಂಗ್ರೆಸ್ ಸರಕಾರವನ್ನುಅಧಿಕಾರಕ್ಕೆ ತರಲು ಪಣ ತೊಡಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಆಯೋಜಿಸಿದ್ದ ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು, ಬಿಜೆಪಿ ಬಂದ ಮೇಲೆ ತಾಲೂಕಿನಲ್ಲಿ ರೈತರು ಎಲ್ಲ ಭೂಮಿಯನ್ನೂ ಕಳೆದುಕೊಂಡಿದ್ದಾರೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸರಕಾರ ಬಂದ ಮೇಲೆ ಎಲ್ಲರೂ ಬೀದಿಗೆ ಬಿದ್ದಿದ್ದಾರೆ. ಮಹಾನ್ ನಾಯಕರ ಇತಿಹಾಸವನ್ನೇ ಬಿಜೆಪಿ ತಿರುಚುತ್ತಿದೆ. ರಾಜ್ಯದಲ್ಲಿ ಬಿಜೆಪಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಕೇವಲ ಶೇ.40 ಕಮಿಷನ್ ಪಡೆಯುವುದೇ ಸರಕಾರದ ಕೆಲಸವಾದಂತಿದೆ. ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಹೋಗಿವೆ ಎಂದು ಆರೋಪಿಸಿದರು.
ಮಾಜಿ ಸಚಿವ ಕೃಷ್ಣ ಭೈರೇಗೌಡ, ಮಾಜಿ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕ ಡಾ| ಜಿ. ಪರಮೇಶ್ವರ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿ, ಶಾಸಕ ವೆಂಕಟರಮಣಪ್ಪ, ಶರತ್ ಬಚ್ಚೇಗೌಡ, ಎಂಎಲ್‌ಸಿ ರವಿ, ನಾಸೀರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮುಂತಾದವರಿದ್ದರು.
ಮೋದಿ ಸುಳ್ಳಿನ ಸರದಾರ
ಬಿಜೆಪಿ ಪಕ್ಷ ಬರೀ ಸುಳ್ಳಿನ ಪಕ್ಷವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳಿನ ಸರದಾರ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ, ನಮ್ಮ ಕಾಂಗ್ರೆಸ್ ಪಕ್ಷ ಹೇಳಿದಂತೆ ಎಲ್ಲ ಅಭಿವೃದ್ಧಿ ಕೆಲಸಗಳು ಮಾಡಿವೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಜಿ ಸಚಿವ ಎಸ್.ಆರ್. ಪಾಟೀಲ ಭಾವಚಿತ್ರ ಇರುವ ಟಿ-ಶರ್ಟ್, ಗಡಿಯಾರಗಳು ಪತ್ತೆ
ಈಶ್ವರಪ್ಪ, ಡಿಕೆಶಿ ಅವರಂಥವರನ್ನು ಆಮ್ ಆದ್ಮಿ ಪಕ್ಷಕ್ಕೆ ಸೇರಿಸಲ್ಲ: ಮುಖ್ಯಮಂತ್ರಿ ಚಂದ್ರು
ದಾಖಲೆಯಿಲ್ಲದೆ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ: ಮೂವರ ವಿರುದ್ಧ ಪ್ರಕರಣ
ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ. ಮೌಲ್ಯದ ಮದ್ಯ ವಶ
ಯಾವ ಮಠಾಧೀಶರನ್ನೂ ಬೆದರಿಸಿಲ್ಲ,ಬಿಜೆಪಿಯಲ್ಲಿ ಕಾಂಗ್ರೆಸ್ ಸಂಸ್ಕೃತಿ ಇಲ್ಲ: ಯತ್ನಾಳ್