BJP-JDS ಇಂದು ಮೈತ್ರಿ ಶಕ್ತಿ ಪ್ರದರ್ಶನ; ಲಕ್ಷ ಜನರ ಸಮ್ಮುಖದಲ್ಲಿ ಪಾದಯಾತ್ರೆ ಸಮಾರೋಪ
ಸಿದ್ದು ವಿರುದ್ಧ ಸಿಡಿಯಲು ಬಿಎಸ್‌ವೈ, ಎಚ್‌ಡಿಕೆ ಸಜ್ಜು
Team Udayavani, Aug 10, 2024, 7:00 AM IST
ಮೈಸೂರು: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯ ವಿರುದ್ಧ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಶುಕ್ರವಾರ ಮೈಸೂರು ನಗರವನ್ನು ತಲುಪಿದ್ದು, ಶನಿವಾರ ಅಂತ್ಯಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 11ಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾ ರೋಪ ಸಮಾವೇಶ ಹಮ್ಮಿಕೊಳ್ಳ ಲಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸ್ಥಳೀಯ ಶಾಸಕರು, ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ವೇದಿಕೆ ಸಜ್ಜು
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬಳಕೆಯಾದ ವೇದಿಕೆಯೇ ಬಿಜೆಪಿ- ಜೆಡಿಎಸ್ ಸಮಾವೇಶಕ್ಕೂ ಉಪಯೋಗ ವಾಗಲಿದೆ. ವಿಶಾಲವಾದ ಸಮಾ ರಂಭ ಸ್ಥಳಕ್ಕೆ ಜಲ ನಿರೋಧಕ ಟೆಂಟ್ ಹಾಕಲಾಗಿದ್ದು, ನೂಕುನುಗ್ಗಲು ಉಂಟಾಗದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ.
ಲಕ್ಷಕ್ಕೂ ಹೆಚ್ಚು ಜನ ನಿರೀಕ್ಷೆಶನಿವಾರ ನಡೆಯುವ ಮೈತ್ರಿ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್‌ನಿಂದ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಲು ಸಿದ್ಧತೆ ಮಾಡಿ ಕೊಳ್ಳಲಾಗಿದೆ.
ಬಿಜೆಪಿಯಿಂದ ಒಂದು ಲಕ್ಷ ಹಾಗೂ ಜೆಡಿಎಸ್‌ನಿಂದ 60 ಸಾವಿರ ಜನರನ್ನು ಸೇರಿಸಲಾಗುತ್ತಿದೆ. ಅದಕ್ಕಾಗಿ ಹಳೇ ಮೈಸೂರು ಭಾಗದ ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಜನರನ್ನು ಕರೆತರಲಾಗುತ್ತಿದೆ. ಪ್ರತೀ ತಾಲೂಕಿಗೂ 25ರಿಂದ 30 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಅದ್ದೂರಿ ಸ್ವಾಗತ: ಚನ್ನಪಟ್ಟಣ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಸಂಚರಿಸಿದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಿದ್ದರಾಮಯ್ಯ ಅವರ ತವರಿಗೆ ಶುಕ್ರವಾರ ರಾತ್ರಿ ಆಗಮಿಸಿತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವ ಅಶ್ವತ್ಥನಾರಾಯಣ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖೀಲ್ ಕುಮಾರಸ್ವಾಮಿಗೆ ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.
ಪೌರಕಾರ್ಮಿಕರಿಂದ ಸ್ವತ್ಛತೆ: ಕಾಂಗ್ರೆಸ್ ಸಮಾವೇಶದ ಬಳಿಕ ಮೈಸೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಮಹಾರಾಜ ಕಾಲೇಜು ಮೈದಾನ ಮತ್ತು ರಸ್ತೆಯಲ್ಲಿ ಬಿದ್ದಿದ್ದ ಕಸ, ಬ್ಯಾನರ್, ಬಂಟಿಂಗ್‌ಗಳನ್ನು ಸಂಗ್ರಹಿಸಿ ಸ್ವತ್ಛಗೊಳಿಸಿದರು. ಹಾಗೆಯೇ ರಸ್ತೆಯುದ್ದಕ್ಕೂ ಹಾಕಿದ್ದ ಫ್ಲೆಕ್ಸ್‌ಗಳನ್ನು ತೆರವು ಮಾಡಿದರು. ಅನಂತರ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷಗಳ ಬ್ಯಾನರ್ ಹಾಗೂ ಫ್ಲೆಕ್ಸ್‌ಗಳನ್ನು ಅಳವಡಿಸಿದರು.
ನಿವೃತ್ತಿ ಪಡೆದು ಮನೆಗೆ ಹೋಗುವಾಗ ಇನ್ನೊಬ್ಬರ ಬಗ್ಗೆ ಹೇಳುವುದು ಸ್ವಾಭಾವಿಕ. ರಾಜಕೀಯದಿಂದ ಯಾರು ನಿವೃತ್ತಿಯಾಗುತ್ತಾರೆ ಅನ್ನುವುದು ಮುಂದೆ ತಿಳಿಯಲಿದೆ. ಪೋಕ್ಸೋ ಪ್ರಕರಣದ ಸಂಬಂಧ ಕೋರ್ಟ್‌ನಲ್ಲಿ ತೀರ್ಮಾನವಾದಾಗ ಎಲ್ಲವೂ ಬಹಿರಂಗವಾಗಲಿದೆ. ಅಲ್ಲಿಯ ವರೆಗೆ ನಾನು ಏನನ್ನೂ ಮಾತನಾಡುವುದಿಲ್ಲ.
-ಯಡಿಯೂರಪ್ಪ, ಮಾಜಿ ಸಿಎಂ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ನಾನು ತಪ್ಪು ಮಾಡಿಲ್ಲ ಎನ್ನುವ ಸಿದ್ದರಾಮಯ್ಯ ಅವರ ಸಮಾವೇಶ ಇಂದಿಗೆ ಮುಗಿದಿದೆ. ಆದರೆ ಬಿಜೆಪಿ ಮಾತ್ರ ಹೋರಾಟ ನಿಲ್ಲಿಸುವುದಿಲ್ಲ. ಅವರು ರಾಜೀನಾಮೆ ನೀಡುವ ವರೆಗೆ ನಾವು ಕೂಡ ಜಗ್ಗುವುದಿಲ್ಲ ಬಗ್ಗುವುದಿಲ್ಲ.
– ಆರ್. ಅಶೋಕ್, ವಿಪಕ್ಷ ನಾಯಕ
ಧೈರ್ಯ ಇದ್ದರೆ ಗಂಡಸ್ತನದಿಂದ ರಾಜಕೀಯ ಮಾಡ ಬೇಕು. ನಪುಂಸಕ ಮಾಡುವ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನೆ ಮಾಡುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂದು ಜನರು ನಿರ್ಧಾರ ಮಾಡುತ್ತಾರೆ. ಒಳ್ಳೆಯದು, ಕೆಟ್ಟದು ಏನು ಎನ್ನುವುದು ಜನರಿಗೆ ಗೊತ್ತಿದೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್… ಹುಷಾರು.
-ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.