ರೆಸಾರ್ಟ್‌ನಲ್ಲಿ ಚರ್ಚೆ, ಕ್ರೀಡೆಯೊಂದಿಗೆ ದಿನ ಕಳೆದ ಬಿಜೆಪಿ ಶಾಸಕರು

Team Udayavani, Jul 17, 2019, 3:07 AM IST

temple-bjp

ಬೆಂಗಳೂರು: ಮಂಗಳವಾರ ವಿಧಾನಸಭೆ ಕಲಾಪ ಇರದ ಕಾರಣ ಯಲಹಂಕ ಬಳಿಯ ರೆಸಾರ್ಟ್‌ನಲ್ಲಿ ತಂಗಿರುವ ಬಿಜೆಪಿ ಶಾಸಕರು ಇಡೀ ದಿನ ಸುಪ್ರೀಂಕೋರ್ಟ್‌ ವಿಚಾರಣೆ ಕುರಿತು ಮಾತುಕತೆ, ಹಿರಿಯ ನಾಯಕರೊಂದಿಗೆ ಚರ್ಚೆ, ಸಂವಾದದಲ್ಲಿ ಕಳೆದರು.

ಗುರು ಪೂರ್ಣಿಮೆ ಪ್ರಯುಕ್ತ ಕೆಲವರು ಸಮೀಪದ ದೇವಸ್ಥಾನಗಳಿಗೆ ತೆರಳಿದರೆ ಇನ್ನೂ ಹಲವು ಶಾಸಕರು ರೆಸಾರ್ಟ್‌ನಲ್ಲೇ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರು. ಬುಧವಾರವೂ ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಲಿರುವ ಶಾಸಕರು, ಗುರುವಾರ ಬೆಳಗ್ಗೆ ನೇರವಾಗಿ ವಿಧಾನಸಭೆಗೆ ಆಗಮಿಸಲಿದ್ದಾರೆ.

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಕುರಿತಂತೆ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠವು ಮಂಗಳವಾರ ಬೆಳಗ್ಗೆಯಿಂದ ಮಧ್ಯಾಹ್ನ 3ರವರೆಗೆ ವಾದ- ಪ್ರತಿವಾದ ಆಲಿಸಿತು. ಸಮ್ಮಿಶ್ರ ಸರ್ಕಾರದ ಸಂಖ್ಯಾಬಲ ಕುಸಿತಕ್ಕೆ ನಿರ್ಣಾಯಕರೆನಿಸಿರುವ ಶಾಸಕರ ರಾಜೀನಾಮೆ ಅಂಗೀಕಾರ ಕುರಿತಂತೆ ವಾದಿ, ಪ್ರತಿವಾದಿಗಳು ಮಂಡಿಸಿದ ವಿಚಾರದ ಬಗ್ಗೆಯೇ ಶಾಸಕರು ಚರ್ಚೆ ನಡೆಸಿದರು. ಕೆಲವರು ಸುದ್ದಿವಾಹಿನಿ, ಆಪ್ತರು, ಕಾನೂನು ತಜ್ಞರಿಂದ ಮಾಹಿತಿ ಪಡೆದು ಮಾತುಕತೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.

ಸುಪ್ರೀಂಕೋರ್ಟ್‌ ತೀರ್ಪಿನತ್ತ ಚಿತ್ತ: ವಾದ- ಪ್ರತಿ ವಾದವನ್ನು ಆಲಿಸಿರುವ ಸುಪ್ರೀಂಕೋರ್ಟ್‌ ಬುಧವಾರ ತೀರ್ಪು ಪ್ರಕಟಿಸಲಿದ್ದು, ಮೈತ್ರಿ ಪಕ್ಷಗಳು, ಅತೃಪ್ತ ಶಾಸಕರಂತೆ ಬಿಜೆಪಿ ಕೂಡ ತೀರ್ಪಿನತ್ತಲೇ ದೃಷ್ಟಿ ನೆಟ್ಟಿದೆ. ಮಂಗಳವಾರದ ವಿಚಾರಣೆ ಬಳಿಕ ಹಿರಿಯ ನಾಯಕರು ಕಾನೂನು ತಜ್ಞರೊಂದಿಗೂ ಚರ್ಚೆ ನಡೆಸಿದ್ದು, ಉತ್ತಮ ತೀರ್ಪಿನ ನಿರೀಕ್ಷೆಯಲ್ಲಿದ್ದಾರೆ. ಸಂಜೆ ಹೊತ್ತಿಗೆ ಬಹಳಷ್ಟು ಶಾಸಕರು ನಿರಾಳರಾಗಿದ್ದರು.

ಸೋಮವಾರದಿಂದ ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಮೀಪದ ಸಾಯಿ ಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆದರು. ಇನ್ನೂ ಕೆಲ ಶಾಸಕರ ಗುಂಪು ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಿತು.

ಕ್ರಿಕೆಟ್‌ ಆಡಿ ಸಂಭ್ರಮ: ಸಂಜೆ ಹೊತ್ತಿಗೆ ಶಾಸಕರು ಕ್ರಿಕೆಟ್‌ ಆಟವಾಡಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಬ್ಯಾಟಿಂಗ್‌ ಮಾಡುವ ಮೂಲಕ ಶಾಸಕರನ್ನು ಹುರಿದುಂಬಿಸಿದರು.

ಹಿರಿಯ- ಕಿರಿಯರ ಸಂವಾದ: ಯಡಿಯೂರಪ್ಪ ಸೇರಿ ಹಿರಿಯ ನಾಯಕರಾದ ಜಗದೀಶ ಶೆಟ್ಟರ್‌, ಕೆ.ಎಸ್‌.ಈಶ್ವರಪ್ಪ ಇತರರು ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಿರುವುದರಿಂದ ಕಿರಿಯ ಶಾಸಕರು ಅವರೊಂದಿಗೆ ಆಗಾಗ್ಗೆ ಚರ್ಚೆಯಲ್ಲಿ ತೊಡಗಿದ್ದರು. ಮಧ್ಯಾಹ್ನ ಯಡಿಯೂರಪ್ಪ ಅವರೊಂದಿಗೆ ಒಟ್ಟಿಗೆ ಊಟ ಸವಿದ ಶಾಸಕರು, ಬಳಿಕ ಅವರೊಂದಿಗೂ ಕೆಲ ಹೊತ್ತು ಮಾತುಕತೆ ನಡೆಸಿದರು ಎನ್ನಲಾಗಿದೆ.

ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ಸಮೀಪದ ಚಲ್ಲಹಳ್ಳಿ ಗ್ರಾಮದವರು ರೆಸಾರ್ಟ್‌ನಲ್ಲಿ ಭಜನೆ, ಜಾನಪದ ಗೀತೆಗಳನ್ನು ಪ್ರಸ್ತುತಪಡಿಸಿದರು. ಕುಮಾರ್‌ ಬಂಗಾರಪ್ಪ, ಎಂ.ಪಿ.ಕುಮಾರಸ್ವಾಮಿ, ಎಸ್‌.ಆರ್‌.ವಿಶ್ವನಾಥ್‌, ಕಳಕಪ್ಪ ಬಂಡಿ ಅವರು ಗೀತ ಗಾಯನ ನಡೆಸಿ, ಗಮನ ಸೆಳೆದರು.

ಹಿರಿಯ ನಾಯಕರ ವಿಶ್ವಾಸ: ಸುಪ್ರೀಂಕೋರ್ಟ್‌ ಬುಧವಾರ ನೀಡಲಿರುವ ತೀರ್ಪು ಅತೃಪ್ತ ಶಾಸಕರ ಪರವಾಗಿಯೇ ಇರಲಿದೆ ಎಂಬ ವಿಶ್ವಾಸ ಪಕ್ಷದ ಹಿರಿಯ ನಾಯಕರಲ್ಲಿದ್ದಂತಿದೆ. ಹಾಗಾಗಿ, ಇದೇ ವಿಚಾರವನ್ನು ಶಾಸಕರಿಗೂ ತಿಳಿಸಿ ಎಲ್ಲರೂ ಒಟ್ಟಿಗೆ ಸಂಘಟಿತರಾಗಿರುವಂತೆ ಹಿರಿಯ ನಾಯಕರು ಸೂಚಿಸಿದರು ಎಂದು ಮೂಲಗಳು ಹೇಳಿವೆ.

ತೀರ್ಪು ಆಧರಿಸಿ ರಾಜೀನಾಮೆ ಬಗ್ಗೆ ನಿರ್ಧಾರ: ಇನ್ನೂ ಮೂರ್‍ನಾಲ್ಕು ಮಂದಿ ಅತೃಪ್ತ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಬುಧವಾರ ಸುಪ್ರೀಂಕೋರ್ಟ್‌ ನೀಡುವ ತೀರ್ಪು ಆಧರಿಸಿ ಅವರು ಮುಂದುವರಿಯಲಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಸಂಬಂಧ ಸುಪ್ರೀಂಕೋರ್ಟ್‌ ತೀರ್ಪು ನಿರ್ಣಾಯಕವೆನಿಸಿದ್ದು, ಅದನ್ನು ಆಧರಿಸಿ ರಾಜೀನಾಮೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲು ಕೆಲ ಶಾಸಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.