ಎಚ್ಡಿಕೆ ಹೇಳಿಕೆಗೆ ಮಹತ್ವ ನೀಡದ ಬಿಜೆಪಿ

Team Udayavani, Oct 29, 2019, 3:09 AM IST

bjp-logo

ಬೆಂಗಳೂರು: “ಬಿಜೆಪಿ ಸರ್ಕಾರವನ್ನು ಉರುಳಿಸಲು ಬಿಡುವುದಿಲ್ಲ’ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನು ರಾಜ್ಯ ಬಿಜೆಪಿ ನಾಯಕರು ಹೆಚ್ಚು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಮೈತ್ರಿ ಸರ್ಕಾರ ಪತನವಾದ ನಂತರ ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರುತ್ತಿದ್ದ ಕುಮಾರಸ್ವಾಮಿಯವರು ಇದ್ದಕ್ಕಿದ್ದಂತೆ ಬಿಜೆಪಿ ಪರ ಒಲವಿರುವಂತೆ ನೀಡಿರುವ ಹೇಳಿಕೆಗೆ ಬಿಜೆಪಿ ನಾಯಕರು ಹೆಚ್ಚಿನ ಮಹತ್ವ ನೀಡುವ ಗೋಜಿಗೆ ಹೋದಂತಿಲ್ಲ.

ಬಿಜೆಪಿ ಸರ್ಕಾರ ರಚನೆಯಾದ ಬಳಿಕ ಮುಖ್ಯಮಂತ್ರಿಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ಆರೋಪ ಮಾಡುತ್ತಲೇ ಬಂದಿರುವ ಕುಮಾರಸ್ವಾಮಿ, ಏಕಾಏಕಿ ಬಿಜೆಪಿ ಬೆಂಬಲಿಸುವ ರೀತಿ ಯಲ್ಲಿ ಮಾತನಾಡಿರುವುದರ ಹಿಂದಿನ ಮರ್ಮವನ್ನು ಸುಲಭವಾಗಿ ಊಹಿಸಬಹುದು. ಈಗಾಗಲೇ ಜೆಡಿಎಸ್‌ನ ಹಲವು ಶಾಸಕರು ಬಿಜೆಪಿ, ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಅವರನ್ನು ಹಿಡಿದಿಟ್ಟುಕೊಳ್ಳುವ ತಂತ್ರದ ಭಾಗವಾಗಿ ಕುಮಾರಸ್ವಾಮಿಯವರು ಈ ರೀತಿಯ ಹೇಳಿಕೆ ನೀಡಿದಂತಿದೆ ಎಂದು ಸಚಿವರೊಬ್ಬರು ತಿಳಿಸಿದರು.

ಅನಿವಾರ್ಯ ಸಂದರ್ಭ ಬಂದರೆ ಬಿಜೆಪಿ ಸರ್ಕಾರ ಉಳಿಸಲು ಬೆಂಬಲ ನೀಡಲೂ ಸಿದ್ಧ ಎಂಬ ಸಂದೇಶ ರವಾನಿಸುವ ಮೂಲಕ ಪಕ್ಷ ತೊರೆಯುವ ಚಿಂತನೆಯಲ್ಲಿರುವ ಜೆಡಿಎಸ್‌ ಶಾಸಕರನ್ನೂ ವಿಶ್ವಾಸದಲ್ಲಿಟ್ಟುಕೊಳ್ಳುವ ಪ್ರಯತ್ನವಿರಬಹುದು. ಇದಕ್ಕೆಲ್ಲಾ ಬಿಜೆಪಿ ಹೆಚ್ಚಿನ ಮಹತ್ವ ನೀಡುವುದಿಲ್ಲ. ಕಳೆದ ವರ್ಷ ಮಡಿಕೇರಿಯಲ್ಲಿ ನೆರೆ, ಭೂಕುಸಿತ ಉಂಟಾದಾಗ ಕುಮಾರಸ್ವಾಮಿಯವರ ಸರ್ಕಾರ ಹೇಗೆ ಸ್ಪಂದಿಸಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರಿಗೆ ಟಾಂಗ್‌: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಕುಮಾರಸ್ವಾಮಿಯವರು ರೀತಿಯ ಹೇಳಿಕೆ ನೀಡಿದಂತಿದೆಯೇ ಹೊರತು ಬಿಜೆಪಿಯನ್ನು ಓಲೈಸುವ ಉದ್ದೇಶವಿದ್ದಂತಿಲ್ಲ. ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ಗೆ ಭವ್ಯ ಸ್ವಾಗತ ಕೋರಿದ ವಿಚಾರದಲ್ಲೂ ಕುಮಾರಸ್ವಾಮಿಯವರು ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.

ಏನಾದರೂ ಆಗಲಿ ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರಿಗೆ ಸೂಕ್ತವಾಗಿ ಸ್ಪಂದಿಸುತ್ತಿದೆ ಎಂಬಂತೆ ಪ್ರತಿಪಕ್ಷ ಜೆಡಿಎಸ್‌ ಹೇಳಿರುವುದು ಸಹಜವಾಗಿಯೇ ಸರ್ಕಾರದ ಉತ್ಸಾಹವನ್ನು ಹೆಚ್ಚಿಸುತ್ತದೆ. ಅದನ್ನು ಹೊರತುಪಡಿಸಿ ಅವರ ಹೇಳಿಕೆಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಮತ್ತೂಬ್ಬ ಸಚಿವರು ತಿಳಿಸಿದರು.

ಮನಸ್ಸಿನಲ್ಲಿರುವುದು ಮಾತಿನ ಮೂಲಕ ಬಂದಿದೆ: ಬಿಜೆಪಿ ಸರ್ಕಾರವನ್ನು ಉರುಳಿಸಲು ಬಿಡುವುದಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅನರ್ಹತೆಗೊಂಡ ಶಾಸಕ ಎಂ.ಟಿ.ಬಿ. ನಾಗರಾಜ್‌, ಅವರ ಮನಸ್ಸಿನಲ್ಲಿರುವುದು ಮಾತಿನ ಮೂಲಕ ಬಂದಿದೆ. ಅವರೇ ಹೇಳಿದಂತೆ ಅವರ ಬೆಂಬಲ ಬಿಜೆಪಿಗೆ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಸಿನಿಮಾ ನಟಿ ಮೇಲೆ ಹಲ್ಲೆ : ಮಾಜಿ ಪ್ರಿಯಕರ ಸೆರೆ

ಸಿನಿಮಾ ನಟಿ ಮೇಲೆ ಹಲ್ಲೆ : ಮಾಜಿ ಪ್ರಿಯಕರ ಸೆರೆ

ಕೋವಿಡ್ ಲಸಿಕೆ ಪಡೆದವರಿಗಷ್ಟೇ ಹಾಸನಾಂಬೆ ದರ್ಶನ ಭಾಗ್ಯ

ಕೋವಿಡ್ ಲಸಿಕೆ ಪಡೆದವರಿಗಷ್ಟೇ ಹಾಸನಾಂಬೆ ದರ್ಶನ ಭಾಗ್ಯ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಬಂಧನ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಆರೋಪಿಸಿ ಬಂಧನ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.