“ರಕ್ತದಾನ ಮಾಡುವುದು ಜೀವ ಕೊಡುವ ವಿಷಯ’

ಅರಣ್ಯ ರಕ್ಷಕ-ವೀಕ್ಷಕರ ಸಂಘದಿಂದ ರಕ್ತದಾನ ಶಿಬಿರ ಉದ್ಘಾಟನೆ

Team Udayavani, May 17, 2020, 5:44 AM IST

“ರಕ್ತದಾನ ಮಾಡುವುದು ಜೀವ ಕೊಡುವ ವಿಷಯ’

ಉಡುಪಿ: ದೇಶ ಪ್ರತಿ ವರ್ಷ 20 ಲಕ್ಷ ಯೂನಿಟ್‌ ರಕ್ತದ ಕೊರತೆ ಎದುರಿಸುತ್ತಿದೆ. ಪ್ರಸ್ತುತ ಕೋವಿಡ್‌-19 ಸೋಂಕು ಬಂದ ಬಳಿಕ ಕೊರತೆ ಪ್ರಮಾಣ ಹೆಚ್ಚಿದೆ. ಇಂತಹ ಸಂದರ್ಭ ಅರಣ್ಯ ಇಲಾಖೆಯ ಅರಣ್ಯರಕ್ಷಕರು ಮತ್ತು ವೀಕ್ಷಕರು ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯ. ರಕ್ತದಾನ ಜೀವ ಕೊಡುವ ವಿಷಯ ಎಂದು ಕುಂದಾಪುರ ಅರಣ್ಯ ಪ್ರಾದೇಶಿಕ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಆಶಿಷ್‌ ಎಂ.ವಿ. ರೆಡ್ಡಿ ಹೇಳಿದರು.

ಕರ್ನಾಟಕ ರಾಜ್ಯ ಅರಣ್ಯ ರಕ್ಷಕ ಮತ್ತು ವೀಕ್ಷಕರ ಸಂಘ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗ ಮತ್ತು ರಕ್ತನಿಧಿ ಕೇಂದ್ರ, ಜಿಲ್ಲಾ ಸರಕಾರಿ ಆಸ್ಪತ್ರೆ ಆಶ್ರಯದಲ್ಲಿ ಶನಿವಾರ ಟೌನ್‌ ಹಾಲ್‌ ಸಮೀಪದ ನೂತನ ಗ್ರಂಥಾಲಯ ಕಟ್ಟಡದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್‌ ಮಾತನಾಡಿ, ಕೋವಿಡ್‌-19 ವ್ಯಾಪಕವಾಗಿರುವ ಸಂದರ್ಭ ರಕ್ತದಾನ ಮಾಡಲು ವಿವಿಧ ಸಂಘಟನೆಗಳು ಮುಂದೆ ಬಂದಿರುವುದು ಸಂತೋಷದ ಸಂಗತಿ. ಅರಣ್ಯ ಇಲಾಖೆಯವರು ಪ್ರತಿ ವರ್ಷ ಅರಣ್ಯ ಹುತಾತ್ಮ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ ಹಮ್ಮಿಕೊಳ್ಳುತ್ತಿದ್ದರು. ಈ ಬಾರಿ ಕೋವಿಡ್‌-19 ಸಂದರ್ಭ ರಕ್ತದಾನ ಶಿಬಿರ ಏರ್ಪಡಿಸಿದ್ದಾರೆ ಎಂದರು.

ಅರಣ್ಯ ರಕ್ಷಕ ಮತ್ತು ವೀಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ಜಿ. ನಾಯಕ್‌, ಗೌರವಾಧ್ಯಕ್ಷ ದೇವರಾಜ್‌ ಪಾಣ, ಪ್ರಧಾನ ಕಾರ್ಯದರ್ಶಿ ಕೇಶವ ಪೂಜಾರಿ, ಖಜಾಂಚಿ ಅಭಿಲಾಷ್‌ ಎಸ್‌.ಬಿ, ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್‌ ಸದಸ್ಯ ಕಿರಣ್‌ ಹೆಗ್ಡೆ, ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ| ವೀಣಾಕುಮಾರಿ, ಉಡುಪಿ ವಲಯ ಅರಣ್ಯಾಧಿಕಾರಿ ರಿಚರ್ಡ್‌ ಲೋಬೋ ಉಪಸ್ಥಿತರಿದ್ದರು.

ರಕ್ತದಾನ ಶಿಬಿರ ಉದ್ಘಾಟಿಸಿದ ಕುಂದಾಪುರ ಅರಣ್ಯ ಪ್ರಾದೇಶಿಕ ವಿಭಾಗದ ಉಪಅರಣ್ಯ ಸಂರಕ್ಷಣಾ ಧಿಕಾರಿ ಆಶಿಷ್‌ ಎಂ.ವಿ. ರೆಡ್ಡಿ ಶಿಬಿರದಲ್ಲಿ ಸ್ವತಃ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿದರು.

ಪರಿಹಾರ ನಿಧಿಗೆ ಕೊಡುಗೆ
ಕೋವಿಡ್‌-19 ಮುಖ್ಯಮಂತ್ರಿ ಗಳ ಪರಿಹಾರ ನಿಧಿಗೆ ಒಂದು ದಿನದ ವೇತನವನ್ನು ಈಗಾಗಲೇ ನೀಡಲಾಗಿದೆ. ಅಲ್ಲದೆ 66,666 ರೂ. ಸಹಾಯಧನವನ್ನು ಶೀಘ್ರ ಜಿಲ್ಲಾಧಿಕಾರಿಗಳ ಮೂಲಕ ಪರಿಹಾರ ನಿಧಿಗೆ ಕಳುಹಿಸಿಕೊಡಲಾಗುವುದು ಎಂದು ಅರಣ್ಯ ವೀಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು ಘೋಷಣೆ ಮಾಡಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.