ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಮತದಾರರ ಪಟ್ಟಿ ಹಿಡಿದು ಮನೆ-ಮನೆಗೆ ಭೇಟಿ ನೀಡಲು ಸೂಚನೆ

Team Udayavani, Jan 22, 2022, 5:50 AM IST

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17.53 ಲಕ್ಷಕ್ಕೂ ಹೆಚ್ಚಿನ ಮತದಾರರಿದ್ದು, ಬಿಎಲ್‌ಒ (ಬೂತ್‌ ಮಟ್ಟದ ಅಧಿಕಾರಿ)ಗಳು ಮತದಾರರ ಪಟ್ಟಿಹಿಡಿದು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಕೊರೊನಾ ನಿರ್ಬಂಧಕ ಲಸಿಕೆ ಪಡೆಯದವರನ್ನು ಪತ್ತೆ ಮಾಡಿ, ಲಸಿಕೆ ಕೊಡಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ಲಸಿಕಾಕರಣವನ್ನು ತೀವ್ರಗೊಳಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬಂದಿಯೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ವರ್ಚುವಲ್‌ ಸಭೆಯಲ್ಲಿ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 1,861 ಬಿಎಲ್‌ಒಗಳಿದ್ದಾರೆ. ಅವರ ಮೇಲ್ವಿಚಾರಣೆಗಾಗಿ 186 ಸೂಪರ್‌ ವೈಸರ್‌ಗಳಿದ್ದಾರೆ. ಬಿಎಲ್‌ಒಗಳು ಮತ ದಾರರ ಪಟ್ಟಿ ಹಿಡಿದು ತಮ್ಮ ಬೂತ್‌ ವ್ಯಾಪ್ತಿಯ ಮನೆ-ಮನೆಗಳಿಗೆ ಭೇಟಿ ನೀಡಿ 18 ವರ್ಷ ತುಂಬಿದವರನ್ನು ನಮೂನೆ 6ರಲ್ಲಿ ಅರ್ಜಿ ಭರ್ತಿ ಮಾಡಿ ಮತದಾರರ ಪಟ್ಟಿಗೆ ಅವರ ಹೆಸರನ್ನು ಸೇರ್ಪಡೆ ಮಾಡುವ ಪ್ರಕ್ರಿಯೆ ಮಾಡಬೇಕು. ಅದೇ ಮನೆಯಲ್ಲಿ 15 ವರ್ಷ ಮೇಲ್ಪಟ್ಟವರಿದ್ದಲ್ಲಿ ಅವರಿಂದ ಲಸಿಕೆಯ ಮಾಹಿತಿ ಪಡೆಯಬೇಕು. ಲಸಿಕೆ ಪಡೆಯದಿದ್ದಲ್ಲಿ ಸಂಬಂಧಿಸಿದ ವೈದ್ಯಾಧಿ ಕಾರಿಗಳು, ಪಿಡಿಒ, ಕಂದಾಯ ನಿರೀಕ್ಷಕರು, ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ಲಸಿಕೆ ಕೊಡಿಸುವ ವ್ಯವಸ್ಥೆ ಮಾಡಬೇಕು. ಅದೇ ಮನೆಯಲ್ಲಿ ಮರಣ ಹೊಂದಿದವರ ಹೆಸರು ಮತದಾರರ ಪಟ್ಟಿ ಯಲ್ಲಿದ್ದರೆ ಅದನ್ನು ಪಟ್ಟಿಯಿಂದ ತೆಗೆಯುವ ಕ್ರಮ ಕೈಗೊಳ್ಳಬೇಕು. ಮುಖ್ಯವಾಗಿ ಅನಾರೋಗ್ಯ ಪೀಡಿತರಿದ್ದರೆ ಅವರು ಲಸಿಕೆ ಪಡೆದ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಲಸಿಕೆ ಪಡೆಯದಿದ್ದರೆ ಸಂಬಂಧಿಸಿದವರನ್ನು ಸಂಪರ್ಕಿಸಿ ಲಸಿಕೆ ಕೊಡಿಸಬೇಕು ಎಂದರು.

ಇಲಾಖೆಗಳಲ್ಲೂ ಪರಿಶೀಲನೆ
ಪಂಚಾಯತ್‌ ರಾಜ್‌ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿ ಲಸಿಕೆ ಆಗಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಅದಕ್ಕಾಗಿ ಲಸಿಕೆ ಪ್ರಮಾಣಪತ್ರವನ್ನು ಪರಿಶೀಲಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದ ಅವರು, 2ನೇ ಡೋಸ್‌ ನಂತರ 9 ತಿಂಗಳ ಅವಧಿ ಪೂರೈಸಿರುವ ಮುಂಚೂಣಿ ಕಾರ್ಯಕರ್ತರಿಗೆ ಕೂಡಲೇ ಬೂಸ್ಟರ್‌ ಡೋಸ್‌ ಅನ್ನು ಕೊಡಿಸಬೇಕು ಎಂದರು.

ಜಿ.ಪಂ. ಸಿಇಒ ಡಾ| ಕುಮಾರ್‌, ಸಹಾ ಯಕ ಆಯುಕ್ತ ಮದನ್‌ ಮೋಹನ್‌, ಎಲ್ಲ ತಾಲೂಕುಗಳ ತಹಶಿಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿ, ಶಿಶು ಅಭಿವೃದ್ದಿ ಯೋಜ ನಾಧಿಕಾರಿ, ಬಿಎಲ್‌ಒ ಸೂಪರ್‌ವೈಸರ್‌, ಕಂದಾಯ ನಿರೀಕ್ಷಕರು ಉಪಸ್ಥಿತರಿದ್ದರು.

ವಾರಕ್ಕೆರಡು ದಿನ ಲಸಿಕೆ ಮೇಳ
ಪ್ರತೀ ಮಂಗಳವಾರ ಹಾಗೂ ಶುಕ್ರವಾರ ಲಸಿಕೆ ಮೇಳವನ್ನು ಹಮ್ಮಿಕೊಳ್ಳುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಯವರು, ಮೇಳದಲ್ಲಿ ಮೊದಲ ಅಥವಾ ಎರಡನೇ ಡೋಸ್‌ ಲಸಿಕೆ ಕೊಡಿಸಬೇಕು. ಅದರ ಹೊರತಾಗಿ ಅಧಿಕಾರಿಗಳು ಮೈಕ್ರೋ ಯೋಜನೆಗಳನ್ನು ರೂಪಿಸಿಕೊಂಡು ಲಸಿಕೆ ಕೊಡಿಸಬೇಕು. ಕೋವಿಡ್‌ ಲಸಿಕಾಕರಣದಲ್ಲಿ ಸಂಬಂಧಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆರೋಗ್ಯ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಗದಿತ ಗುರಿ ಸಾಧಿಸದ ವೈದ್ಯಕೀಯ ಅಧಿಕಾರಿಗಳಿಗೆ ತಾಲೂಕು ಮಟ್ಟದಲ್ಲಿ ನೋಟಿಸ್‌ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಗುರಿ ಸಾಧಿಸದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಶಿಪಾರಸು ಮಾಡಿ ಪತ್ರ ಬರೆಯುವುದಾಗಿ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.