ಮೈ ನವಿರೇಳಿಸಿದ ಹೋರಿ ಹಬ್ಬ : ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ಹೋರಿಪ್ರಿಯರು

Team Udayavani, Feb 19, 2022, 4:11 PM IST

ಮೈ ನವಿರೇಳಿಸಿದ ಹೋರಿ ಹಬ್ಬ : ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ಹೋರಿಪ್ರಿಯರು

ಸೊರಬ: ಮಲೆನಾಡು ಹಾಗೂ ಬಯಲುಸೀಮೆ ಭಾಗದ ರೈತರ ಹಬ್ಬವಾಗಿರುವ ಜನಪದ ಕ್ರೀಡೆ, ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ತಾಲೂಕಿನ ಬಾರಂಗಿ ಗ್ರಾಮದಲ್ಲಿ ಶುಕ್ರವಾರ
ಜರುಗಿತು.

ದೀಪಾವಳಿ ಹಾಗೂ ಸಂಕ್ರಾಂತಿ ಹಬ್ಬದ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಮಹತ್ವ ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು
ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು, ಜಿಲ್ಲೆಗಳಿಂದ ಭಾರೀ ಸಂಖ್ಯೆಯಲ್ಲಿ ಹೋರಿ ಪ್ರಿಯರು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರ ಮೈನವಿರೇಳಿಸಿತು.

ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಬಲೂನುಗಳು ಹಾಗೂ ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು. ಅಖಾಡದಲ್ಲಿ ಭಾರಂಗಿ ಮಹಾರಾಜ, ರಾಣೆಬೆನ್ನೂರು ಡಾನ್‌, ನೆಗವಾಡಿ ಗರುಡ, ನಳಲಿಕೊಪ್ಪ ಪರಮಾತ್ಮ, ಬೆಟಗೇರಿ ಡಾನ್‌, ಬಾರಂಗಿ ಮಹಾವೀರ, ಹಂಸಭಾವಿಯ ಕರ್ನಾಟಕ ನಂದಿ, ಬೆಣ್ಣಿಗೇರಿಯ ಮಿಡಿನಾಗ, ತಡಸನಹಳ್ಳಿ
ಡಾನ್‌, ಬಾರಂಗಿ ಓಂಕಾರ, ಶಿಕಾರಿಪುರ ಗಾಂಧಿನಗರದ ಸೂಪರ್‌, ಯಲವಳ್ಳಿ ಕಲ್ಲೇಶ, ಬೆಣ್ಣಿಗೇರಿಯ ಮಹಾತ್ಮ, ಗಿಣಿವಾಲದ ಉಗ್ರ ನರಸಿಂಹ, ಯಮ್ಮಿಗನೂರು ಕುರುಕ್ಷೇತ್ರ, ಕುಣೇತಪ್ಪದ ಅ ಪತಿ, ಮಾಸೂರಿನ ಎನ್‌ಟಿಸಿ ಸಾಹುಕಾರ್‌, ನರಸಾಪುರದ ಚಂದು, ಶಾಂತಗೇರಿ ಗೂಳಿ, ಕಪ್ಪನಹಳ್ಳಿ ಅರ್ಭಟ, ಹಾವೇರಿಯ ಹೊಯ್ಸಳ, ಹಿಂದೂ ಸಾಮ್ರಾಟ, ಸಮನವಳ್ಳಿ ಹುಲಿ, ಕಪ್ಪನಹಳ್ಳಿ ಅಂಬಿಗರ ಹುಲಿ, ಕದರಮಂಡಲಗಿ ಕೆಡಿಎಂ ಕಿಂಗ್‌, ಆನವಟ್ಟಿ ಮಲೆನಾಡು ದಂಗೆ, ರಾಗಿಕೊಪ್ಪ ಬುಲೆಟ್‌ ರಾಜ, ತಡಸನಹಳ್ಳಿ ತಾಂಡವ, ಪುನೀತ್‌ ರಾಜಕುಮಾರ ಸವಿನೆನಪಿಗಾಗಿ ಆನವಟ್ಟಿಯ ಪವರ್‌ ಸ್ಟಾರ್‌ ಸೇರಿದಂತೆ ವಿವಿಧ ಹೆಸರುಗಳ ಹೋರಿಗಳು ಅಖಾಡದಲ್ಲಿ ಓಡಿದವು. ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊಂಡರು. ಅಖಾಡದಲ್ಲಿ ತೇರಿನಂತೆ ಕಾಣುವ ಪೀಪಿ ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದಿತು.

ಇದನ್ನೂ ಓದಿ : ಬಾಲ್ಯವಿವಾಹ ತಡೆಯುವಲ್ಲಿ ಗ್ರಾ.ಪಂ ಪಾತ್ರ ಮುಖ್ಯ : ಚೈಲ್ಡ್‌ಲೈನ್‌ 1098 ಸದುಪಯೋಗಕ್ಕೆ ಕರೆ

ಹೋರಿ ಹಬ್ಬದ ಆಯೋಜಿಸಿದ್ದ ಬಾರಂಗಿ ಹಾಗೂ ಸುತ್ತಲಿನ ಗ್ರಾಮಸ್ಥರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡು, ಅಖಾಡದಲ್ಲಿ ಕ್ರಮವಾಗಿ ಒಂದೊಂದೇ
ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯ ಸಂಭವಿಸಲಿಲ್ಲ.

ಆಯೋಜಕರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.