ಹಾಲಾಡಿ-ಕಾಸಾಡಿ: ಕುಸಿಯುತ್ತಿರುವ ಗುಡ್ಡ; ಅಪಾಯ ಭೀತಿ

ಬೈಂದೂರು- ವಿರಾಜಪೇಟೆ ರಾಜ್ಯ ಹೆದ್ದಾರಿ

Team Udayavani, Sep 25, 2022, 10:33 AM IST

4

ಹಾಲಾಡಿ: ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿಯ ಹಾಲಾಡಿ ಹಾಗೂ ಕಾಸಾಡಿ ಮಧ್ಯೆ ಎರಡು ಕಡೆಗಳಲ್ಲಿ ರಸ್ತೆ ಬದಿಯ ಗುಡ್ಡ ನಿರಂತರವಾಗಿ ಕುಸಿಯುತ್ತಿದೆ. ಇದರಿಂದ ರಾಜ್ಯ ಹೆದ್ದಾರಿಯ ಸಂಚಾರಕ್ಕೆ ಅಪಾಯದ ಭೀತಿ ಎದುರಾಗಿದೆ. ನಿರಂತರ ಮಳೆಯಿಂದಾಗಿ ಹಾಲಾಡಿಯಿಂದ ಗೋಳಿಯಂಗಡಿ ಮುಖ್ಯ ರಸ್ತೆಯ ಹಾಲಾಡಿ- ಕಾಸಾಡಿ ಮಧ್ಯೆ ಗುಡ್ಡ ಕುಸಿತವು ಕಳೆದ ಜುಲೈನಿಂದಲೇ ಆರಂಭಗೊಂಡಿದೆ.

ಆಗ ಸಣ್ಣ ಮಟ್ಟದಲ್ಲಿ ಆರಂಭಗೊಂಡಿದ್ದು, ಈಗ ದೊಡ್ಡ ಮಟ್ಟದಲ್ಲಿ ಅಪಾಯ ತಂದೊಡ್ಡುವ ಭೀತಿ ಶುರುವಾಗಿದೆ. ಬಂಡೆಕಲ್ಲು ಬೀಳುವ ಭೀತಿ ಗುಡ್ಡದ ಸುಮಾರು 50 ಮೀಟರ್‌ ವರೆಗೆ ಮಣ್ಣು ಕುಸಿದಿರುವುದರಿಂದ ದೊಡ್ಡ ಬಂಡೆ ಕಲ್ಲುಗಳು ಬೀಳಲು ಸಿದ್ಧವಾಗಿದ್ದು, ಇನ್ನಷ್ಟು ಕುಸಿತಗೊಂಡರೆ ಆ ಕಲ್ಲುಗಳು ರಸ್ತೆಗೆ ಬೀಳುವ ಅಪಾಯವು ಇದೆ. ವಾಹನಗಳು ಸಂಚರಿಸುವ ವೇಳೆ ಏನಾದರೂ ಜಾರಿಕೊಂಡು ಬಂದು ರಸ್ತೆಗೆ ಬಿದ್ದರೆ ಯಾರು ಹೊಣೆ ಎನ್ನುವ ಪ್ರಶ್ನೆ ಸಾರ್ವಜನಿಕರದ್ದಾಗಿದೆ. ಪ್ರಮುಖ ಹೆದ್ದಾರಿ ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿಯು ಮುಖ್ಯವಾಗಿ ಎರಡು ಪ್ರಮುಖ ಧಾರ್ಮಿಕ ಕೇಂದ್ರ ಗಳಾದ ಕೊಲ್ಲೂರು – ಶೃಂಗೇರಿ ನಡುವಿನ ಸಂಪರ್ಕ ರಸ್ತೆಯಾಗಿದೆ.

ಇದಲ್ಲದೆ ಕುಂದಾಪುರ, ಸಿದ್ದಾಪುರ, ಶಂಕರನಾರಾಯಣ, ಹಾಲಾಡಿ, ಹೆಬ್ರಿ, ಕಾರ್ಕಳ, ಆಗುಂಬೆ ಕಡೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ನಿತ್ಯ ಸಾವಿರಾರು ವಾಹನಗಳು, ಹತ್ತಾರು ಕೆಎಸ್‌ ಆರ್‌ಟಿಸಿ, ಖಾಸಗಿ ಬಸ್‌ಗಳು ಸಂಚರಿಸುತ್ತವೆ.

ಶಾಶ್ವತ ಕಾಯಕಲ್ಪಕ್ಕೆ ಆಗ್ರಹ

ಇದು ಈ ಭಾಗದ ಪ್ರಮುಖ ರಸ್ತೆಗಳಲ್ಲಿ ಒಂದಾಗಿದ್ದು, ಪ್ರತಿನಿತ್ಯ ಸಂಚರಿಸಲು ಸಾವಿರಾರು ಮಂದಿ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಈಗಾಗಲೇ ರಸ್ತೆಯವರೆಗೆ ಕುಸಿದಿರುವ ಗುಡ್ಡ ಇನ್ನಷ್ಟು ಕುಸಿದು, ಸಂಚಾರಕ್ಕೂ ತೊಡಕಾಗುವ ಭೀತಿಯಿದೆ. ಆದ್ದರಿಂದ ಭವಿಷ್ಯದಲ್ಲಿ ಕುಸಿಯದಂತೆ ಶಾಶ್ವತ ಕಾಮಗಾರಿ ಕಾಯಕಲ್ಪ ಕೈಗೊಳ್ಳಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ. ಶೀಘ್ರ ದುರಸ್ತಿ ಹಾಲಾಡಿ ಸಮೀಪದ ರಸ್ತೆ ಬದಿ ಗುಡ್ಡ ಕುಸಿದಿರುವ ಬಗ್ಗೆ ಗಮನದಲ್ಲಿದ್ದು, ಮಳೆಗಾಲದಲ್ಲಿ ಕಾಮಗಾರಿ ಮಾಡಿದರೆ ಮತ್ತಷ್ಟು ಕುಸಿಯುವ ಅಪಾಯ ಇರುತ್ತದೆ. ಅದಕ್ಕೆ ಮಳೆ ಕಡಿಮೆಯಾಗುವವರೆಗೆ ಮಾಡಿರಲಿಲ್ಲ.

ಶೀಘ್ರ ರಸ್ತೆ: ಬದಿಗೆ ಬಿದ್ದಿರುವ ಮಣ್ಣನ್ನು ತೆರವು ಮಾಡಲಾಗುವುದು. ದೊಡ್ಡ ಬಂಡೆ ಕಲ್ಲುಗಳನ್ನು ಸಹ ತೆರವು ಮಾಡಲಾಗುವುದು. ಸೈಡ್‌ವಾಲ್‌ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು. – ದುರ್ಗಾದಾಸ್‌, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ ಕುಂದಾಪುರ

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.