ಸಂಪುಟ ವಿಸ್ತರಣೆ: ಮಾಸಾಂತ್ಯಕ್ಕೂ ಡೌಟು?


Team Udayavani, Jan 13, 2020, 3:10 AM IST

bjp-logo

ಬೆಂಗಳೂರು: ಸಂಕ್ರಾಂತಿ ಬಳಿಕ ನಡೆಯಲಿದೆ ಎನ್ನಲಾಗಿದ್ದ ಸಂಪುಟ ವಿಸ್ತರಣೆ ಇದೀಗ ಮಾಸಾಂತ್ಯಕ್ಕೆ ಮುಂದೂಡಿಕೆಯಾದಂತಿದ್ದು, ವರಿಷ್ಠರಿಂದ ಒಪ್ಪಿಗೆ ದೊರೆಯದಿದ್ದರೆ ಫೆಬ್ರವರಿಗೆ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಸಚಿವ ಸ್ಥಾನ ನೀಡುವ ಪ್ರಕ್ರಿಯೆ ನಿರಂತರವಾಗಿ ಮುಂದೂಡಿಕೆಯಾಗುತ್ತಿರುವ ಬೆನ್ನಲ್ಲೇ ಅಸಮಾಧಾನಗೊಂಡಿರುವ ಬಿಜೆಪಿಯ ಕೆಲ ನೂತನ ಶಾಸಕರು ಕಾಲಮಿತಿಯಲ್ಲಿ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ಹಾಗಾಗಿ ಕೇಂದ್ರ ಗೃಹ ಸಚಿವರಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲೇ ಚರ್ಚಿಸಿ ಒಪ್ಪಿಗೆ ಪಡೆದು ಸಂಪುಟ ವಿಸ್ತರಣೆ ಇಲ್ಲವೇ ಪುನಾರಚಿಸಬೇಕಾದ ಅನಿವಾರ್ಯತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಎದುರಾದಂತಿದೆ.

ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿ ಉಪಚುನಾವಣೆಯಲ್ಲಿ ಜಯಗಳಿಸಿದ ನೂತನ ಶಾಸಕರನ್ನು ಸಚಿವರನ್ನಾಗಿ ಮಾಡಿಯೇ ಸಿದ್ಧ ಎಂದು ಹೇಳಿದ್ದ ಯಡಿಯೂರಪ್ಪ ಅವರು ಅದರಂತೆ ಸಚಿವ ಸ್ಥಾನ ಹಂಚಿಕೆ ಮಾಡಲು ಈವರೆಗೆ ಸಾಧ್ಯವಾಗಿಲ್ಲ. ದೆಹಲಿ ವರಿಷ್ಠರ ಭೇಟಿಗೆ ಕಾಲವಕಾಶ ಕೋರಿದರೂ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ.

ಈ ನಡುವೆ ತುಮಕೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡಿದ್ದ ಸಭೆಯಲ್ಲೇ ಕೇಂದ್ರ ತ್ವರಿತವಾಗಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಯಡಿಯೂರಪ್ಪ ಅವರು ಒತ್ತಾಯ ಮಾಡಿದ್ದು ವರಿಷ್ಠರ ಕೆಂಗಣ್ಣಿಗೆ ಕಾರಣವಾದಂತಿದೆ. ಈ ಬಗ್ಗೆ ಪಕ್ಷದ ವಲಯದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಹಲವು ಬಾರಿ ಮನವಿ ಮಾಡಿದರೂ ಪರಿಹಾರ ಬಿಡುಗಡೆಯಾಗಿಲ್ಲ ಎಂದು ಸಾರ್ವಜನಿಕರ ಎದುರು ಪ್ರಧಾನಿಯವರಿಗೆ ಹೇಳಿರುವುದು ಸರಿಯಲ್ಲ ಎಂಬ ಆಕ್ಷೇಪವೂ ವ್ಯಕ್ತವಾಗಿತ್ತು. ಈ ಕಾರಣಕ್ಕಾಗಿಯವೇ ವರಿಷ್ಠರು ಸಂಪುಟ ವಿಸ್ತರಣೆ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಚರ್ಚೆಗೆ ಆಸಕ್ತಿ ತೋರುತ್ತಿಲ್ಲ ಎಂಬ ಮಾತಿದೆ.

ಇಕ್ಕಟ್ಟಿನಲ್ಲಿ ಯಡಿಯೂರಪ್ಪ: ಸರ್ಕಾರ ರಚನೆಗೆ ಕಾರಣರಾದವರು ಎಂಬ ಕಾರಣಕ್ಕೆ ಯಡಿಯೂರಪ್ಪ ಅವರು ಹಲವು ನೂತನ ಶಾಸಕರಿಗೆ ನಾನಾ ಭರವಸೆಗಳನ್ನು ನೀಡಿದ್ದು, ಅದನ್ನು ಈಡೇರಿಸುವುದೇ ಸದ್ಯ ಸವಾಲಾಗಿ ಪರಿಣಮಿಸಿದಂತಿದೆ. ಉಪಚುನಾವಣೆಯಲ್ಲಿ ಗೆದ್ದ 11 ಅನರ್ಹ ಶಾಸಕರ ಪೈಕಿ ಒಂದಿಬ್ಬರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚಿಂತಿಸಿದ್ದಾರೆ. ಹಾಗೆಯೇ ಪ್ರಭಾವಿ ಖಾತೆಗಳನ್ನು ಆಯ್ದ ಮಂದಿಗೆ ಹಂಚಿಕೆ ಮಾಡಲು ಕಸರತ್ತು ನಡೆಸಿದ್ದಾರೆ. ಜತೆಗೆ ಉಪಮುಖ್ಯಮಂತ್ರಿ ಸ್ಥಾನಗಳನ್ನು ರದ್ದುಪಡಿಸಬೇಕೆಂಬ ಒತ್ತಾಯಕ್ಕೂ ಸ್ಪಂದಿಸುವ ಲೆಕ್ಕಾಚಾರದಲ್ಲಿದಾರೆ. ಹಾಲಿ ಕೆಲ ಸಚಿವರನ್ನು ಕೈಬಿಟ್ಟು ಮೂಲ ಬಿಜೆಪಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮನ್ವಯ ಸಾಧಿಸುವ ಪ್ರಯತ್ನ ನಡೆಸುತ್ತಿರುವುದರಿಂದ ಯಡಿಯೂರಪ್ಪ ತೀವ್ರ ಇಕ್ಕಟ್ಟಿಗೆ ಸಿಲುಕಿದ್ದಾರೆ ಎನ್ನಲಾಗಿದೆ.

ಉಪಚುನಾವಣೆಯಲ್ಲಿ ಗೆದ್ದ ನೂತನ ಶಾಸಕರ ಒತ್ತಡ: ಉಪಚುನಾವಣೆಯಲ್ಲಿ ಗೆದ್ದ ಶಾಸಕರು 24 ಗಂಟೆಯಲ್ಲಿ ಸಚಿವರಾಗಲಿದ್ದಾರೆ ಎಂದು ಹೇಳಿದ್ದ ಯಡಿಯೂರಪ್ಪ ಅವರು ಅದರಂತೆ ಸಚಿವ ಸ್ಥಾನ ಹಂಚಿಕೆ ಮಾಡಲು ಹರಸಾಹಸ ಪಡುವಂತಾಗಿದೆ. ಉಪಚುನಾವಣೆ ಫ‌ಲಿತಾಂಶ ಪ್ರಕಟವಾಗಿ ತಿಂಗಳು ಕಳೆದಿದ್ದು, ಸಂಕ್ರಾಂತಿ ನಂತರವೂ ಸಂಪುಟ ವಿಸ್ತರಣೆಯಾಗುವ ಲಕ್ಷಣ ಕಾಣದ ಕಾರಣ ನೂತನ ಶಾಸಕರು ಕೂಡ ತೀವ್ರ ಒತ್ತಡ ಹೇರಲಾರಂಭಿಸಿದ್ದಾರೆ. ಕೆಲವರು ಇತ್ತೀಚೆಗೆ ದೆಹಲಿಗೆ ತೆರಳಿ ಲಾಬಿ ನಡೆಸುವ ಪ್ರಯತ್ನವನ್ನೂ ನಡೆಸಿದ್ದರು.

ವರಿಷ್ಠರು ಭೇಟಿಗೆ ಅವಕಾಶ ನೀಡದ ಕಾರಣ ಸಂಪುಟ ವಿಸ್ತರಣೆ ಮುಂದೂಡಿಕೆಯಾಗುತ್ತಿದ್ದು, ಇದರಿಂದ ಬೇಸರಗೊಂಡಿರುವ ನೂತನ ಶಾಸಕರು ಕಾಲಮಿತಿಯೊಳಗೆ ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಎರಡು ಬಾರಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಂದೂಡಿಕೆಯಾದಂತಾಗಿದೆ. ಫೆ. 1ರಂದು ಕೇಂದ್ರ ಬಜೆಟ್‌ ಮಂಡನೆಯಾಗಲಿದೆ. ಫೆ. 10ಕ್ಕೆ ದೆಹಲಿ ವಿಧಾನಸಭೆ ಚುನಾವಣೆಯ ಫ‌ಲಿತಾಂಶ ಪ್ರಕಟವಾಗಲಿದೆ. ಹಾಗಾಗಿ ಮಾಸಾಂತ್ಯಕ್ಕೆ ಮುಂದೂಡಿಕೆಯಾದಂತಿರುವ ಸಂಪುಟ ವಿಸ್ತರಣೆ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗುವ ಭೀತಿಯೂ ಸಚಿವಾಕಾಂಕ್ಷಿಗಳನ್ನು ಕಾಡುತ್ತಿದೆ.

18 ಜಿಲ್ಲೆಗೆ ಬಿಜೆಪಿ ಅಧ್ಯಕ್ಷರ ನೇಮಕ
ಬೆಂಗಳೂರು: ರಾಜ್ಯ ಬಿಜೆಪಿಯಿಂದ ವಿವಿಧ ಜಿಲ್ಲೆಗಳ ಅಧ್ಯಕ್ಷರ ನೇಮಕ ಕಾರ್ಯ ಪೂರ್ಣಗೊಂಡಿದ್ದು, ಸಂಘಟನಾತ್ಮಕವಾಗಿ ಮಾಡಿಕೊಂಡಿರುವ 18 ಜಿಲ್ಲೆಗಳ ಅಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಬಿಜೆಪಿ ಸಾಂಸ್ಥಿಕ ಚುನಾವಣೆಗಳ ಪದ್ಧತಿಯಂತೆ ಈ ವರ್ಷ ದೇಶಾದ್ಯಂತ ನಡೆಯುತ್ತಿದೆ. ಅದರಂತೆ ಕರ್ನಾಟಕದ 18 ಸಂಘಟನಾತ್ಮಕ ಜಿಲ್ಲೆಗಳಲ್ಲಿ ನೂತನ ಜಿಲ್ಲಾಧ್ಯಕ್ಷರ ಚುನಾವಣೆ ನಡೆದಿದ್ದು, ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಚುನಾವಣಾ ವೀಕ್ಷಕರಾದ ಪಕ್ಷದ ರಾಷ್ಟ್ರೀಯ ಸಾಂಸ್ಥಿಕ ಚುನಾವಣೆಗಳ ಸಹ ಉಸ್ತುವಾರಿ ಸಿ.ಟಿ.ರವಿ, ರಾಜ್ಯ ಉಪಾಧ್ಯಕ್ಷರಾದ ಎಂ.ಬಿ.ಭಾನುಪ್ರಕಾಶ್‌, ನಿರ್ಮಲ್‌ಕುಮಾರ್‌ ಸುರಾನ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ, ರಾಜ್ಯ ಸಾಂಸ್ಥಿಕ ಚುನಾವಣೆಗಳ ಉಪ ಚುನಾವಣಾಧಿಕಾರಿ ಹಾಲಪ್ಪ ಆಚಾರ್‌ ಉಪಸ್ಥಿತಿಯಲ್ಲಿ ಅಂತಿಮ ಆಯ್ಕೆ ಪೂರ್ಣಗೊಂಡಿದೆ.

ನೂತನ ಅಧ್ಯಕ್ಷರ ಪಟ್ಟಿ: ಹಾಸನಕ್ಕೆ ಎಚ್‌.ಕೆ. ಸುರೇಶ್‌, ಕೊಡಗು- ರಾಬೀನ್‌ ದೇವಯ್ಯ, ದಕ್ಷಿಣ ಕನ್ನಡ- ಸುದರ್ಶನ್‌ ಮೂಡಬಿದರೆ, ಚಿಕ್ಕಮಗಳೂರು- ಎಚ್‌.ಸಿ ಕಲ್ಮರುಡಪ್ಪ, ಶಿವಮೊಗ್ಗ- ಟಿ.ಡಿ.ಮೇಘ ರಾಜ್‌, ಹಾವೇರಿ- ಸಿದ್ದರಾಜ್‌ ಕಲಕೋಟಿ, ಗದಗ- ಮೋಹನ್‌ ಮಾಳಶೆಟ್ಟಿ, ಬೆಳಗಾವಿ ನಗರ- ಶಶಿ ಪಾಟೀಲ್‌, ಬೆಳಗಾವಿ ಗ್ರಾಮಾಂತರ- ಸಂಜಯ್‌ ಪಾಟೀಲ್‌, ಚಿಕ್ಕೋಡಿ- ಡಾ. ರಾಜೇಶ್‌ ನಿರಲಿ, ವಿಜಯ ಪುರ- ಆರ್‌.ಎಸ್‌. ಪಾಟೀಲ್‌, ಕಲಬುರಗಿ ಗ್ರಾಮಾಂತರ- ಶಿವರಾಜ ಪಾಟೀಲ್‌ ರದ್ದೆವಾಡಿ, ಯಾದಗಿರಿ- ಶರಣ ಭೂಪಾಲ್‌ ರೆಡ್ಡಿ, ಕೊಪ್ಪಳ- ದೊಡ್ಡನ ಗೌಡ ಎಚ್‌. ಪಾಟೀಲ್‌, ಚಿತ್ರದುರ್ಗ- ಎ.ಮುರುಳಿ, ಚಿಕ್ಕಬಳ್ಳಾಪುರ- ರಾಮಲಿಂಗಪ್ಪ, ಕೋಲಾರ- ಡಾ. ವೇಣುಗೋಪಾಲ್‌ ಹಾಗೂ ಬೆಂಗಳೂರು ಉತ್ತರ ಜಿಲ್ಲೆಗೆ ಬಿ.ನಾರಾಯಣ ವರನ್ನು ಆಯ್ಕೆ ಮಾಡಲಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.