ಸಂಪುಟ ವಿಸ್ತರಣೆ ಸನ್ನಿಹಿತ: ಲಾಬಿ ಜೋರು

Team Udayavani, Aug 15, 2019, 3:08 AM IST

bjp-logo

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಮೂರು ವಾರ ಸಮೀಪಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗುರುವಾರ ರಾತ್ರಿ ದೆಹಲಿಗೆ ತೆರಳಿ, ವರಿಷ್ಠರ ಭೇಟಿ ಸಾಧ್ಯತೆಯಿದ್ದು, ಸಂಪುಟ ವಿಸ್ತರಣೆ ಕಾಲ ಸನ್ನಿಹಿತವಾದಂತಾಗಿದೆ. ಮೊದಲ ಹಂತದಲ್ಲಿ 15 ಸಚಿವರು ಆಯ್ಕೆಯಾಗುವ ಸಾಧ್ಯತೆ ಇದ್ದು, ಹಿರಿಯ- ಅನುಭವಿ ಶಾಸಕರ ಜತೆ ಯುವ- ಹೊಸ ಶಾಸಕರಿಗೂ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.

ವರಿಷ್ಠರ ಒಪ್ಪಿಗೆ ದೊರೆತರೆ ಭಾನುವಾರ ಇಲ್ಲವೇ ಸೋಮವಾರ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಂಭವವಿದೆ. ಮೊದಲ ಹಂತದಲ್ಲಿ ಪ್ರಭಾವಿ ಹಾಗೂ ದೈನಂದಿನ ಆಡಳಿತಕ್ಕೆ ಪೂರಕವಾದ ಖಾತೆ ಹಂಚಿಕೆಯಾಗುವ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ಸನ್ನಿಹಿತವಾಗುತ್ತಿದ್ದಂತೆ ಸಚಿವಾಕಾಂಕ್ಷಿಗಳು ಸ್ಥಾನ ಗಿಟ್ಟಿಸಿಕೊಳ್ಳಲು ಲಾಬಿ ತೀವ್ರಗೊಳಿಸಿದ್ದಾರೆ. ಎಲ್ಲವೂ ಪಕ್ಷದ ವರಿಷ್ಠರ ನಿಲುವಿನ ಮೇಲೆ ಆಧಾರಿತವಾಗಿದೆ.

ರಾಜ್ಯ ನಾಯಕರು ಸಂಪುಟ ವಿಸ್ತರಣೆ ಬಗ್ಗೆ ಲೆಕ್ಕಾಚಾರದಲ್ಲಿ ತೊಡಗಿದ್ದು, ತೆರೆಮರೆಯಲ್ಲೇ ಕಸರತ್ತು ನಡೆದಿದೆ. ಇನ್ನೊಂದೆಡೆ ಹೈಕಮಾಂಡ್‌ ಕೂಡ ತನ್ನದೇ ಮೂಲಗಳ ಪ್ರಕಾರ ಮಾಹಿತಿ ಸಂಗ್ರಹಿಸಿದೆ. ಹೀಗಾಗಿ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಚರ್ಚಿಸಿ ಸಚಿವರನ್ನು ಅಂತಿಮಗೊಳಿಸಲಿದ್ದು, ತೀವ್ರ ಕುತೂಹಲ ಮೂಡಿದೆ.

ಮೊದಲ ಹಂತದಲ್ಲಿ 15 ಸಚಿವರ ಆಯ್ಕೆ: ಮೊದಲ ಹಂತದಲ್ಲಿ 15 ಸಚಿವರ ಆಯ್ಕೆ ಪ್ರಯತ್ನ ನಡೆಯಲಿದೆ. ಗೃಹ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಜಲ ಸಂಪನ್ಮೂಲ, ನಗರಾಭಿವೃದ್ಧಿ, ಪೌರಾಡಳಿತ, ಆಹಾರ ಮತ್ತು ನಾಗರಿಕ ಸರಬ ರಾಜು, ಸಮಾಜ ಕಲ್ಯಾಣ ಸೇರಿದಂತೆ ಪ್ರಭಾವಿ ಖಾತೆ ಹಂಚಿಕೆಯಾಗಲಿದೆ. ಬಿಜೆಪಿ ಸರ್ಕಾರ ರಚನೆಯಾಗಿ 20 ದಿನ ಕಳೆಯುತ್ತಿದ್ದು, ಮುಖ್ಯ ಮಂತ್ರಿಗಳೊಬ್ಬರೇ ಕಾರ್ಯ ನಿರ್ವಹಿಸು ತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ವರ್ಚಸ್ವಿ ಮುಖಗಳಿಗೆ ಆದ್ಯತೆ: ಉತ್ತಮ ಆಡಳಿತದ ಜತೆಗೆ ಸರ್ಕಾರ ಹಾಗೂ ಪಕ್ಷದ ಬಗ್ಗೆ ವರ್ಚಸ್ಸು ಹೆಚ್ಚಿಸುವುದತ್ತಲೂ ಬಿಜೆಪಿ ವರಿಷ್ಠರು ಗಮನ ಹರಿಸಿದ್ದಾರೆ. ಆ ಹಿನ್ನೆಲೆಯಲ್ಲಿ ವಿವಾದಗಳಿಂದ ದೂರವಿರುವ, ಉತ್ತಮ ವ್ಯಕ್ತಿತ್ವ- ವರ್ಚಸ್ಸು ಹೊಂದಿರುವ ಶಾಸಕರನ್ನೇ ಗುರುತಿಸಿ ಅವಕಾಶ ನೀಡುವ ಸಾಧ್ಯತೆ ಇದೆ. ಹಿಂದಿನ ಸರ್ಕಾರಗಳಿಗಿಂತಲೂ ಭಿನ್ನ ರೀತಿ ಆಡಳಿತ ನೀಡಲು ಸಮರ್ಥರನ್ನೇ ಗುರುತಿಸಿ ಸಚಿವರನ್ನು ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿವೆ.

ನೆರೆ ಪರಿಹಾರ ಕಾರ್ಯಕ್ಕೂ ಒತ್ತು: ರಾಜ್ಯದಲ್ಲಿ ಪ್ರಸ್ತುತ ಪ್ರವಾಹ ಉಂಟಾಗಿ ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಈ ವೇಳೆ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಗಳನ್ನು ಕೈಗೊಳ್ಳುವ ಜತೆಗೆ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಬೇಕಾದ ಅನಿವಾ ರ್ಯತೆ ಇದೆ. ಹಾಗಾಗಿ ಪ್ರತಿಕೂಲ ಪರಿಸ್ಥಿತಿ ನಿರ್ವಹಿಸಲು ಸಂಪುಟದಲ್ಲಿ ಸಮರ್ಥರಿಗೆ ಆದ್ಯತೆ ಸಿಗುವ ಲೆಕ್ಕಾಚಾರವಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಗುರುವಾರ ದೆಹಲಿಗೆ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಗುರುವಾರ ರಾತ್ರಿ ದೆಹಲಿಗೆ ತೆರಳಲಿದ್ದು, ಶುಕ್ರವಾರ ಪ್ರಧಾನಿ ಸೇರಿದಂತೆ ಕೇಂದ್ರದ ಹಲವು ಸಚಿವರನ್ನು ಭೇಟಿಯಾ ಗಲಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿ ದಂತೆ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ. ಸಂಪುಟ ವಿಸ್ತರಣೆಗೆ ಹೈಕಮಾಂಡ್‌ ಒಂದೆರಡು ದಿನದಲ್ಲಿ ಹಸಿರು ನಿಶಾನೆ ತೋರುವ ವಿಶ್ವಾಸ ವಿದೆ. ರಾಜ್ಯ ನಾಯ ಕರು ಭಾನುವಾರ ಇಲ್ಲವೇ ಸೋಮವಾರ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಸುವ ಬಗ್ಗೆ ಚಿಂತಿಸಿದ್ದಾರೆ.

ಸಚಿವ ಸ್ಥಾನಕ್ಕೆ ಸಕಲ ಪ್ರಯತ್ನ: ಸಂಪುಟ ವಿಸ್ತರಣೆ ಸನ್ನಿಹಿತವಾಗುತ್ತಿದ್ದಂತೆ ಆಕಾಂಕ್ಷಿಗಳು ಸಚಿವ ಸ್ಥಾನಕ್ಕಾಗಿ ಲಾಬಿ ತೀವ್ರಗೊಳಿಸಿದ್ದಾರೆ. ಕೆಲವರು ಸಿಎಂ ಯಡಿಯೂರಪ್ಪ ಅವರ ಬೆನ್ನಿಗೆ ಬಿದ್ದಿದ್ದರೆ ಇನ್ನೂ ಕೆಲವರು ದೆಹಲಿ ಮಟ್ಟದಲ್ಲಿ ಪ್ರಭಾವ ಬಳಸಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. ಕೆಲವರು ಸಚಿವ ಸ್ಥಾನದ ಜತೆಗೆ ಇಂತದ್ದೇ ಖಾತೆ ನೀಡಿದರೆ ಸೂಕ್ತ ಎಂದು ಹೇಳಲಾರಂಭಿಸಿದ್ದಾರೆ.

ಹಿಂದೆ ನಿರ್ವಹಿಸಿದ ಖಾತೆ ನೀಡಿದರೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸುವ ವಿಶ್ವಾಸವನ್ನು ಕೆಲ ಹಿರಿಯ ಹಾಗೂ ಪ್ರಭಾವಿ ಸಮುದಾಯಗಳ ಶಾಸಕರು ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಉಸ್ತುವಾರಿ ಜಿಲ್ಲೆ ಸೇರಿದಂತೆ ನಿರೀಕ್ಷೆಯಲ್ಲಿರುವ ಖಾತೆಯನ್ನೇ ಹಂಚಿಕೆ ಮಾಡುವಂತೆ ದುಂಬಾಲು ಬಿದ್ದಿದ್ದಾರೆ. ಜಾತಿ, ಪ್ರಾದೇಶಿಕತೆ, ಸಂಘಟನೆ ಇತರೆ ಅಂಶಗಳ ಆಧಾರದ ಮೇಲೆ ಸಚಿವ ಸ್ಥಾನಕ್ಕೆ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.

* ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.