ಪಕ್ಷ, ಚಿಹ್ನೆ ಬದಲಾದರೂ ಅಭ್ಯರ್ಥಿಗಳು ಒಂದೇ!

Team Udayavani, Nov 25, 2019, 3:08 AM IST

paksha

ಬೆಳಗಾವಿ: ಚುನಾವಣೆಗೆ ನಿಲ್ಲಲೇಬೇಕು. ಶಾಸಕನಾಗಿ ಆಯ್ಕೆಯಾಗಬೇಕೆಂಬ ಗುರಿಯೊಂದಿಗೆ ಪಕ್ಷವನ್ನೇ ಬದಲಾಯಿಸಿದ ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಕಾಗೆ ಅವರಿಗೆ ಇದು ಎರಡನೇ ಉಪ ಚುನಾವಣೆ. 1957ರಿಂದ ಇದುವರೆಗೆ ನಡೆದ ಚುನಾವಣೆಗಳ ಇತಿಹಾಸದಲ್ಲಿ ಕಾಗವಾಡ ಕ್ಷೇತ್ರಕ್ಕೆ ಇದು ಎರಡನೇ ಉಪ ಚುನಾವಣೆ.

ಮೊದಲ ಬಾರಿ ಉಪ ಚುನಾವಣೆ ನಡೆದಿದ್ದು 2000ರಲ್ಲಿ. 1999ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಪಾಸಗೌಡ ಅಪ್ಪಗೌಡ ಪಾಟೀಲ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ 2000ರಲ್ಲಿ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಜೆಡಿಯುನಿಂದ ಸ್ಪರ್ಧಿಸಿದ್ದ ರಾಜು ಕಾಗೆ ಮೊದಲ ಬಾರಿಗೆ ವಿಧಾನಸಭೆ ಮೆಟ್ಟಿಲು ಹತ್ತಿದ್ದರು. ರಾಜ್ಯದ ರಾಜಕೀಯ ಬದಲಾವಣೆಯಿಂದಾಗಿ 2ನೇ ಬಾರಿಗೆ ಕಾಗವಾಡದ ಮತದಾರರು ಉಪಚುನಾವಣೆ ಎದುರಿಸುವಂತಾಗಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿ ಸೋತಿದ್ದ ರಾಜು ಕಾಗೆ ಉಪಚುನಾವಣೆಯಲ್ಲಿಯೂ ತಮಗೆ ಬಿಜೆಪಿ ಟಿಕೆಟ್‌ ಸಿಗುತ್ತದೆ ಎಂದು ಭಾವಿಸಿ ದ್ದರು. ಆದರೆ, ಬಿಜೆಪಿ ಸರ್ಕಾರ ರಚನೆಗಾ ಗಿಯೇ ಮೈತ್ರಿ ಸರ್ಕಾರದಿಂದ ರಾಜೀನಾಮೆ ನೀಡಿ ಹೊರ ಬಂದ ಶಾಸಕರಿಗೆ ಬಿಜೆಪಿ ಟಿಕೆಟ್‌ ಎಂದು ಮಾತು ಕೊಟ್ಟಿದ್ದರಿಂದ ರಾಜು ಕಾಗೆ ಅನಿವಾರ್ಯವಾಗಿ ಕಾಂಗ್ರೆಸ್‌ ಸೇರಿ ಮತ್ತೆ ಚುನಾವಣೆಗೆ ಸಿದ್ಧರಾಗಿದ್ದಾರೆ.

ಕಾಗವಾಡದ ಚುನಾವಣಾ ಇತಿಹಾಸ ಮೆಲುಕು ಹಾಕಿದರೆ ಮೊದಲು ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರ 2004ರಿಂದ ಸತತ ಮೂರು ಚುನಾವಣೆಗಳಲ್ಲಿ ಬಿಜೆಪಿ ವಶವಾಗಿತ್ತು. 2000ರ ಉಪಚುನಾವಣೆ ಸೇರಿ ಸತತ ನಾಲ್ಕು ಸಲ ಈ ಕ್ಷೇತ್ರದ ಮೇಲೆ ರಾಜು ಕಾಗೆ ಹಿಡಿತ ಸಾಧಿಸಿದ್ದರು.

ವ್ಯಕ್ತಿ ನೋಡಿ ಮತ: ಇದುವರೆಗೆ 13 ಚುನಾವಣೆಗಳನ್ನು ಕಂಡಿರುವ ಕಾಗವಾಡ ಆರು ಬಾರಿ ಕಾಂಗ್ರೆಸ್‌ಗೆ ಒಲಿದಿದೆ. 3 ಬಾರಿ ಬಿಜೆಪಿ ವಶ ಮಾಡಿಕೊಂಡಿದೆ. ಕೆಲವು ಬಾರಿ ಇಲ್ಲಿಯ ಮತದಾರರು ವ್ಯಕ್ತಿಯನ್ನು ನೋಡಿ ಮಣೆ ಹಾಕಿದ್ದಾರೆ. 1967ರ ಚುನಾವಣೆಯಲ್ಲಿ ಕಾಂಗ್ರೆಸ್‌ದಿಂದ ಸ್ಪರ್ಧಿಸಿ ಜಯಗಳಿಸಿದ್ದ ಚಂಪಾ ಬಾಯಿ ಬೋಗಲೆ ಈ ಕ್ಷೇತ್ರದ ಏಕೈಕ ಮಹಿಳಾ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

1962ರಿಂದ 1978ರವರೆಗೆ ಕಾಗವಾಡ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. 1983ರಲ್ಲಿ ವಿ.ಎಲ್‌. ಪಾಟೀಲ ಜನತಾಪಕ್ಷ ದಿಂದ ಆಯ್ಕೆಯಾಗುವ ಮೂಲಕ ಕಾಂಗ್ರೆಸ್‌ ಅಧಿಪತ್ಯಕ್ಕೆ ಅಂತ್ಯ ಹಾಡಿದರು. 1983ರಿಂದ 2000ರ ಉಪಚುನಾವಣೆಯ ವರೆಗೆ ಈ ಕ್ಷೇತ್ರ ಕಾಂಗ್ರೆಸ್‌ ಹಾಗೂ ಜನತಾದಳದ ಮಧ್ಯೆ ಹೊಯ್ದಾಡಿತು. 2004ರ ಚುನಾವಣೆ ಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ ರಾಜು ಕಾಗೆ 3 ಸಾವಿರ ಮತಗಳ ಅಂತರ ದಿಂದ ಕಾಂಗ್ರೆಸ್‌ನ ಕಿರಣ ಪಾಟೀಲ ವಿರುದ್ಧ ಜಯಗಳಿಸುವ ಮೂಲಕ ಇದು ಬಿಜೆಪಿ ಭದ್ರಕೋಟೆಯಾಗುವಂತೆ ಮಾಡಿದರು.

18 ತಿಂಗಳ ಬಳಿಕ ಮತ್ತೆ ಕುಸ್ತಿ: 2018ರಲ್ಲಿ ನಡೆದ ಚುನಾವಣೆಯಲ್ಲಿ ಶ್ರೀಮಂತ ಪಾಟೀಲ ಮೂಲಕ ಮತ್ತೆ ಈ ಕ್ಷೇತ್ರ ಕಾಂಗ್ರೆಸ್‌ ಪಾಲಾದರೂ ಅದು ಬಹಳ ಕಾಲ ಉಳಿಯಲಿಲ್ಲ. ಬದಲಾದ ರಾಜಕೀಯದ ಚದುರಂಗ ದಾಟದಲ್ಲಿ ಕಾಂಗ್ರೆಸ್‌ ಶಾಸಕರೇ ಬಿಜೆಪಿ ಮನೆ ಸೇರಿದರು. ಅದರ ಫಲವಾ ಗಿಯೇ ಈಗ ಉಪ ಚುನಾವಣೆ ನಡೆಯುತ್ತಿದೆ. 18 ತಿಂಗಳ ಹಿಂದೆ ಪರ ಸ್ಪರ ಎದುರಾಳಿಗಳಾಗಿದ್ದ ಶ್ರೀಮಂತ ಪಾಟೀಲ ಹಾಗೂ ರಾಜು ಕಾಗೆ ಈಗ ಮತ್ತೆ ಎದುರಾಳಿಯಾಗಿದ್ದಾರೆ. ಅದರೆ ಅವರ ಚಿಹ್ನೆ ಹಾಗೂ ಪಕ್ಷಗಳು ಬದ ಲಾಗಿವೆ. ಮತದಾರರು ಚಿಹ್ನೆ ನೋಡಿಯೋ ಅಥವಾ ಅಭ್ಯರ್ಥಿ ಯನ್ನು ನೋಡಿ ಮತಹಾಕುವರೇ ಎಂಬ ಕುತೂಹಲ ಕ್ಷೇತ್ರದಲ್ಲಿದೆ.

* ಕೇಶವ ಆದಿ

ಟಾಪ್ ನ್ಯೂಸ್

ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ

ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ

ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ: ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು

ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು

ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ

ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ

ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ

ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ

ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು

ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು

ನಿರಂತರ ಮಳೆಗೆ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ; ಶೀಘ್ರ ಭರ್ತಿಯಾಗಲಿದೆ ಯಗಚಿ ಜಲಾಶಯ

ನಿರಂತರ ಮಳೆಗೆ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ; ಶೀಘ್ರ ಭರ್ತಿಯಾಗಲಿದೆ ಯಗಚಿ ಜಲಾಶಯ

ಜೂ. 21: ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ

ಜೂ. 21: ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಲ್ಲ ಮಕ್ಕಳಿಗೂ ಸರಕಾರಿ ಆಂಗ್ಲ ಮಾಧ್ಯಮ ಶಿಕ್ಷಣ

ಎಲ್ಲ ಮಕ್ಕಳಿಗೂ ಸರಕಾರಿ ಆಂಗ್ಲ ಮಾಧ್ಯಮ ಶಿಕ್ಷಣ

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ

ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ

ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ: ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು

ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು

ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ

ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ

ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ

ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ

ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು

ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.