ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇಗುಲ : ಭಕ್ತರ ದರ್ಶನಕ್ಕೆ ಅವಕಾಶ
Team Udayavani, Jun 8, 2020, 2:53 PM IST
ತೆಕ್ಕಟ್ಟೆ : ಜಗತ್ತಿನಾದ್ಯಂತ ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್ 19 ವೈರಸ್ ತಡೆಗಟ್ಟಲು ಇಡೀ ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸುಮಾರು ಎರಡೂವರೆ ತಿಂಗಳುಗಳ ನಂತರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು , ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜೂ.8 ರಂದು ಸರಕಾರ ಆದೇಶದಂತೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮುಂಜಾನೆಯಿಂದಲೇ ನಂಬಿದ ಭಕ್ತರು ಶ್ರೀ ಸನ್ನಿಧಿಗೆ ಆಗಮಿಸಿ ದರ್ಶನ ಪಡೆದರು.