

Team Udayavani, Oct 6, 2020, 7:16 PM IST
ಚಿಕ್ಕಬಳ್ಳಾಪುರ : ಉತ್ತರಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಗಲ್ಲಿಗೇರಿಸಿ ಉತ್ತರಪ್ರದೇಶದ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಕ.ದ.ಸಂ.ಸ. ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್ ಅವರ ನೇತೃತ್ವದಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ದೇಶದಲ್ಲಿ ದಲಿತರ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆ ಹೆಚ್ಚಾಗುತ್ತಿದೆ ಕೇಂದ್ರ ಸರ್ಕಾರ ದಲಿತರಿಗೆ ರಕ್ಷಣೆ ನೀಡುವುದರಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕ.ದ.ಸಂ.ಸ. ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್ ಮಾತನಾಡಿ ಉತ್ತರ ಪ್ರದೇಶದಲ್ಲಿ ಸಿ.ಎಂ, ಯೋಗಿಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ದಲಿತರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಆ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮತ್ತು ಅತ್ಯಾಚಾರ ಹೆಚ್ಚಾಗುತ್ತಿದೆ. ಮನಿಷಾ ವಾಲ್ಮೀಕಿ ಎಂಬ ದಲಿತ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿಗಳನ್ನು ಗಲ್ಲಿಗೇರಿಸಿ ದಲಿತ ಹೆಣ್ಣು ಮಗುವಿಗೆ ರಕ್ಷಣೆ ನೀಡುವುದರಲ್ಲಿ ವಿಫಲವಾಗಿರುವ ಪೋಲೀಸ್ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ ಉತ್ತರಪ್ರದೇಶ ಸರ್ಕಾರವನ್ನು ವಜಾಗೊಳಿಸಬೇಕೆಂದು ರಾಷ್ಟ್ರಪತಿಗಳನ್ನು ಒತ್ತಾಯಿಸಿದರು.
ಇದನ್ನೂ ಓದಿ :ಬೈಕಿಗೆ ಕಬ್ಬಿನ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಶಿರಸ್ತೆದಾರ್ ಮಂಜುನಾಥ್ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಕದ.ಸಂ.ಸ. ಕಾರ್ಯಕರ್ತರು ಮನವಿಪತ್ರ ಸಲ್ಲಿಸಿ ಉತ್ತರ ಪ್ರದೇಶದಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸಿ ಬಿಜೆಪಿ ಸರ್ಕಾರಗಳ ವಿರುಧ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ಕದ.ಸಂ.ಸ. ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಮ್ಮ, ತಾಲೂಕು ಸಂಚಾಲಕ ಮುನಿಆಂಜಿನಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ತಿರುಮಲೇಶ್, ಜಿಲ್ಲಾ ಸಮಿತಿ ಸದಸ್ಯ ಗೊರ್ಲಪ್ಪ, ಸಂಘಟನಾ ಸಂಚಾಲಕರಾದ ಸುಬ್ರಮಣಿ, ಚಿಕ್ಕನರಸಿಂಹಪ್ಪ, ಸುರೇಶ್, ಮುತ್ತಕದಹಳ್ಳಿ ನಾರಾಯಣಸ್ವಾಮಿ, ಆನಂದ್, ಅಂಭಿಗಾನಹಳ್ಳಿ ಆಂಜಿನಪ್ಪ, ನಾಗರಾಜ್, ರತ್ನಮ್ಮ, ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.
Ad
ಯಲ್ಲಾಪುರ: ನಟೋರಿಯಸ್ ಆರೋಪಿ ಕಾಲಿಗೆ ಪೊಲೀಸರ ಗುಂಡು
ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ: ನಿತಿನ್ ಗಡ್ಕರಿ
ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲ: ಸಿಎಂ ಸಿದ್ದರಾಮಯ್ಯ
“ಸಿಗಂದೂರು ಚೌಡೇಶ್ವರಿ’ ಸೇತುವೆ ಲೋಕಾರ್ಪಣೆ; ದ್ವೀಪ ಜನರ 70 ವರ್ಷಗಳ ಕನಸು ಸಾಕಾರ
Hyderabad; ಕಲಬೆರಕೆ ಸೇಂದಿ ಸೇವಿಸಿದ 7 ಮಂದಿ ಮೃ*ತ್ಯು, ಹಲವರು ಅಸ್ವಸ್ಥ
You seem to have an Ad Blocker on.
To continue reading, please turn it off or whitelist Udayavani.