ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ 8 ಕೆಜಿ ಗುಟ್ಕಾ-ಸಿಗರೇಟ್ ವಶ
Team Udayavani, Jan 13, 2021, 9:29 PM IST
ಚಿಕ್ಕಬಳ್ಳಾಪುರ : ಜಿಲ್ಲಾ ಕಾರಾಗೃಹದ ಮೇಲೆ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿ ಜೈಲಿನಲ್ಲಿ ಬೀಡಿ-ಸಿಗರೇಟ್, ಪಾನ್‍ಪರಾಗ್ ಗುಟ್ಕಾ ಇನ್ನಿತರೆ ಸುಮಾರು 8 ಕೆಜಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ಎಸ್ಪಿ ಅವರೊಂದಿಗೆ ಡಿವೈಎಸ್ಪಿ ಕೆ.ರವಿಶಂಕರ್ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿಗಳ ತಂಡ ಕಾರಾಗೃಹದ ಮೇಲೆ ದಾಳಿ ನಡೆಸಿ ಜೈಲಿನಲ್ಲಿ ಬೀಡಿ-ಸಿಗರೇಟ್ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಂಡು ಮಹಜರು ನಡೆಸಿ ಕಾರಾಗೃಹ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ ಜಿಲ್ಲಾ ಕಾರಾಗೃಹ ಖೈದಿಗಳಿಗೆ ಮೋಜು ಮಸ್ತಿ ಮಾಡಲು ಕೇಂದ್ರವಾಗಿ ಮಾರ್ಪಾಟಿದೆಯೆಂದು ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ಪೋಲಿಸರು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಶಿರಾಡಿ ಘಾಟಿಯಲ್ಲಿ ಖ್ಯಾತ ತುಳು ಚಿತ್ರ ನಟ ರೂಪೇಶ್ ಶೆಟ್ಟಿ ಕಾರು ಅಪಘಾತ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444